ಭಾರತ್ ಜೋಡೋ ಯಾತ್ರೆ: ದ.ಕ.ಜಿಲ್ಲಾ ಕಾಂಗ್ರೆಸ್ ಸಭೆ

ಮಂಗಳೂರು : ಭಾರತ್ ಜೋಡೋ ಯಾತ್ರೆಯಲ್ಲಿ ದ.ಕ.ಜಿಲ್ಲೆಯಿಂದ ಪಾಲ್ಗೊಳ್ಳುವಿಕೆ ಹಾಗೂ ಸೆ.26ರಂದು ನಗರದ ಕುದ್ಮುಲ್ ರಂಗರಾವ್ ಪುರಭನದಲ್ಲಿ ನಡೆಯಲಿರುವ ಕಾಂಗ್ರೆಸ್ ಕಾರ್ಯಕರ್ತರ ಸಭೆಯ ಯಶಸ್ವಿಗಾಗಿ ದ.ಕ.ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಶನಿವಾರ ಪೂರ್ವಭಾವಿ ಸಭೆ ನಡೆಯಿತು.
ಸೆ.26ರ ಕಾರ್ಯಕ್ರಮದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷ ಎಂ.ಬಿ.ಪಾಟೀಲ್ ಭಾಗವಹಿಸಲಿದ್ದಾರೆ. ಹಾಗಾಗಿ ಪ್ರತೀ ಬ್ಲಾಕ್ ಕಾಂಗ್ರೆಸ್ ಸಮಿತಿಯ ನಾಯಕರು, ಕಾರ್ಯಕರ್ತರು ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಸಭೆಯ ಅಧ್ಯಕ್ಷತೆ ವಹಿಸಿದ್ದ ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಕರೆ ನೀಡಿದರು.
ಈ ಸಂದರ್ಭ ಮಾಜಿ ಸಚಿವ ಬಿ.ರಮಾನಾಥ ರೈ, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಮಾಜಿ ಶಾಸಕರಾದ ಜೆ. ಆರ್.ಲೋಬೊ, ಐವನ್ ಡಿಸೋಜ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಇನಾಯತ್ ಅಲಿ, ರಕ್ಷಿತ್ ಶಿವರಾಂ, ಮಮತಾ ಗಟ್ಟಿ, ಮತ್ತಿತರರು ಉಪಸ್ಥಿತರಿದ್ದರು.
Next Story