Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕಾರ್ಪೊರೇಟ್ ಸಂಸ್ಥೆಗಳು ಬದಲಾವಣೆಯ...

ಕಾರ್ಪೊರೇಟ್ ಸಂಸ್ಥೆಗಳು ಬದಲಾವಣೆಯ ಭಾಗವಾಗಬೇಕು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ16 Sept 2022 11:52 PM IST
share
ಕಾರ್ಪೊರೇಟ್ ಸಂಸ್ಥೆಗಳು ಬದಲಾವಣೆಯ ಭಾಗವಾಗಬೇಕು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು, ಸೆ.16: ಕಾರ್ಪೊರೇಟ್ ಗಳು ಸಂಸ್ಥೆಗಳು ಬದಲಾವಣೆಯ ಭಾಗವಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆ ನೀಡಿದರು.

ಅವರು ಇಂದು ಉನ್ನತ ಶಿಕ್ಷಣ ಇಲಾಖೆ ಆಯೋಜಿಸಿದ್ದ  ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದರು. 

ಕೇವಲ ಮೂಲಸೌಕರ್ಯಗಳನ್ನು ಮಾತ್ರವಲ್ಲ ಸಂಸ್ಕೃತಿಯಲ್ಲಿ ಬದಲಾವಣೆ ತರಬೇಕು. ಬಡವರಿಗೆ ಅಗತ್ಯವಿರುವ ಸೌಲಭ್ಯಗಳು ದೊರಕಿದಾಗ ಸಂಸ್ಕೃತಿಯೂ ಬದಲಾಗುತ್ತದೆ.  ಕಂಪನಿ ಹಾಗೂ  ಸಂಸ್ಥೆಗಳು ದತ್ತು ಪಡೆಯುವ ಕಾಲೇಜುಗಳಲ್ಲಿ ಕೇವಲ ಹಣ ಮಾತ್ರವಲ್ಲದೆ ಸಮಯವನ್ನೂ ನೀಡಬೇಕು. ಕಾಲೇಜುಗಳು ನಮ್ಮದೇ ಎಂಬ ಭಾವನೆ ಇರಬೇಕು. ಆಗ ವ್ಯತ್ಯಾಸ ಕಾಣಲು ಸಾಧ್ಯ. ವಿದ್ಯಾರ್ಥಿಗಳ ಬದುಕಿನಲ್ಲಿ ಬದಲಾವಣೆ ತಂದರೆ, ನಿಮ್ಮ ಬದುಕಿನಲ್ಲಿಯೂ ಬದಲಾವಣೆ ತರಲು ಸಾಧ್ಯ ಎಂದರು. 

'ಕರ್ನಾಟಕ ಶಿಕ್ಷಣ ಕ್ಷೇತ್ರದಲ್ಲಿ ಮುಂಚೂಣಿಯ ರಾಜ್ಯವಾಗಬೇಕು'
 
ಕರ್ನಾಟಕ ಶಿಕ್ಷಣ ಕ್ಷೇತ್ರದಲ್ಲಿ ಮುಂಚೂಣಿಯ ರಾಜ್ಯವಾಗಬೇಕು.  ಸರ್ಕಾರಿ ಐಟಿಐಗಳನ್ನು ಟಾಟಾ ಸಂಸ್ಥೆ ಯ ಸಹಯೋಗದಲ್ಲಿ  4800 ಕೋಟಿ ರೂ.ಗಳ ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲಾಗಿದೆ. 30 - 40  ಕೋಟಿ ರೂ.ಗಳನ್ನು ಐಟಿಐ ಗಳನ್ನು ಆಧುನೀಕರಣಗೊಳಿಸಲು ವೆಚ್ಚ ಮಾಡಲಾಗಿದೆ. ರಾಜ್ಯದ 7 ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳನ್ನು ಐಐಟಿ ಮಾದರಿಯಲ್ಲಿ ಮೇಲ್ದರ್ಜೆ ಗೇರಿಸಲಾಗುತ್ತಿದೆ. ಮುಂದಿನ 2-3 ವರ್ಷಗಳಲ್ಲಿ ಯುವಿಸಿಇ ಐಐಟಿ ಮಾದರಿಯಲ್ಲಿ ಅಭಿವೃದ್ಧಿಯಾಗಲಿದೆ.  ಬೆಂಗಳೂರಿನ ಅಂಬೇಡ್ಕರ್ ಸ್ಕೂಲ್ ಆಫ್ ಇಕನಾಮಿಕ್ಸ್ ನ್ನು ಲಂಡನ್ ಸ್ಕೂಲ್ ಆಫ್ ಇಕನಾಮಿಕ್ಸ್ ನೊಂದಿಗೆ ಸಹಯೋಗ ಹೊಂದಲು ಸಂಪರ್ಕಿಸಲಾಗುತ್ತಿದೆ.  
ನಿಮ್ಮ ಅನುಭವ, ಸಂಪರ್ಕಗಳನ್ನು ಹಂಚಿಕೊಳ್ಳಬೇಕು.ಅತ್ಯುತ್ತಮ ಜ್ಞಾನ ಕರ್ನಾಟಕದಲ್ಲಿ ಲಭ್ಯವಾಗಬೇಕು ಎನ್ನುವುದು  ನಮ್ಮ ಆಶಯ ಎಂದರು. 

