Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮುಂದಿನ ಮೂರು ತಿಂಗಳಲ್ಲಿ ಎಲ್ಲ...

ಮುಂದಿನ ಮೂರು ತಿಂಗಳಲ್ಲಿ ಎಲ್ಲ ವಾರ್ಡುಗಳಲ್ಲಿ 'ನಮ್ಮ ಕ್ಲಿನಿಕ್': ಸಿಎಂ ಬೊಮ್ಮಾಯಿ

ಸಮಗ್ರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ಹೈಟೆಕ್ ಎಕ್ಸ್ ಪ್ರೆಸ್ ಕ್ಲಿನಿಕ್‍ಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ17 Sept 2022 9:51 PM IST
share
ಮುಂದಿನ ಮೂರು ತಿಂಗಳಲ್ಲಿ ಎಲ್ಲ ವಾರ್ಡುಗಳಲ್ಲಿ ನಮ್ಮ ಕ್ಲಿನಿಕ್: ಸಿಎಂ ಬೊಮ್ಮಾಯಿ

ಬೆಂಗಳೂರು, ಸೆ.17: ಮಲ್ಲೇಶ್ವರಂನ ಈ ಮಾದರಿ ದೇಶ ಮತ್ತು ರಾಜ್ಯಕ್ಕೆ ಒಂದು ಮೇಲ್ಪಂಕ್ತಿ ಆಗಿದೆ. ಈ ವರ್ಷ ನಗರದಲ್ಲಿ 20 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಹೀಗೆಯೇ ನಿರ್ಮಿಸಲಾಗುವುದು. ಜೊತೆಗೆ, ಮುಂದಿನ ಮೂರು ತಿಂಗಳಲ್ಲಿ ನಗರದ 243 ವಾರ್ಡುಗಳಲ್ಲೂ ನಮ್ಮ ಕ್ಲಿನಿಕ್ ಗಳನ್ನು ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದರು.

ಶನಿವಾರ ಮಲ್ಲೇಶ್ವರಂ ಕ್ಷೇತ್ರ ವ್ಯಾಪ್ತಿಯ ಪ್ಯಾಲೇಸ್ ಗುಟ್ಟಹಳ್ಳಿಯಲ್ಲಿ ನಿರ್ಮಿಸಿರುವ ದೇಶದ ಪ್ರಪ್ರಥಮ ಸಮಗ್ರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ಹೈಟೆಕ್ ಡಯಾಗ್ನಾಸ್ಟಿಕ್ ಸೇವೆಗಳ ಎಕ್ಸ್ ಪ್ರೆಸ್ ಕ್ಲಿನಿಕ್ ಮತ್ತು ಎಸ್ಕಲೇಟರ್ ಸಹಿತ ಸ್ಕೈವಾಕ್ ಸೌಲಭ್ಯಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜಯದೇವ ಆಸ್ಪತ್ರೆಯ ನಾಲ್ಕು ಕೇಂದ್ರಗಳನ್ನು ಬೆಂಗಳೂರು ನಗರದಲ್ಲಿ ಸ್ಥಾಪಿಸಲು ಕ್ರಮ ವಹಿಸಲಾಗಿದೆ. ಇವುಗಳ ಪೈಕಿ 50 ಹಾಸಿಗೆಗಳ ಒಂದು ಕೇಂದ್ರವು ಮಲ್ಲೇಶ್ವರದ ಕೆಸಿಜಿ ಆಸ್ಪತ್ರೆಯಲ್ಲಿ ನಿರ್ಮಿಸಲಾಗುತ್ತಿದೆ. ಸದ್ಯದಲ್ಲೇ ಅದನ್ನೂ ಉದ್ಘಾಟಿಸುತ್ತೇನೆ ಎಂದು ಅವರು ನುಡಿದರು.

