ಲಾರಿ ಢಿಕ್ಕಿ: ಪಾದಚಾರಿ ಮೃತ್ಯು

ಬೈಂದೂರು, ಸೆ.16: ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟಲು ನಿಂತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಯಡ್ತರೆ ಜಂಕ್ಷನ್ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೆ.15ರಂದು ಸಂಜೆ ವೇಳೆ ನಡೆದಿದೆ.
ಮೃತರನ್ನು ನಾಗ ಮೊಗವೀರ ಎಂದು ಗುರುತಿಸಲಾಗಿದೆ. ಇವರು ರಸ್ತೆ ದಾಟಲು ನಿಂತುಕೊಂಡಿದ್ದಾಗ ಕುಂದಾಫುರ ಕಡೆಯಿಂದ ಬೈಂದೂರು ಕಡೆಗೆ ಹೋಗುತ್ತಿದ್ದ ಲಾರಿ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ರಸ್ತೆಯ ಮೇಲೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡ ನಾಗ ಮೊಗವೀರ, ಚಿಕಿತ್ಸೆ ಫಲ ಕಾರಿಯಾಗದೆ ಉಡುಪಿ ಜಿಲ್ಲಾಸ್ಪತ್ರೆ ಯಲ್ಲಿ ಮೃತಪಟ್ಟರು. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





