Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಾನಸಿಕ ಆರೋಗ್ಯದ ಬಗ್ಗೆಯೂ ಹೆಚ್ಚಿನ ಗಮನ...

ಮಾನಸಿಕ ಆರೋಗ್ಯದ ಬಗ್ಗೆಯೂ ಹೆಚ್ಚಿನ ಗಮನ ಅಗತ್ಯ: ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್

ವಾರ್ತಾಭಾರತಿವಾರ್ತಾಭಾರತಿ19 Sept 2022 6:25 PM IST
share
ಮಾನಸಿಕ ಆರೋಗ್ಯದ ಬಗ್ಗೆಯೂ ಹೆಚ್ಚಿನ ಗಮನ ಅಗತ್ಯ: ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್

ಉಡುಪಿ, ಸೆ.19: ದೈಹಿಕ ವಿಕಲತೆಯ ಜೊತೆಗೆ ಮಾನಸಿಕ ಆರೋಗ್ಯದ ಬಗ್ಗೆಯೂ ಹೆಚ್ಚು ಗಮನ ಕೊಡಬೇಕಾಗಿದೆ. ಆಟಿಸಂ ಹಾಗೂ ಮಾನಸಿಕ ಕಾಯಿಲೆಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದು ಇಂದಿನ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಗ್ರಾಮೀಣ ಪ್ರದೇಶದಲ್ಲಿ ಸೇತುವೆಯಾಗಿ ಕೆಲಸ ಮಾಡಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಹೇಳಿದ್ದಾರೆ.

ಉಡುಪಿ ಜಿಲ್ಲಾಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ದೊಡ್ಡಣಗುಡ್ಡೆ ಡಾ.ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆ, ಕಮಲಾ ಬಾಳಿಗಾ ಚಾರಿ ಟೇಬಲ್ ಟ್ರಸ್ಟ್, ಬೆಂಗಳೂರು ಡಿಸೆಬಿಲಿಟಿ ಎನ್‌ಜಿಓ ಅಲಯನ್ಸ್(ಡಿಎನ್‌ಎ) ಹಾಗೂ ಉಡುಪಿ ಆಟಿಸಂ ಸೊಸೈಟಿಗಳ ಸಂಯುಕ್ತ ಆಶ್ರಯದಲ್ಲಿ ಜಿಲ್ಲೆಯ ಗ್ರಾಮೀಣ ಪುನರ್ವಸತಿ ಹಾಗೂ ತಾಲೂಕು ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರಿಗೆ ಎ.ವಿ.ಬಾಳಿಗಾ ಆಸ್ಪತ್ರೆಯಲ್ಲಿ ಆಯೋಜಿಸಲಾದ ಸ್ವಲೀನತೆ ಹಾಗೂ ಇತರ ವೈಕಲ್ಯತೆಗಳ ಕುರಿತ ಎರಡು ದಿನಗಳ ಜಾಗೃತಿ ಕಾರ್ಯಾಗಾರ ‘ಸಿಂಚನ’ ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಕಾರ್ಯಕರ್ತರಿಗೆ ಈ ಸಂಬಂಧ ಕಾನೂನು, ರೋಗಗಳ ಕುರಿತು ಜ್ಞಾನ ನೀಡಿದರೆ, ವಿಕಲಚೇತನರು, ಆಟಿಸಂ ಪೀಡಿತರನ್ನು ಆಸ್ಪತ್ರೆ ಹಾಗೂ ಸರಕಾರದ ಯೋಜನೆಗೆ ಲಿಂಕ್ ಮಾಡಲು ಅನುಕೂಲವಾಗುತ್ತದೆ. ಅಲ್ಲದೆ ಈ ಮಾಹಿತಿ ಗಳು ಕಾರ್ಯಕರ್ತರ ಮೂಲಕ ಗ್ರಾಮೀಣ ಪ್ರದೇಶದ ಜನರಿಗೆ ತಲುಪಬೇಕು. ವಿಕಲಚೇತನರಾಗಿದ್ದರೂ ಪ್ರತಿಯೊಬ್ಬ ಮನುಷ್ಯರಲ್ಲಿ ಅವರದ್ದೆ ಆದ ಶಕ್ತಿ ಸಾಮರ್ಥ್ಯ ಇರುತ್ತದೆ. ಅದನ್ನು ಗುರುತಿಸುವ ಕಾರ್ಯ ಅತೀ ಮುಖ್ಯವಾಗಿ ಆಗಬೇಕು. ಈ ವಿಚಾರದಲ್ಲಿ ಕಾರ್ಯಕರ್ತರಿಗೆ ಸೂಕ್ಷ್ಮತೆ ಇರಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಉಡುಪಿ ಆಟಿಸಂ ಸೂಸೈಟಿಯ ಅಧ್ಯಕ್ಷ ಹಾಗೂ ಹಿರಿಯ ಮನೋವೈದ್ಯ ಡಾ.ಪಿ.ವಿ.ಭಂಡಾರಿ ಮಾತನಾಡಿ, ಮಾನಸಿಕ ಕಾಯಿಲೆಗಳು ಕೂಡ ಅಂಗವೈಕಲ್ಯತೆ ಎಂಬುದಾಗಿ ಸರಕಾರ ಘೋಷಣೆ ಮಾಡಿದೆ. ಅಂಗ ವೈಕಲ್ಯತೆಯನ್ನು ಅತೀ ಬೇಗ ಪತ್ತೆ ಹಚ್ಚಿ, ಸೂಕ್ತ ಚಿಕಿತ್ಸೆ ನೀಡಬೇಕಾಗಿದೆ. ಇಲ್ಲಿ ಚಿಕಿತ್ಸೆ ಅಂದರೆ ಮಾತ್ರೆ, ಔಷಧಗಳಲ್ಲ. ವಿವಿಧ ರೀತಿಯ ಥೆರಫಿಗಳು ಅತೀ ಮುಖ್ಯ. ಆದುದರಿಂದ ಇದರಲ್ಲಿ ವೈದ್ಯರಿಗಿಂತ ಥೆರಫಿಸ್ಟ್‌ಗಳ ಪಾತ್ರ ಹೆಚ್ಚು ಎಂದು ತಿಳಿಸಿದರು.

