ಉಡುಪಿ ಜಿಲ್ಲಾ ಮಟ್ಟದ ಹೊಯ್ಸಳ, ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

ಉಡುಪಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ನಾವೀನ್ಯತೆ, ತಾರ್ಕಿಕ ಸಾಧನೆ, ಕ್ರೀಡೆ, ಕಲೆ, ಸಾಂಸ್ಕೃತಿಕ ಮತ್ತು ಸಂಗೀತ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿದ ೫ರಿಂದ ೧೮ ವರ್ಷದೊಳಗಿನ ಮಕ್ಕಳಿಂದ ಜಿಲ್ಲಾ ಮಟ್ಟದ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಸಾಧನೆಗೆ ಸಂಬಂಧಿಸಿದ ಪೂರಕ ದಾಖಲೆಗಳನ್ನು ಸಲ್ಲಿಸಲು ಅಕ್ಟೋಬರ್ 1 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಜತಾದ್ರಿ, ಮಣಿಪಾಲ ದೂ.ಸಂಖ್ಯೆ:0820-2574978, 2574972ಅನ್ನು ಸಂಪರ್ಕಿಸ ಬಹುದು ಎಂದು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





