Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮೂಡುಬಿದಿರೆ: ಎಕ್ಸಲೆಂಟ್ ಶಿಕ್ಷಣ...

ಮೂಡುಬಿದಿರೆ: ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಲ್ಲಿ ಪ್ರತಿಭಾ ಕಾರಂಜಿ

ವಾರ್ತಾಭಾರತಿವಾರ್ತಾಭಾರತಿ16 Sept 2022 10:32 PM IST
share
ಮೂಡುಬಿದಿರೆ: ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಲ್ಲಿ ಪ್ರತಿಭಾ ಕಾರಂಜಿ

ಮೂಡುಬಿದಿರೆ:  ಶಿಕ್ಷಣದೊಂದಿಗೆ ಪಠ್ಯೇತರ ಚಟುವಟಿಕೆಗಳು ಸೇರಿದಾಗ ವಿದ್ಯಾರ್ಥಿಯ ಪರಿಪೂರ್ಣ ಬೆಳವಣಿಗೆ ಸಾಧ್ಯ. ಅದರೊಂದಿಗೆ ನಮ್ಮ ಮೂಡಬಿದಿರೆ ತಾಲೂಕಿನ ವಿವಿಧ ವಿದ್ಯಾರ್ಥಿಗಳು ಜಿಲ್ಲಾಮಟ್ಟದ ಹಾಗೂ ರಾಜ್ಯಮಟ್ಟದಲ್ಲಿ ಪ್ರಶಸ್ತಿ ಪಡೆದುಕೊಳ್ಳಬೇಕೆಂದು ಮೂಡಬಿದ್ರೆ ಪುರಸಭೆಯ ಅಧ್ಯಕ್ಷ ಪ್ರಸಾದ್ ಕುಮಾರ್ ಅಭಿಪ್ರಾಯಪಟ್ಟರು.

ದಕ್ಷಿಣ ಕನ್ನಡ ಜಿಲ್ಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಮೂಡಬಿದಿರೆ ಮತ್ತು ಎಕ್ಸಲೆಂಟ್ ಶಿಕ್ಷಣ ಸಮೂಹ ಶಿಕ್ಷಣ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಕಲ್ಲಬೆಟ್ಟು ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಲ್ಲಿ ಜರಗಿದ ಮೂಡಬಿದ್ರೆ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ -2022 ಉದ್ಘಾಟಿಸಿ ಮಾತನಾಡಿದ ಅವರು ಗ್ರಾಮೀಣ ಪ್ರತಿಭೆಗಳ ಅನಾವರಣಕ್ಕೆ ಇದೊಂದು ಉತ್ತಮ ವೇದಿಕೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಯುವರಾಜ್ ಜೈನ್ ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಸ್ಪರ್ಧಾತ್ಮಕ ಮನೋಭಾವಕ್ಕಿಂತ ಸ್ಪರ್ಧೆಗಳಲ್ಲಿ ಭಾಗವಹಿಸುವ ಹುಮ್ಮಸ್ಸನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕು. ಸೋಲೇ ಗೆಲುವಿನ ಸೋಪಾನ, ಗುರಿ ಮುಂದೆ ಇದ್ದಾಗ ಸಾಧಿಸುವ ಛಲ ಇದ್ಧಾಗ ಯಶಸ್ಸು ಸಾಧ್ಯ ಅದರಂತೆ ವಿವಿಧ ಶಾಲೆಯ ಕಿರಿಯ ಹಾಗೂ ಹಿರಿಯ ಮಕ್ಕಳು ಈ ರೀತಿಯಲ್ಲಿ ತಯಾರಿ ನಡೆಸಿಕೊಂಡು ಬಂದಿರುವುದನ್ನು ನೋಡಿ ನನಗೆ ಬಹಳ ಸಂತೋಷವಾಗುತ್ತಿದೆ. ಈ ಸ್ಪರ್ದೆಯಲ್ಲಿ ಸೋತ ವಿದ್ಯಾರ್ಥಿಗಳು ಕೂಡ ಎದೆಗುಂದದೆ ಕೇವಲ ಪ್ರಶಸ್ತಿಗಾಗಿ ಸ್ಪರ್ದೆ ಎಂದುಕೊಳ್ಳದೆ ಎಲ್ಲರೂ ನಾನು ಭಾಗವಹಿಸಿದ್ದೇನೆ ಎಂಬ ಮನೋಭಾವದೊಂದಿಗೆ ಸಂತೋಷ ಪಡಬೇಕು ಹಾಗೂ ಈ ವೇದಿಕೆಯ ಮೂಲಕ ಉನ್ನತ ಪ್ರತಿಭೆಗಳು ದೇಶಕ್ಕೆ ಕೊಡುಗೆಯಾಗಲಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮೂಡಬಿದ್ರೆ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಗಣೇಶ್ ವೈ ಮಾತನಾಡುತ್ತಾ ಗ್ರಾಮೀಣ ಪ್ರದೇಶದಲ್ಲಿರುವ ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಗಳನ್ನು ಹೊರ ಹಾಕಲು ಇದೊಂದು ಉತ್ತಮವಾದ ವೇದಿಕೆ ಎಂದು ನುಡಿದರು. ಇನ್ನೋರ್ವ ಅತಿಥಿ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ರಶ್ಮಿತಾ ಜೈನ್ ಇವರು ಅತಿ ಚಿಕ್ಕ ಮಕ್ಕಳಲ್ಲಿ ಇರುವ ಪ್ರತಿಭೆಯನ್ನು ಹೊರತೆಗೆಯಲು ಶಿಕ್ಷಕರ ಪಾತ್ರ ಪ್ರಮುಖವಾದದ್ದು. ಇಂತಹ ಸಾಧನೆಯನ್ನು ಮಾಡುತ್ತಿರುವ ಶಿಕ್ಷಕರನ್ನು ನಾನು ಪ್ರಶಂಸಿಸುತ್ತೇನೆ ಎಂದು ನುಡಿದರು.

