Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಅ.5ರಿಂದ ಉಡುಪಿ ಜಿಲ್ಲೆಯ ಗ್ರಾಪಂ...

ಅ.5ರಿಂದ ಉಡುಪಿ ಜಿಲ್ಲೆಯ ಗ್ರಾಪಂ ವ್ಯಾಪ್ತಿಯಲ್ಲಿ ಮರಳು ಲಭ್ಯ: ಸಿಇಓ ಪ್ರಸನ್ನ

ವಾರ್ತಾಭಾರತಿವಾರ್ತಾಭಾರತಿ19 Sept 2022 7:52 PM IST
share
ಅ.5ರಿಂದ ಉಡುಪಿ ಜಿಲ್ಲೆಯ ಗ್ರಾಪಂ ವ್ಯಾಪ್ತಿಯಲ್ಲಿ ಮರಳು ಲಭ್ಯ: ಸಿಇಓ ಪ್ರಸನ್ನ

ಉಡುಪಿ, ಸೆ.19: ಹೊಸ ಮರಳು ನೀತಿಯಲ್ಲಿ ಸೂಚಿಸಿದಂತೆ, ಜಿಲ್ಲೆಯ ವಿವಿಧ ಗ್ರಾಮ ಪಂಚಾಯತ್‌ಗಳ ವ್ಯಾಪ್ತಿಯ ಹಳ್ಳ ಮತ್ತು ಕೆರೆಗಳಲ್ಲಿ ಈಗಾಗಲೇ  ಗುರುತಿಸಿರುವ ಮರಳು ನಿಕ್ಷೇಪಗಳಲ್ಲಿ ಲಭ್ಯವಿರುವ ಮರಳನ್ನು ಅಕ್ಟೋಬರ್ 5ರಿಂದ ತೆಗೆಯಲು  ಸಂಬಂಧಪಟ್ಟ ಗ್ರಾಮ ಪಂಚಾಯತ್‌ಗಳಲ್ಲಿ ಎಲ್ಲಾ ಅಗತ್ಯ ಸಿದ್ದತೆಗಳನ್ನು  ಮಾಡಿಕೊಳ್ಳುವಂತೆ ಉಡುಪಿ ಜಿಲ್ಲಾ ಪಂಚಾಯತ್‌ನ  ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಎಚ್. ಸೂಚಿಸಿದ್ದಾರೆ.

ಸೋಮವಾರ ಮಣಿಪಾಲದಲ್ಲಿರುವ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ,  ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮರಳು ತೆಗೆಯಲು ಅನುಮತಿ ನೀಡುವ  ತಂತ್ರಾಂಶ ಬಳಕೆ ಬಗ್ಗೆ  ತಾಪಂ ಕಾರ್ಯ ನಿರ್ವಹಣಾಧಿಕಾರಿಗಳು, ಗ್ರಾಪಂಗಳ ಅಧ್ಯಕ್ಷರು ಮತ್ತು ಪಿಡಿಓಗಳಿಗೆ ಆಯೋಜಿಸಿದ್ದ ತರಬೇತಿ ಕಾರ್ಯಗಾರದಲ್ಲಿ  ಅವರು ಮಾತನಾಡುತಿದ್ದರು.

ಹೊಸ ಮರಳು ನೀತಿ-2020 ಮತ್ತು 2021ರಂತೆ, ಮೊದಲನೇ, ಎರಡನೇ ಮತ್ತು ಮೂರನೇ ಶ್ರೇಣಿಯ ಹಳ್ಳ ಮತ್ತು ತೊರೆಗಳಲ್ಲಿ ಮರಳು ನಿಕ್ಷೇಪಗಳಲ್ಲಿ ಲಭ್ಯವಿರುವ ಮರಳನ್ನು ತೆಗೆಯಲು ಅವಕಾಶ ಕಲ್ಪಿಸಿದ್ದು, ಅದರಂತೆ ಜಿಲ್ಲೆಯ ಕಾರ್ಕಳ, ಹೆಬ್ರಿ, ಕಾಪು, ಕುಂದಾಪುರ ಮತ್ತು ಬೈಂದೂರು ತಾಲೂಕು ಪಂಚಾಯತ್ ವ್ಯಾಪ್ತಿಯಲ್ಲಿ 35 ಮರಳು ನಿಕ್ಷೇಪಗಳಲ್ಲಿ ಒಟ್ಟು 49,903 ಮೆಟ್ರಿಕ್ ಟನ್ ಪ್ರಮಾಣದ ಮರಳನ್ನು ಗುರುತಿಸಲಾಗಿದೆ. ಇದನ್ನು ಅಕ್ಟೋಬರ್ 5ರಿಂದ ತೆರವುಗೊಳಿಸಲು ಸಂಬಂದಪಟ್ಟ ಪಂಚಾಯತ್‌ಗಳ ವ್ಯಾಪ್ತಿಯಲ್ಲಿ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಅವರು ತಿಳಿಸಿದರು.

ಮರಳು ನಿಕ್ಷೇಪಗಳನ್ನು ತೆರವುಗೊಳಿಸಲು ಈಗಾಗಲೇ ಪಂಚಾಯತ್‌ಗಳಿಗೆ ಆಶಯ ಪತ್ರಗಳನ್ನು  ನೀಡಲಾಗಿದ್ದು,  ಗ್ರಾಪಂ ವ್ಯಾಪ್ತಿಯ ಗ್ರಾಹಕರು ಮತ್ತು ಸರಕಾರಿ ಸ್ಥಳೀಯ ಕಾಮಗಾರಿಗಳ ಗುತ್ತಿಗೆದಾರರು, ಸರಕಾರದಿಂದ ನಿಗದಿ ಪಡಿಸಿದ ಗರಿಷ್ಠ ಮಾರಾಟ ದರವನ್ನು  ಗಾಪಂಗಳಿಗೆ ಪಾವತಿಸಿ, ರವಾನೆ ಪರವಾನಗಿ ಪಡೆದು, ಕಡಿಮೆ ಹೇರು ಭಾರ ಸಾಮರ್ಥ್ಯದ ವಾಹನಗಳಲ್ಲಿ ಮರಳನ್ನು ಸ್ವಂತ ಖರ್ಚಿನಲ್ಲಿ ತುಂಬಿಸಿ ಸಾಗಾಟ ಮಾಡಬಹುದು ಎಂದರು.

