Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪ್ರಿಯಾಂಕ್ ಖರ್ಗೆಗೆ 'ಕಲ್ಯಾಣ ಕರ್ನಾಟಕ'ದ...

ಪ್ರಿಯಾಂಕ್ ಖರ್ಗೆಗೆ 'ಕಲ್ಯಾಣ ಕರ್ನಾಟಕ'ದ ಅಭಿವೃದ್ಧಿ ಬೇಕಾಗಿಲ್ಲ: ಸಿಎಂ ಬೊಮ್ಮಾಯಿ ಟೀಕೆ

ವಾರ್ತಾಭಾರತಿವಾರ್ತಾಭಾರತಿ18 Sept 2022 3:21 PM IST
share
ಪ್ರಿಯಾಂಕ್ ಖರ್ಗೆಗೆ ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಬೇಕಾಗಿಲ್ಲ: ಸಿಎಂ ಬೊಮ್ಮಾಯಿ ಟೀಕೆ

ಬೆಂಗಳೂರು, ಸೆ.18: ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ಹಿಂದುಳಿದಿರುವ ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಬೇಕಾಗಿಲ್ಲ. ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ 5,000 ಕೋಟಿ ರೂ. ಅನುದಾನ ಘೋಷಣೆ ಮಾಡಿರುವುದನ್ನು ಸ್ವಾಗತಿಸುವುದು ಬಿಟ್ಟು ವಿರೋಧಿಸುತ್ತಿರುವುದು ಏಕೆಂದು ನನಗೆ ಅರ್ಥವಾಗುತ್ತಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನುಡಿದರು.

ಅವರು ಇಂದು ಕೃಷ್ಣಾದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿ ಅವರು, 'ನಿನ್ನೆ ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ 5,000 ಕೋಟಿ ರೂ. ಅನುದಾನವನ್ನು ಮುಂದಿನ ಆಯವ್ಯಯದಲ್ಲಿ ಒದಗಿಸುವುದಾಗಿ ಅತ್ಯಂತ ಬದ್ಧತೆಯಿಂದಲೇ ಘೋಷಿಸಿದ್ದೇನೆ. ಕಳೆದ ವರ್ಷ 3,000 ಕೋಟಿ ರೂ. ಅನುದಾನ ಘೋಷಿಸಿದ್ದೆನು. ಅದನ್ನು ಆಯವ್ಯಯದಲ್ಲಿ ಒದಗಿಸಲಾಗಿದೆ. ಪ್ರಿಯಾಂಕ್ ಖರ್ಗೆ ಅವರು ಇದನ್ನು ಸ್ವಾಗತಿಸಬೇಕಾಗಿತ್ತು. ಆದರೆ ಅವರು ವಿರೋಧಿಸಿರುವುದನ್ನು ನೋಡಿದರೆ, ಈ ಪ್ರದೇಶ ಸದಾ ಹಿಂದುಳಿದಿರಲಿ ಎಂಬುದೇ ಅವರ ಇಚ್ಛೆಯಾ?' ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು. 

ಹಿಂದುಳಿದ ಪ್ರದೇಶದ ಅಭಿವೃದ್ಧಿಗೆ ಮುಂದಾದಾಗ ಎಲ್ಲರೂ ಅದಕ್ಕೆ ತಕ್ಕಂತೆ ಕೆಲಸ ಮಾಡಬೇಕು. ಇದರಲ್ಲಿ ರಾಜಕಾರಣದ ಮಾತಾಡುವುದು ಸರಿಯಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

''ಎಲ್ಲದಕ್ಕೂ ರಾಜಕಾರಣ ಸಲ್ಲದು''

ಬಳ್ಳಾರಿಯ ವಿಮ್ಸ್ ಘಟನೆಗೆ ಸಚಿವ ಡಾ. ಸುಧಾಕರ್ ಹೊಣೆ ಹೊರಬೇಕು ಎಂದು ಕಾಂಗ್ರೆಸ್ ಹೇಳಿರುವ ಕುರಿತು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಹಿಂದೆ ಕಾಂಗ್ರೆಸ್ ಅಧಿಕಾರಾವಧಿಯಲ್ಲಿ ಕರ್ನಾಟಕ ಖಾಸಗಿ ವೈದ್ಯರ ಮಸೂದೆಯನ್ನು ಮಂಡಿಸಿತ್ತು. ಇದನ್ನು ವಿರೋಧಿಸಿ, ರಾಜ್ಯದಾದ್ಯಂತ ಖಾಸಗಿ ವೈದ್ಯರು 5 ದಿನಗಳ ಕಾಲ ಮುಷ್ಕರ ನಡೆಸಿದ್ದರಿಂದ ಸುಮಾರು 80 ಜನರು ಮೃತಪಟ್ಟರು. ಆಗ ಅಂದಿನ ಆರೋಗ್ಯ ಸಚಿವರು ರಾಜೀನಾಮೆ ನೀಡಿದ್ದಾರಾ? ಎಂದು ತಿರುಗೇಟು ನೀಡಿದರು. ಎಲ್ಲದಕ್ಕೂ ರಾಜಕಾರಣ ಮಾಡುವ ಪ್ರವೃತ್ತಿ ಕಾಂಗ್ರೆಸ್ನದ್ದು ಎಂದು ನುಡಿದರು.

''ವ್ಯವಸ್ಥಿತ ಷಡ್ಯಂತ್ರ''

ತೆಲಂಗಾಣದಲ್ಲಿಯೂ 40 ಶೇ. ಸರ್ಕಾರ ಎಂಬ ಫ್ಲೆಕ್ಸ್ ಗಳನ್ನು ಅಳವಡಿಸಿರುವ ಕುರಿತು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಯವರು ಈ ಬಗ್ಗೆ ನನಗೆ ಗೊತ್ತಿಲ್ಲ. ಇದೊಂದು ವ್ಯವಸ್ಥಿತ ಷಡ್ಯಂತ್ರ. ನಮ್ಮ ರಾಜ್ಯದ ಬಗ್ಗೆ ತೆಲಂಗಾಣದಲ್ಲಿ ಹಾಕುವುದು ಎಷ್ಟು ಸಮಂಜಸ? ಇದನ್ನು ಖಾಸಗಿಯವರು ಮಾಡಿದ್ದಾರೋ ಅಥವಾ ಸರ್ಕಾರ ಹಾಕಿರುವುದೋ ನನಗೆ ಗೊತ್ತಿಲ್ಲ. ಇಂತಹ ಬೆಳವಣಿಗೆಗಳು ಉಭಯರಾಜ್ಯಗಳ ಸೌಹಾರ್ದತೆಗೆ ಧಕ್ಕೆ ತರುವುದು ಎಂದು ಮುಖ್ಯಮಂತ್ರಿಗಳೂ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X