ಸಮಾರಂಭದಲ್ಲಿ ಜಿಲ್ಲಾ ಪ್ರತಿಭಾ ಕಾರಂಜಿ ನೋಡಲ್ ಅಧಿಕಾರಿ ಶೋಭಾ, ಮೂಡಬಿದ್ರಿ ತಾಲ್ಲೂಕಿನ ಎಲ್ಲಾ ಶಿಕ್ಷಕ ಸಂಘದ ಅಧ್ಯಕ್ಷರುಗಳು, ಕ್ಷೇತ್ರ ಶಿಕ್ಷಣ ಸಮನ್ವಯಧಿಕಾರಿ, ದೈಹಿಕ ಶಿಕ್ಷಣ ಪರಿವೀಕ್ಷಕರು, ಶಿಕ್ಷಣ ಸಂಯೋಜಕರು, ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳು, ಸಮೂಹ ಸಂಪನ್ಮೂಲ ಅಧಿಕಾರಿಗಳು, ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲ ಪ್ರದೀಪ್ ಕುಮಾರ್ ಶೆಟ್ಟಿ ಇವರು ಉಪಸ್ಥಿತರಿದರು.

ಮೂಡಬಿದ್ರಿ ತಾಲೂಕು ಪ್ರತಿಭಾ ಕಾರಂಜಿ ನೋಡಲ್ ಅಧಿಕಾರಿ  ರಾಜೇಶ್ ಭಟ್ ಇವರು ಸ್ವಾಗತಿಸಿ ಪ್ರಸ್ತಾವನೆ ಗೈದರು. ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಮುಖ್ಯ ಶಿಕ್ಷಕ ಶಿವಪ್ರಸಾದ್ ಭಟ್ ಇವರು ವಂದನಾರ್ಪಣೆಗೈದರು. ಕನ್ನಡ ಅಧ್ಯಾಪಕ ಶ್ರೀ ನಿತೇಶ್ ಬಲ್ಲಾಳ್ ಕಾರ್ಯಕ್ರಮ ನಿರೂಪಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X