ವಿಶ್ವಕರ್ಮ -ನಾರಾಯಣ ಗುರು ಜಯಂತಿ ಆಚರಣೆ: ಸಾಧಕರಿಗೆ ಸನ್ಮಾನ

ಉಡುಪಿ, ಸೆ.18: ಬಿಜೆಪಿ ಉಡುಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ ಭಗವಾನ್ ಶ್ರೀವಿಶ್ವಕರ್ಮ ಜಯಂತಿ ಮತ್ತು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ ಕಾರ್ಯಕ್ರಮವನ್ನು ರವಿವಾರ ಉಡುಪಿ ಬಿಜೆಪಿ ಕಚೇರಿಯಲ್ಲಿ ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಬಿಜೆಪಿ ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ಸುರೇಂದ್ರ ಪಣಿಯೂರು ವಹಿಸಿದ್ದರು. ಪ್ರಸಕ್ತ ಸಾಲಿನ ಕರ್ನಾಟಕ ರಾಜ್ಯ ಸರಕಾರದ ದೇವರಾಜ ಅರಸು ಪ್ರಶಸ್ತಿ ಪುರಸ್ಕೃತ ಡಾ.ಅಣ್ಣಯ್ಯ ಕುಲಾಲ್, ಅತ್ಯುತ್ತಮ ರಾಜ್ಯ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಸಂಜೀವ ದೇವಾಡಿಗ, ಕೊರಗ ಸಮುದಾಯದ ಗುರಿಕಾರ ಸುಂದರ ಕೊರಗ ಅವರನ್ನು ಸನ್ಮಾನಿಸಲಾಯಿತು.
ಭಗವಾನ್ ವಿಶ್ವಕರ್ಮರ ಕುರಿತು ಕಟಪಾಡಿ ಆನೆಗುಂದಿ ಸಂಸ್ಥಾನದ ಪವನ್ ಶರ್ಮ ಹಾಗೂ ಬ್ರಹ್ಮಶ್ರೀ ನಾರಾಯಣ ಗುರುಗಳ ಕುರಿತು ಉಡುಪಿಯ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ದಯಾನಂದ ಡಿ. ಉಪನ್ಯಾಸ ನೀಡಿದರು.
ಈ ಸಂದರ್ಭದಲ್ಲಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಎ.ಸುವರ್ಣ, ರಾಜ್ಯ ಒಬಿಸಿ ಮೋರ್ಚಾದ ಉಪಾಧ್ಯಕ್ಷ ಅಶೋಕ್ ಮೂರ್ತಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷೆ ಗೀತಾಂಜಲಿ ಸುವರ್ಣ, ಜಿಲ್ಲಾ ಒಬಿಸಿ ಮೋರ್ಚಾದ ಉಸ್ತುವಾರಿ ರೇಷ್ಮಾ ಉದಯ ಶೆಟ್ಟಿ ಉಪಸ್ಥಿತರಿದ್ದರು.
ಬಿಜೆಪಿ ಜಿಲ್ಲಾ ಒಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸತೀಶ್ ಕುಲಾಲ್ ಕಡಿಯಾಳಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಅರುಣ್ ಕುಮಾರ್ ಬಾಣ ವಂದಿಸಿದರು.