ಗ್ರಾಮ ಪಂಚಾಯತ್‌ಗಳು ಗ್ರಾಹಕರಿಂದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ರಾಜಧನ ಹಾಗೂ ಅನ್ವಯವಾಗುವ ಇತರೆ ಶುಲ್ಕಗಳನ್ನು ಸ್ವೀಕರಿಸಿ, ವಿಶೇಷ ರಕ್ಷಣಾತ್ಮಕವುಳ್ಳ ಸಾಗಾಣಿಕೆ ಪರವಾನಗಿಯನ್ನು  ಗ್ರಾಹಕರಿಗೆ ನೀಡಬೇಕು. ಈ ಕುರಿತಂತೆ ಅಗತ್ಯವಿರುವ ಎಲ್ಲಾ ರೀತಿಯ ತಾಂತ್ರಿಕ ತರಬೇತಿ ಮತ್ತು ನೆರವನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಮೂಲಕ ಪಡೆಯುವಂತೆ ಸಿಇಓ ತಿಳಿಸಿದರು.

ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಈಗಾಗಲೇ ಗುರುತಿಸಿರುವ ನಿಕ್ಷೇಪಗಳಲ್ಲಿ ನಿರೀಕ್ಷಿತ ಪ್ರಮಾಣದ ಮರಳು ಇಲ್ಲದೇ ಇರುವ ಬಗ್ಗೆ ಅಥವಾ ಆ ಪ್ರದೇಶದಲ್ಲಿ ಮರಳು ತೆಗೆಯಲು ಅಡೆತಡೆಗಳಿದ್ದಲ್ಲಿ ಆಥವಾ ಹೊಸ ಪ್ರದೇಶದಲ್ಲಿ ಮರಳು ಲಭ್ಯವಿರುವ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಮಾಹಿತಿ ನೀಡಿ, ಅಗತ್ಯ ಸ್ಥಳ ಬದಲಾವಣೆಯನ್ನು ಮಾಡಿಕೊಳ್ಳಲು ಅವಕಾಶವಿದೆ ಎಂದೂ ಪ್ರಸನ್ನ ಎಚ್. ವಿವರಿಸಿದರು.

ಮುಂಜಾನೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮಾತ್ರ ಮರಳು ತೆಗೆಯುವ ಹಾಗೂ ಸಾಗಾಣಿಕೆ ಕಾರ್ಯವನ್ನು ನಿರ್ವಹಿಸುವಂತೆ, ಅಲ್ಲದೇ ಯಾವುದೇ ಸಂದರ್ಭದಲ್ಲೂ ಅನಧಿಕೃತ ಮರಳು ಗಣಿಗಾರಿಕೆ ಮತ್ತು ಸಾಗಾಣಿಕೆಯಾಗದಂತೆ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದರು.

ಮರಳು ತೆಗೆಯುವ ಪ್ರದೇಶದಲ್ಲಿ ಯಾವುದೇ ಕಾರಣಕ್ಕೂ ಯಂತ್ರೋಪಕರಣ ಬಳಕೆ ಮಾಡದಂತೆ ಸೂಚನೆ ನೀಡಿದ  ಅವರು, ಪರವಾನಗಿ ಪಡೆದ ಪ್ರಮಾಣಕ್ಕೆ ಅನುಗುಣವಾಗಿ ಮಾತ್ರ ಮರಳು ತೆಗೆದು, ಸಾಗಾಟ ಮಾಡುವ ಬಗ್ಗೆ ಸ್ಥಳದಲ್ಲಿ ಹಾಜರಿದ್ದು ಪರಿಶೀಲಿಸುವಂತೆ ಹಾಗೂ  ಸ್ಥಳೀಯ ನಿರ್ಮಾಣ ಚಟುವಟಿಕೆಗಳಿಗೆ ಮರಳಿನ ಸದುಪಯೋಗವಾಗುವಂತೆ ನೋಡಿಕೊಳ್ಳಬೇಕು ಎಂದರು.

ಮರಳು ತೆಗೆಯಲು ನಿಗದಿತ ಶುಲ್ಕ ಸಂಗ್ರಹ, ಸಾಗಾಟ ಪರವಾನಗಿ ನೀಡುವ  ಕುರಿತ ತಂತ್ರಾಂಶ ಬಳಕೆ ಮಾಡುವ ಬಗ್ಗೆ ಸಂಬಂಧಿತರಿಗೆ ತರಬೇತಿ ನೀಡಲಾಯಿತು.

ಸಭೆಯಲ್ಲಿ ಜಿಪಂನ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಸಂದೀಪ್ ಹಾಗೂ   ತಾಪಂಗಳ ಕಾರ್ಯ ನಿರ್ವಹಣಾಧಿಕಾರಿಗಳು, ವಿವಿಧ ಗ್ರಾಮ ಪಂಚಾಯತ್‌ಗಳ ಅಧ್ಯಕ್ಷರು ಮತ್ತು ಪಿಡಿಓಗಳು ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X