ಗ್ರಾಮೀಣ ಮತ್ತು ಹಿಂದುಳಿದ ಪ್ರದೇಶಗಳಲ್ಲಿ ಆರೋಗ್ಯ ಸೇವೆ ಒದಗಿಸಲು ಇದು ಸೂಕ್ತ ಮಾದರಿ ಆಗಿದೆ. ನಾವು ಮನಸ್ಸು ಮಾಡಿದರೆ ಸಮಸ್ಯೆಯ ಭಾಗವಾಗದೆ ಹೇಗೆ ಪರಿಹಾರದ ಭಾಗ ಆಗಬಹುದು ಎನ್ನುವುದನ್ನು ಅಶ್ವತ್ಥ ನಾರಾಯಣ ತೋರಿಸಿ ಕೊಟ್ಟಿದ್ದಾರೆ. ಇದಕ್ಕೆ ಡಿಜಿಟಲ್ ಸ್ಪರ್ಶ ಸಿಕ್ಕಿರುವುದು ನಿಜಕ್ಕೂ ಸಂತೋಷದ ವಿಷಯ ಎಂದು ಬಸವರಾಜ ಬೊಮ್ಮಾಯಿ ಮೆಚ್ಚುಗೆ ವ್ಯಕ್ತಪಡಿಸಿದರು.

ಬಿಬಿಎಂಪಿ ವ್ಯಾಪ್ತಿಯ ಆರೋಗ್ಯ ಸೇವೆಗಳನ್ನು ಪ್ರತ್ಯೇಕ ವ್ಯವಸ್ಥೆ ಮೂಲಕ ನಿರ್ವಹಣೆ ಮಾಡಲಾಗುವುದು. ಸದ್ಯ ಆರೋಗ್ಯ ಇಲಾಖೆ ಮತ್ತು ಬಿಬಿಎಂಪಿ ಎರಡೂ ನಿರ್ವಹಿಸುತ್ತಿವೆ ಎಂದು ಮುಖ್ಯಮಂತ್ರಿ ಹೇಳಿದರು.

ಹೈಟೆಕ್ ಡಯಾಗ್ನೋಸ್ಟಿಕ್ಸ್ ಎಕ್ಸ್‍ಪ್ರೆಸ್ ಕ್ಲಿನಿಕ್: ಬಿಬಿಎಂಪಿ ಮತ್ತು ಮಣಿಪಾಲ್ ಹೆಲ್ತ್ ಎಂಟರ್‍ಪ್ರೈಸಸ್ ಸಹಯೋಗದಲ್ಲಿ ಮಲ್ಲೇಶ್ವರಂನ ಮಹಾಕವಿ ಕುವೆಂಪು ರಸ್ತೆಯಲ್ಲಿ (5ನೇ ಅಡ್ಡರಸ್ತೆ, ಮಲ್ಲೇಶ್ವರಂ ಆಟದ ಮೈದಾನದ ಹತ್ತಿರ) ನಿರ್ಮಿಸಿರುವ ಹೈಟೆಕ್ ಡಯಾಗ್ನಾಸ್ಟಿಕ್ ಸೇವೆಗಳ ಅತ್ಯಾಧುನಿಕ ಎಕ್ಸ್‍ಪ್ರೆಸ್ ಕ್ಲಿನಿಕ್ ಅಶ್ವತ್ಥನಾರಾಯಣ ಅವರ ವೈಯಕ್ತಿಕ ಮುತುವರ್ಜಿಯ ಫಲವಾಗಿದೆ. ಮಣಿಪಾಲ್ ಸಮೂಹದ ಜತೆ ನಿರಂತರ ಮಾತುಕತೆ ನಡೆಸಿ, ಈ ಸೌಲಭ್ಯವನ್ನು ಕ್ಷೇತ್ರಕ್ಕೆ ತರುವಲ್ಲಿ ಅವರು ಯಶಸ್ವಿ ಆಗಿದ್ದಾರೆ ಎಂದು ಮುಖ್ಯಮಂತ್ರಿ ಮೆಚ್ಚುಗೆ ವ್ಯಕ್ತಪಡಿಸಿದರು.

ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಮಾತನಾಡಿ, ಮಲ್ಲೇಶ್ವರಂ ಕ್ಷೇತ್ರದ ಎಲ್ಲ ಏಳು ವಾರ್ಡುಗಳಲ್ಲೂ ಸಮಗ್ರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಆರಂಭಿಸಲಾಗುವುದು. ಈಗಾಗಲೇ ಸುಬ್ರಹ್ಮಣ್ಯ ನಗರ ಮತ್ತು ಅರಮನೆ ನಗರಗಳಲ್ಲಿ ಇದರ ಕಾಮಗಾರಿ ನಡೆಯುತ್ತಿದೆ ಎಂದರು.

ನಗರದ ಪ್ರತೀ ವಾರ್ಡಿನಲ್ಲೂ ಕನಿಷ್ಠ ಎರಡು ಪ್ರಾಥಮಿಕ ಆರೋಗ್ಯ ಕೇಂದ್ರ ಇರಬೇಕು. ಈಗಾಗಲೇ ಮಲ್ಲೇಶ್ವರಂನ ವಾರ್ಡುಗಳಲ್ಲಿ ತಲಾ ಎರಡು ನಮ್ಮ ಕ್ಲಿನಿಕ್ ಇವೆ. ಪ್ಯಾಲೇಸ್ ಗುಟ್ಟಹಳ್ಳಿಯಲ್ಲಿ ಆರಂಭವಾದ ದೇಶದ ಮೊಟ್ಟಮೊದಲ ಸಮಗ್ರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಒಂದೇ ಕಡೆ ವೈದ್ಯಕೀಯ ತಪಾಸಣೆ, ಪರೀಕ್ಷೆ, ಚಿಕಿತ್ಸೆ, ನಿಗಾ ಮತ್ತು ಔಷಧಿಗಳು ಉಚಿತವಾಗಿ ಸಿಗಲಿವೆ ಎಂದು ಅಶ್ವತ್ಥ ನಾರಾಯಣ ಮಾಹಿತಿ ನೀಡಿದರು.

ಎಕ್ಸ್‍ಪ್ರೆಸ್ ಕ್ಲಿನಿಕ್ ನಲ್ಲಿ ಸರಕಾರಿ ಆಸ್ಪತ್ರೆಗಳಲ್ಲಿ ನಾನಾ ಪರೀಕ್ಷೆಗಳಿಗೆ ನಿಗದಿಪಡಿಸಿರುವ ದರದಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಶೇ.60ರಷ್ಟು ಮತ್ತು ಎಪಿಎಲ್ ಕಾರ್ಡುದಾರರಿಗೆ ಶೇ.40ರಿಂದ 50ರಷ್ಟು ರಿಯಾಯಿತಿ ಸಿಗಲಿದೆ. ಇಲ್ಲಿ ಪ್ರಯೋಗಾಲಯ, ಎಕ್ಸ್-ರೇ, ಅಲ್ಟ್ರಾ ಸೌಂಡ್ ಸ್ಕ್ಯಾನಿಂಗ್, ಪಿ.ಎಫ್.ಟಿ ಮತ್ತು ಇಸಿಜಿ ಸೌಲಭ್ಯಗಳು ಸಿಗಲಿವೆ ಎಂದು ಅವರು ಹೇಳಿದರು.

