ಸೆ.18ರಂದು ಬೀಚ್ ಸ್ವಚ್ಛತಾ ಕಾರ್ಯಕ್ರಮ

ಉಡುಪಿ, ಸೆ.16: ಕರಾವಳಿ ಕಾವಲು ಪೊಲೀಸ್ ವತಿಯಿಂದ ಸೆ.18ರಂದು ಬೆಳಗ್ಗೆ 6.30ರಿಂದ 8.30ರವರೆಗೆ ಮಲ್ಪೆ ಪಡುಕೆರೆ ಬೀಚ್‌ನಲ್ಲಿ ಬೀಚ್ ಸ್ವಚ್ಛತಾ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮದಲ್ಲಿ ಸಂತೆಕಟ್ಟೆ ಧನ್ವಂತರಿ ನರ್ಸಿಂಗ್ ಕಾಲೇಜು, ಮಣಿಪಾಲ ಮುನಿಯಾಲು ಆಯುರ್ವೇದ ಕಾಲೇಜು ಇವುಗಳ ಎನ್ನೆಸ್ಸೆಸ್ ಘಟಕ ಮತ್ತು ಉಡುಪಿ ಇನ್‌ಸ್ಟಿಟ್ಯೂಟ್ ಆಫ್ ಹೋಟೆಲ್ ಟೂರಿಸಂ ಸೈನ್ಸ್ ಕಾಲೇಜುಗಳ ವಿದ್ಯಾರ್ಥಿಗಳು, ಕರಾವಳಿ ಕಾವಲು ಪೊಲೀಸ್ ಮಂಗಳೂರು, ಹೆಜಮಾಡಿ, ಮಲ್ಪೆ, ಗಂಗೊಳ್ಳಿ ಮತ್ತು ಭಟ್ಕಳ ಠಾಣೆಗಳ ಪೊಲೀಸ್ ಸಿಬ್ಬಂದಿಗಳು ಹಾಗೂ ಕರಾವಳಿ ನಿಯಂತ್ರಣ ದಳದ ಸಿಬ್ಬಂದಿಗಳು ಭಾಗವಹಿಸಲಿದ್ದಾರೆ.
ಸಾರ್ವಜನಿಕರು ಸಹ ಬೀಚ್ ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿ, ಯಶಸ್ವಿ ಗೊಳಿಸುವಂತೆ ರಾಜ್ಯ ಕರಾವಳಿ ಕಾವಲು ಪೊಲೀಸ್ ಅಧೀಕ್ಷಕ ಅಬ್ದುಲ್ ಅಹ್ಮದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





