Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಾಗತಿಕ ಉತ್ಪಾದನಾ ಕೇಂದ್ರವಾಗುತ್ತ ಭಾರತ...

ಜಾಗತಿಕ ಉತ್ಪಾದನಾ ಕೇಂದ್ರವಾಗುತ್ತ ಭಾರತ ದಾಪುಗಾಲು ಎಸ್‌ಸಿಓ ಶೃಂಗಸಭೆಯಲ್ಲಿ ಮೋದಿ

ವಾರ್ತಾಭಾರತಿವಾರ್ತಾಭಾರತಿ16 Sept 2022 11:18 PM IST
share
ಜಾಗತಿಕ ಉತ್ಪಾದನಾ ಕೇಂದ್ರವಾಗುತ್ತ ಭಾರತ ದಾಪುಗಾಲು ಎಸ್‌ಸಿಓ ಶೃಂಗಸಭೆಯಲ್ಲಿ ಮೋದಿ

ಹೊಸದಿಲ್ಲಿ,ಸೆ.16: ಭಾರತವನ್ನು ಜಾಗತಿಕ ಉತ್ಪಾದನಾ ಕೇಂದ್ರವಾಗಿ ರೂಪಿಸುವಲ್ಲಿ ಕೇಂದ್ರ ಸರಕಾರ ಪ್ರಗತಿ ಸಾಧಿಸಿದೆಯೆಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಕೋವಿಡ್ ಸಾಂಕ್ರಾಮಿಕ ಹಾಗೂ ರಶ್ಯ-ಉಕ್ರೇನ್ ಯುದ್ಧದಿಂದಾಗಿ ಜಾಗತಿಕ ಇಂಧನ ಹಾಗೂ ಆಹಾರದ ಪೂರೈಕೆಯ ಮೇಲೆ ಭಾರೀ ಪರಿಣಾಮವುಂಟಾಗಿದೆ ಎಂದವರು ಹೇಳಿದ್ದಾರೆ. ಉಜ್ಬೇಕಿಸ್ತಾನದ ಸಮರ್ಕಾಂಡದಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಸ್ಥೆ (ಎಸ್‌ಸಿಓ)ಯ ಶೃಂಗಸಭೆಯಲ್ಲಿ ಶುಕ್ರವಾರ ಭಾಷಣ ಮಾಡಿದ ಅವರು ಪ್ರದೇಶದಲ್ಲಿ ಪೂರೈಕೆಯ ಸರಪಣಿಗಳು ಅಬಾಧಿತವಾಗಿರುವುದನ್ನು ಖಾತರಿಪಡಿಸಲು ಸದಸ್ಯ ರಾಷ್ಟ್ರಗಳು ಪರಸ್ಪರರಿಗೆ ಸಾರಿಗೆ ಸಂಪರ್ಕದ ಹಕ್ಕುಗಳನ್ನು ನೀಡಬೇಕು ಎಂದವರು ಕರೆ ನೀಡಿದ್ದಾರೆ.

  ಪಾಕ್ ಪ್ರಧಾನಿ ಶಹಬಾಝ್ ಶರೀಫ್ ಅವರ ಉಪಸ್ಥಿತಿಯಲ್ಲೇ ಮೋದಿ ಈ ಹೇಳಿಕೆ ನೀಡಿರುವುದು ಗಮನಾರ್ಹವಾಗಿದೆ. ಅಫ್ಘಾನಿಸ್ತಾನಕ್ಕೆ ಭಾರತದಿಂದ ಪರಿಹಾರ ಸಾಮಾಗ್ರಿಗಳನ್ನು ತನ್ನ ಮಾರ್ಗವಾಗಿ ಪೂರೈಕೆ ಮಾಡುವುದಕ್ಕೆ ಅನುಮತಿ ನೀಡುವಲ್ಲಿ ಪಾಕಿಸ್ತಾನದ ವಿಳಂಬಿಸಿದ್ದನ್ನು ಅವರು ಪರೋಕ್ಷವಾಗಿ ಉಲ್ಲೇಖಿಸಿದ್ದಾರೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಿಸಿದ್ದಾರೆ.