ಇದಕ್ಕೆ ಬಿಬಿಎಂಪಿ ಜಾಗವನ್ನು ಒದಗಿಸಿದ್ದು, ಮಣಿಪಾಲ್ ಸಮೂಹವು ಸಾಧನ ಸಲಕರಣೆಗಳನ್ನು ತಾನೇ ವ್ಯವಸ್ಥೆ ಮಾಡಿಕೊಂಡಿದೆ. ಕ್ಷೇತ್ರದ ವ್ಯಾಪ್ತಿಯಲ್ಲಿ ಇರುವ  ಪ್ರಾಥಮಿಕ ಆರೋಗ್ಯ ಕೇಂದ್ರಗಳಿಂದ ಹೆಚ್ಚಿನ ಪರೀಕ್ಷೆಗೆ ಶಿಫಾರಸು ಮಾಡುವ ರೋಗಿಗಳಿಗೆ ಇದರಿಂದ ಲಾಭವಾಗಲಿದೆ. ಈ ಕ್ಲಿನಿಕ್ ಬೆಳಗ್ಗೆ 7ರಿಂದ ಸಂಜೆ 7 ರವರೆಗೆ ಕಾರ್ಯ ನಿರ್ವಹಿಸಲಿದೆ ಎಂದು ಅಶ್ವತ್ಥ ನಾರಾಯಣ ವಿವರಿಸಿದರು.

ಎಸ್ಕಲೇಟರ್ ಸಹಿತ ಸ್ಕೈವಾಕ್: ಬಳ್ಳಾರಿ ರಸ್ತೆಯಲ್ಲಿ ಪ್ಯಾಲೇಸ್ ಗುಟ್ಟಹಳ್ಳಿ ಬಸ್ ನಿಲ್ದಾಣದ ಸಮೀಪ ನಿರ್ಮಿಸಿರುವ ಸ್ಕೈವಾಕ್ ಎಸ್ಕಲೇಟರ್ ಸೌಲಭ್ಯವನ್ನು ಒಳಗೊಂಡಿದೆ. ಇದರಿಂದ ಜನರು ಇದನ್ನು ಹತ್ತುವ ಮತ್ತು ಇಳಿಯುವ ಕಷ್ಟ ತಪ್ಪಲಿದ್ದು, ಇದು ನಗರದಲ್ಲಿ ಇಂತಹ ಎರಡನೇ ಸ್ಕೈವಾಕ್ ಆಗಿದೆ. ಇದು 3 ಮೀಟರ್ ಅಗಲ ಮತ್ತು  30 ಮೀಟರ್ ಉದ್ದವಿದೆ ಎಂದು ಅಶ್ವತ್ಥನಾರಾಯಣ ವಿವರಿಸಿದರು

ಬಳ್ಳಾರಿ ರಸ್ತೆಯಲ್ಲಿ ಇರುವ ವಾಹನ ದಟ್ಟಣೆ ಗಮನಿಸಿ, ಸಾರ್ವಜನಿಕರಿಗೆ ಈ ಅನುಕೂಲ ಒದಗಿಸಲಾಗಿದೆ. ಇದನ್ನು ಅಕಾರ್ಡ್ ಡಿಸ್‍ಪ್ಲೇ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯು ಪಿಪಿಪಿ ಮಾದರಿಯಲ್ಲಿ ನಿರ್ಮಿಸಿದ್ದು, ಮುಂದಿನ 30 ವರ್ಷಗಳ ಕಾಲ ನಿರ್ವಹಿಸಲಿದೆ. ಜತೆಗೆ ಈ ಕಂಪನಿಯು ವರ್ಷಕ್ಕೆ 9.44 ಲಕ್ಷ ರೂ.ಗಳನ್ನು ಬಿಬಿಎಂಪಿಗೆ ಬಾಡಿಗೆ ಪಾವತಿಸಲಿದೆ ಎಂದು ಅವರು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಪಶ್ಚಿಮ ವಲಯದ ಆಯುಕ್ತ ದೀಪಕ್, ಆರೋಗ್ಯ ಆಯುಕ್ತ ಡಾ.ತ್ರಿಲೋಕಚಂದ್ರ, ಸ್ಟಾರ್ಟ್ ಅಪ್ ವಿಷನ್ ಗ್ರೂಪ್ ಅಧ್ಯಕ್ಷ ಪ್ರಶಾಂತ ಪ್ರಕಾಶ ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X