ಸಿಎಂ ಬೊಮ್ಮಾಯಿ ಭೇಟಿಯಾದ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್

ಬೆಂಗಳೂರು: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ (Pinarayi Vijayan) ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರನ್ನು ಇಂದು (ರವಿವಾರ) ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿದರು.
ಪಿಣರಾಯಿ ವಿಜಯನ್ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೂಗುಚ್ಛ ನೀಡಿ ಸ್ವಾಗತಿಸಿದರು.
ಉಭಯ ನಾಯಕರು ತಲಶ್ಶೇರಿ–ಮೈಸೂರು ಹಾಗೂ ನಿಲಂಬೂರು–ನಂಜನಗೂಡು ರೈಲ್ವೆ ಯೋಜನೆಯ ಅನುಷ್ಠಾನದ ಕುರಿತು ಚರ್ಚಿಸುವ ನಿರೀಕ್ಷೆ ಇದೆ.
ಈ ಸಂದರ್ಭದಲ್ಲಿ ವಸತಿ ಸಚಿವ ವಿ. ಸೋಮಣ್ಣ, ಕೇರಳ ಹಾಗೂ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಅಧಿಕಾರಿಗಳು ಹಾಜರಿದ್ದರು.
Hon'ble Chief Minister Shri @BSBommai had a fruitful meeting with Shri Pinarayi Vijayan, the Chief Minister of Kerala. Various issues of inter state and mutual interest were discussed.@pinarayivijayan pic.twitter.com/mvrqt8oeM8
— CM of Karnataka (@CMofKarnataka) September 18, 2022