  ‘‘ಕೋವಿಡ್19 ಸಾಂಕ್ರಾಮಿಕದ ಹಾವಳಿ ಹಾಗೂ ಉಕ್ರೇನ್ ಯುದ್ಧದಿಂದಾಗಿ ಪ್ರದೇಶದಲ್ಲಿ ಪೂರೈಕೆ ಸರಪಣಿಗಳ ಮೇಲೆ ಪರಿಣಾಮಬೀರಿದೆ. ಇದರಿಂದಾಗಿ ಜಗತ್ತು ಹಿಂದೆಂದೂ ಇಲ್ಲದಷ್ಟು ಇಂಧನ ಹಾಗೂ ಆಹಾರದ ಬಿಕ್ಕಟ್ಟನ್ನು ಎದುರಿಸುತ್ತಿದೆ ’’ಎಂದು ಪ್ರಧಾನಿ ಹೇಳಿದರು.

 ‘‘ಹೀಗಾಗಿ ಪ್ರದೇಶದಲ್ಲಿ ವಿಶ್ವಸನೀಯ,ಚೇತರಿಸಿಕೊಳ್ಳಬಲ್ಲ ಹಾಗೂ ವೈವಿಧ್ಯಮಯ ಪೂರೈಕೆಯ ಸರಪಣಿಯನ್ನು ಅಭಿವೃದ್ಧಿಪಡಿಸಲು ಎಸ್‌ಸಿಓ ಸದಸ್ಯ ರಾಷ್ಟ್ರಗಳ ನಡುವೆ ಪರಸ್ಪರ ಸಹಕಾರವೇರ್ಪಡುವುದನ್ನು ಭಾರತ ಬೆಂಬಲಿಸುತ್ತದೆ’’ ಎಂದು ಪ್ರಧಾನಿ ಹೇಳಿದರು. ಇದಕ್ಕಾಗಿ ಉತ್ತಮ ಸಂಪರ್ಕ ವ್ಯವಸ್ಥೆಯ ಅಗತ್ಯವಿದೆ ಹಾಗೂ ಪರಸ್ಪರರ ನಡುವೆ ಸರಕು ಸಾಗಣಿಕೆಗೆ ಸಂಪೂರ್ಣ ಹಕ್ಕುಗಳನ್ನು ನೀಡುವುದು ಕೂಡಾ ಅಗತ್ಯವಾಗಿದೆ’’ ಎಂದವರು ಹೇಳಿದರು.

  ಭಾರತವನ್ನು ಉತ್ಪಾದನಾ ಕೇಂದ್ರವಾಗಿ ಮಾಡುವಲ್ಲಿ ಕೇಂದ್ರ ಸರಕಾರವು ಪ್ರಗತಿಯನ್ನು ಸಾಧಿಸಿದೆ ಎಂದು ಪ್ರಧಾನಿ ತಿಳಿಸಿದರು. ದೇಶದಲ್ಲಿ ಜನತಾ ಕೇಂದ್ರೀತ ಅಭಿವೃದ್ಧಿಗಾಗಿ ತಂತ್ರಜ್ಞಾನದ ಸಮರ್ಪಕ ಬಳಕೆಯ ಬಗ್ಗೆ ಅಪಾರ ಗಮನವನ್ನು ನೀಡಲಾಗಿದೆ ಎಂದು ಪ್ರಧಾನಿ ಹೇಳಿದರು. ಭಾರತದ ಆರ್ಥಿಕತೆಯು ಈ ವರ್ಷ ಶೇ.7.5ಕ್ಕೆ ಬೆಳೆಯು ವ ನಿರೀಕ್ಷೆಯಿದ್ದು, ಇದು ಜಗತ್ತಿನ ಪ್ರಮುಖ ಆರ್ಥಿಕ ರಾಷ್ಟ್ರಗಳಲ್ಲೇ ಅತ್ಯಧಿಕವಾಗಿದೆ ಎಂದವರು ಹೇಳಿದರು.

