ಪ್ರಧಾನಿ ಮೋದಿ ಜನ್ಮ ದಿನಾಚರಣೆ: ಸ್ವಯಂಪ್ರೇರಿತ ರಕ್ತದಾನ ಶಿಬಿರ

ಉಡುಪಿ, ಸೆ.17: ಪ್ರಧಾನ ಮಂತ್ರಿ ನರೇಂದ್ರ ಮೋದಿ ೭೨ನೇ ಜನ್ಮದಿನದ ಅಂಗವಾಗಿ ಉಡುಪಿ ನಗರ ಬಿಜೆಪಿ ಹಾಗೂ ಯುವ ಮೋರ್ಚಾ, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್, ಮಣಿಪಾಲ ಕೆಎಂಸಿ ರಕ್ತ ನಿಧಿ ವಿಭಾಗದ ಸಹಯೋಗ ದೊಂದಿಗೆ ಹಮ್ಮಿಕೊಳ್ಳಲಾದ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಶಾಸಕ ಕೆ.ರಘುಪತಿ ಭಟ್ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್, ಜಿಲ್ಲಾ ಬಿಜೆಪಿ ವಕ್ತಾರ ರಾಘವೇಂದ್ರ ಕಿಣಿ, ನಗರ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ರೋಷನ್ ಶೆಟ್ಟಿ, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್‌ನ ಸತೀಶ್ ಸಾಲ್ಯಾನ್, ಕೆಎಂಸಿ ರಕ್ತ ನಿಧಿ ವಿಭಾಗ ಡಾ.ಶಮಿ ಶಾಸ್ತ್ರಿ ಮೊದಲಾದವರು ಉಪಸ್ಥಿತರಿದ್ದರು.
ಪುಸ್ತಕ ವಿತರಣೆ: ಪ್ರಧಾನ ಮಂತ್ರಿ ನರೇಂದ್ರ ಮೋದಿಜಿ ಅವರ 72ನೇ ಜನ್ಮದಿನದ ಅಂಗವಾಗಿ ಉಡುಪಿ ನಗರ ಬಿಜೆಪಿ ವತಿಯಿಂದ ನೀಡಲಾದ ಉಚಿತ ಪುಸ್ತಕ ಹಾಗೂ ಕಂಪಾಸ್ ಬಾಕ್ಸ್‌ಗಳನ್ನು ಉಡುಪಿ ಶಾಸಕ ಕೆ.ರಘುಪತಿ ಭಟ್ ಇಂದು ಶನಿವಾರ ಕಡಿಯಾಳಿ ಯು.ಕಮಲಾ ಬಾಯಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಿತರಿಸಿದರು.
ಈ ಸಂದರ್ಭದಲ್ಲಿ ಉಡುಪಿ ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್, ಜಿಲ್ಲಾ ಬಿಜೆಪಿ ವಕ್ತಾರ ರಾಘವೇಂದ್ರ ಕಿಣಿ, ಸ್ಥಳೀಯ ನಗರಸಭಾ ಸದಸ್ಯೆ ಗೀತಾ ಶೇಟ್, ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ದಿನೇಶ್ ಅಮೀನ್, ಕಾರ್ಯ ದರ್ಶಿ ಆನಂದ್ ಮಠದಬೆಟ್ಟು, ಯು.ಕಮಲಾ ಬಾಯಿ ಪೌಢಶಾಲಾ ಮುಖ್ಯೋಪಾಧ್ಯಾಯ ಸುದರ್ಶನ್ ನಾಯಕ್ ಉಪಸ್ಥಿತರಿದ್ದರು.







