Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಫಾಯಿ ಕರ್ಮಚಾರಿಗಳಿಗೆ ವಿದ್ಯುತ್ ಚಾಲಿತ...

ಸಫಾಯಿ ಕರ್ಮಚಾರಿಗಳಿಗೆ ವಿದ್ಯುತ್ ಚಾಲಿತ ದ್ವಿಚಕ್ರ ವಾಹನ ವಿತರಿಸಿದ ಮುಖ್ಯಮಂತ್ರಿ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ16 Sept 2022 9:50 PM IST
share
ಸಫಾಯಿ ಕರ್ಮಚಾರಿಗಳಿಗೆ ವಿದ್ಯುತ್ ಚಾಲಿತ ದ್ವಿಚಕ್ರ ವಾಹನ ವಿತರಿಸಿದ ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು, ಸೆ.16: ದ್ವಿಚಕ್ರ ವಾಹನಗಳ ಯೋಜನೆ ಹತ್ತು ಮಹಾನಗರ ಪಾಲಿಕೆಗಳಿಗೆ ವಿಸ್ತರಣೆ ಆಗಿದೆ. ಒಟ್ಟು 600 ಜನರಿಗೆ ಒದಗಿಸಲಾಗುತ್ತಿದ್ದು, ಮೊದಲ ಹಂತದಲ್ಲಿ 400 ಜನರಿಗೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. 

ಶುಕ್ರವಾರ ವಿಧಾನಸೌಧದ ಬೃಹತ್ ಮೆಟ್ಟಿಲುಗಳ ಬಳಿ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಫಾಯಿ ಕರ್ಮಚಾರಿಗಳಿಗೆ ವಿದ್ಯುತ್ ಚಾಲಿತ ದ್ವಿಚಕ್ರ ವಾಹನಗಳನ್ನು ವಿತರಿಸಿ ಅವರು ಮಾತನಾಡಿದರು. 

ಸಫಾಯಿ ಕರ್ಮಚಾರಿಗಳಿಗೂ ಎಲ್ಲ ವ್ಯವಸ್ಥೆಗಳನ್ನು ಕಲ್ಪಿಸಿ ಅವರ ಬದುಕಿಗೆ ಶಕ್ತಿಯನ್ನು ತುಂಬುವ, ಸೌಲಭ್ಯಗಳನ್ನು ಒದಗಿಸುವ ಮೂಲಕ ಅವರ ಬದುಕನ್ನು ನಿರಾಳ ಮಾಡುವ ಅವಶ್ಯಕತೆ ಇದೆ. ಅವರು ಮಾಡುತ್ತಿರುವ ಕೆಲಸ ಅತ್ಯಂತ ಪ್ರಮುಖ ಕೆಲಸ. ನಾವು ಸೃಷ್ಟಿ ಮಾಡುವ ಕಸವನ್ನು ಪ್ರತಿನಿತ್ಯ ನಿರಂತರವಾಗಿ ದಣಿವಿಲ್ಲದೆ ಸ್ವಚ್ಛ ಮಾಡುತ್ತಿದ್ದಾರೆ. ಆ ಕಾಯಕವನ್ನು ಗುರುತಿಸಿ ಪುರಸ್ಕರಿಸುವ ಕಾರ್ಯಕ್ರಮ ಇದಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು. 

ಈ ಉತ್ತಮ ಕೆಲಸ ಮಾಡಿದ ನಿಗಮದ ಅಧ್ಯಕ್ಷರು ಹಾಗೂ ಸದಸ್ಯರು ಹಾಗೂ ಪದಾಧಿಕಾರಿಗಳಿಗೆ ಅಭಿನಂದನೆಗಳನ್ನು ತಿಳಿಸುತ್ತೇನೆ. ವಿದೇಶದಲ್ಲಿ ಕರ್ಮಚಾರಿಗಳು ಕಾರುಗಳಲ್ಲಿ ಓಡಾಡುವುದನ್ನು ಕೇಳಿದ್ದೆವು. ಈಗ ಇದು ನಮ್ಮ ದೇಶದಲ್ಲಿಯೂ ಆಗುತ್ತಿದೆ. ಈಗ ಸ್ಕೂಟರ್‍ನಲ್ಲಿ ಓಡಾಡುವಂತಾಗಿದ್ದು, ಬರುವ ದಿನಗಳಲ್ಲಿ ಅವರಿಗೆ ಕಾರುಗಳನ್ನು ಒದಗಿಸುವಂತಾಗುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಹೇಳಿದರು. 

ಅವರ ಎಲ್ಲ ವಿಚಾರಗಳಿಗೆ ಸರಕಾರ ಸ್ಪಂದಿಸುತ್ತಿದೆ. ವಾಹನಗಳಿಗೆ ಬಾಕ್ಸ್ ಜೋಡಿಸಲು ಸೂಚಿಸಿದ್ದು, ಬಾಬು ಜಗಜೀವನ್ ರಾಮ್ ಹೆಸರಿನಲ್ಲಿ ಪ್ರತಿ ಕ್ಷೇತ್ರಕ್ಕೆ ಬಾಕ್ಸ್ ಉಳ್ಳ 100 ಸ್ಕೂಟರ್‍ಗಳನ್ನು ಸ್ವಯಂ ಉದ್ಯೋಗ ಕೈಗೊಳ್ಳಲು ಅನುಕೂಲವಾಗುವಂತೆ ಒದಗಿಸಲು ತೀರ್ಮಾನಿಸಿ ಆದೇಶಿಸಲಾಗಿದೆ. ಸುಮಾರು25 ಸಾವಿರ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಇದರಿಂದ ಅನುಕೂಲವಾಗುತ್ತದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಸರಕಾರ ಹಂತ ಹಂತವಾಗಿ ಎಲ್ಲ ಸೌಲಭ್ಯಗಳನ್ನು ಒದಗಿಸಲು ಕಾರ್ಯಕ್ರಮ ರೂಪಿಸಲಾಗುತ್ತಿದೆ. ಯುವಕರಿಗೆ, ಎಸ್ಸಿ, ಎಸ್ಟಿ ಜನಾಂಗದವರಿಗೆ, ಮಹಿಳೆಯರಿಗೆ ಒದಗಿಸಲಾಗುತ್ತಿದೆ. ಇದೊಂದು ಬಡವರ, ದುಡಿಯುವ ವರ್ಗದ ಪರವಾದ ಸರಕಾರ. ಸಾಮಾಜಿಕ ನ್ಯಾಯ ಅನ್ನುವುದು ಕೇವಲ ಮಾತಿನಲ್ಲಿ ಅಲ್ಲದೆ ಕೃತಿಯಲ್ಲಿ ಮಾಡಿ ತೋರಿಸುತ್ತಿರುವ ಸರಕಾರ ಎಂದು ಮುಖ್ಯಮಂತ್ರಿ ಹೇಳಿದರು. 

ಈ ಸಂದರ್ಭದಲ್ಲಿ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶ್ರೀನಿವಾಸ ಪೂಜಾರಿ, ಸಫಾಯಿ ಕರ್ಮಚಾರಿ ಆಯೋಗದ   ಅಧ್ಯಕ್ಷ ಶಿವಣ್ಣ, ಸಫಾಯಿ ಕರ್ಮಚಾರಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವೆಂಕಟೇಶ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ವಿಧಾನ ಪರಿಷತ್ ಸದಸ್ಯರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X