ನಿಟ್ಟಿನಲ್ಲಿ ಈಗಾಗಲೇ ಆಶಾ ಕಾರ್ಯಕರ್ತರಿಗೆ ಮಾಹಿತಿ ನೀಡಲಾಗಿದೆ. ಮುಂದೆ ಅಂಗನವಾಡಿ ಕಾರ್ಯಕರ್ತರಿಗೂ ಮಾಹಿತಿ ನೀಡಲಾಗುವುದು.

ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿ ರತ್ನ, ಡಿಎನ್‌ಎ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕುಮಾರಸ್ವಾಮಿ, ಕರಾವಳಿ ಅಧ್ಯಕ್ಷೆ ಪೂರ್ಣಿಮಾ ಭಟ್ ಮಾತನಾಡಿದರು. ಮಾನೋರೋಗ ತಜ್ಞ ಡಾ.ತಿಪ್ಪೆಸ್ವಾಮಿ ಉಪಸ್ಥಿತರಿದ್ದರು.

ಆಟಿಸಂ ಸೊಸೈಟಿಯ ಸಂಯೋಜಕ ಕೀರ್ತೆಶ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಆಸ್ಪತ್ರೆಯ ಆಡಳಿತಾಧಿಕಾರಿ ಸೌಜನ್ಯ ಶೆಟ್ಟಿ ವಂದಿಸಿದರು. ಸಮಾಲೋಚಕಿಯರಾದ ದೀಪಾಶ್ರೀ ಹಾಗೂ ಸುಚಿತ್ರಾ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X