   ಎಸ್‌ಸಿಓ ಶೃಂಗಸಭೆಯ ಈ ವಾರ್ಷಿಕ ಸಮಾವೇಶದಲ್ಲಿ ರಶ್ಯ ಅಧಕ್ಷ ವ್ಲಾದಿಮಿರಂ ಪುತಿನ್, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಹಾಗೂ ಇತರ ಎಸ್‌ಸಿಓ ಸದಸ್ಯ ರಾಷ್ಟ್ರಗಳ ನಾಯಕರು ಭಾಗವಹಿಸಿದ್ದರು. ಪ್ರದೇಶದ ಭದ್ರತಾ ಪರಿಸ್ಥಿತಿ ಹಾಗೂ ಸದಸ್ಯರ ರಾಷ್ಟ್ರಗಳ ನಡುವೆ ವಾಣಿಜ್ಯ ಹಾಗೂ ಸಂಪರ್ಕವನ್ನು ಹೆಚ್ಚಿಸುವ ಮಾರ್ಗೋಪಾಯಗಳ ಬಗ್ಗೆಯೂ ಈ ಸಂದರ್ಭದಲ್ಲಿ ಚರ್ಚಿಸಲಾಯಿತೆಂದು ಮೂಲಗಳು ತಿಳಿಸಿವೆ.

   ಎರಡು ವರ್ಷಗಳ ಹಿಂದೆ ಪೂರ್ವ ಲಡಾಕ್ ಸಮೀಪದ ಗಡಿಯಲ್ಲಿ ಭಾರತ ಹಾಗೂ ಚೀನಾ ಸೇನೆ ನಡುವೆ ಸಂಘರ್ಷಾವಸ್ಥೆ ಉಂಟಾದ ಬಳಿಕ ಪ್ರಧಾನಿ ಮೋದಿ ಹಾಗೂ ಚೀನಾ ಅಧ್ಯಕ್ಷ ಕ್ಸಿಜಿನ್ ಪಿಂಗ್ ಇದೇ ಮೊದಲ ಬಾರಿಗೆ ಶೃಂಗಸಭೆಯಲ್ಲಿ ಭೇಟಿಯಾಗಿದ್ದಾರೆ.

ಆದರೆ ಶೃಂಗಸಭೆಯ ಸಂದರ್ಭದಲ್ಲಿ ಮೋದಿ ಹಾಗೂ ಕ್ಸಿ ನಡುವೆ ಯಾವುದೇ ದ್ವಿಪಕ್ಷೀಯ ಮಾತುಕತೆ ನಡೆಯಲಿದೆಯೆಂಬುದು ಇನ್ನೂ ಸ್ಪಷ್ಟವಾಗಿ ತಿಳಿದುಬಂದಿಲ್ಲವೆಂದು ಮೂಲಗಳು ತಿಳಿಸಿವೆ.

 ಪಾಕಿಸ್ತಾನದ ಪ್ರಧಾನಿ ಶಹಬಾಝ್ ಶರೀಫ್, ಇರಾನ್ ಅಧ್ಯಕ್ಷ ಇಬ್ರಾಹೀಂ ರೈಸಿ ಹಾಗೂ ಮಧ್ಯಏಶ್ಯ ಪ್ರದೇಶದ ವಿವಿಧ ದೇಶಗಳ ನಾಯಕರು ಶೃಂಗಸಭೆಯಲ್ಲಿ ಭಾಗವಹಿಸಿದ್ದರು.

 ಉಕ್ರೇನ್ ಮೇಲೆ ರಶ.್ಗದ ಆಕ್ರಮಣ ಹಾಗೂ ತೈವಾನ್ ಜಲಸಂಧಿಯಲ್ಲಿ ಚೀನಾದ ಮಿಲಿಟರಿ ಬೆದರಿಕೆಯಿಂದಾಗಿ ಜಾಗತಿಕ ರಾಜಕೀಯದಲ್ಲಿ ಗಂಭೀರ ಬಿಕ್ಕಟ್ಟು ಉಂಟಾಗಿರುವ ನಡುವೆಯೇ ಸದಸ್ಯ ರಾಷ್ಟ್ರಗಳ ಈ ಶೃಂಗಸಭೆ ನಡೆಯುತ್ತಿರುವುದು ಹೆಚ್ಚಿನ ಮಹತ್ವವನ್ನು ಪಡೆದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X