'ಸಮಾಜದಿಂದ ಪಡೆದಿದ್ದನ್ನು  ಸಮಾಜಕ್ಕೆ ಹಿಂದಿರುಗಿಸಬೇಕು'

ಸಮಾಜ ನಡೆಯುತ್ತಿರುವುದು ದಾನ ನೀಡುವುದರಿಂದ. ಇಡೀ ವಿಶ್ವ ಹಾಗೂ ಸಮಾಜದಿಂದ ನಾವು ಪಡೆದಿರುತ್ತೇವೆ. ಅಂತಿಮವಾಗಿ ಗಳಿಸಿದ್ದನ್ನು ಇಲ್ಲಿಯೇ ಹಿಂದಿರುಗಿಸಬೇಕು. ದಾನ ನೀಡುವುದು ಬದುಕಿನ ಪ್ರಮುಖ ಭಾಗ. ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆಯಡಿ ಅಥವಾ ಇನ್ಯಾವುದೇ ರೀತಿಯಲ್ಲಿ ನೀಡಿದರೂ ಅದನ್ನು ಹೂಡಿಕೆ ಎಂದು ಪರಿಗಣಿಸಲಾಗುತ್ತದೆಯೋ ಅಥವಾ ಖರ್ಚು ಎಂದು ಭಾವಿಸಬೇಕೇ ಎಂಬ ಪ್ರಶ್ನೆ ಸರ್ಕಾರದ ಮಟ್ಟದಲ್ಲಿಯೂ ಕೇಳಿ ಬರುತ್ತದೆ. 

ಸಮಾಜಕ್ಕೆ ನೀಡುವುದು ಯಾವಾಗಲೂ ಹಣದ ರೂಪದಲ್ಲಿಯೇ ಇರಬೇಕೆಂದಿಲ್ಲ. ಬದುಕಿನ ಬ್ಯಾಲೆನ್ಸ್  ಶೀಟ್ ನಿರ್ವಹಿಸುವುದು ಮುಖ್ಯ. ಸಮಾಜದಿಂದ ಪಡೆದಿದ್ದನ್ನು ಸಮಾಜಕ್ಕೆ ಹಿಂದಿರುಗಿಸಬೇಕು ಎಂದರು. 

ಉನ್ನತ ಶಿಕ್ಷಣ ಇಲಾಖೆ ಅತ್ಯುತ್ತಮ ಕೆಲಸ ಮಾಡುತ್ತಿದ್ದು,ಡಾ: ಸಿ.ಎನ್. ಅಶ್ವತ್ಥ್ ನಾರಾಯಣ್ ಅವರಂಥ   ಕ್ರಿಯಾಶೀಲ ಸಚಿವರೂ ಇದ್ದು, ನೈಜ ಬದಲಾವಣೆ ತರಲು ಶ್ರಮಿಸುತ್ತಿದ್ದಾರೆ. ನೂತನ ಶಿಕ್ಷಣ ನೀತಿಯನ್ನು ಜಾರಿಗೆ ತಂದು ಅನುಷ್ಠಾನಕ್ಕೂ ಮುಂದಾಗಿದ್ದಾರೆ. ನೂತನ ಶಿಕ್ಷಣ ನೀತಿಯ ಮೂಲಕ ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದ ಬದಲಾವಣೆಯನ್ನು ಶಿಕ್ಷಣ. ಕ್ಷೇತ್ರದಲ್ಲಿ ತರಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X