Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದಾವಣಗೆರೆ: ಸಾಲುಮರದ ವೀರಾಚಾರ್...

ದಾವಣಗೆರೆ: ಸಾಲುಮರದ ವೀರಾಚಾರ್ ಆತ್ಮಹತ್ಯೆ

ನ್ಯಾಯ ಸಿಗದೆ ಮನನೊಂದಿದ್ದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪರಿಸರ ಪ್ರೇಮಿ

ವಾರ್ತಾಭಾರತಿವಾರ್ತಾಭಾರತಿ20 Sept 2022 11:18 AM IST
share
ದಾವಣಗೆರೆ:  ಸಾಲುಮರದ ವೀರಾಚಾರ್ ಆತ್ಮಹತ್ಯೆ

ದಾವಣಗೆರೆ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪರಿಸರ ಪ್ರೇಮಿ, ಸಾಲುಮರದ ವೀರಾಚಾರ್ (70) ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

ದಾವಣಗೆರೆ ಮತ್ತು ಹರಿಹರ ತಾಲೂಕಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಲುಮರ ನೆಟ್ಟು ಪೋಷಿಸುತ್ತಿದ್ದ ಅವರ ಪರಿಸರ ಕಾಳಜಿಗೆ ಕರ್ನಾಟಕ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿತ್ತು.

ಮಿಟ್ಲಕಟ್ಟೆ ನ್ಯಾಯಬೆಲೆ ಅಂಗಡಿ ವಿಚಾರವಾಗಿ ಗ್ರಾಮಸ್ಥರೊಂದಿಗೆ ಹಲವಾರು ಬಾರಿ ಹೋರಾಟ ನಡೆಸಿದ್ದರು. ನ್ಯಾಯಬೆಲೆ ಅಂಗಡಿಯನ್ನು ಬೇರೆಯವರಿಗೆ ವಹಿಸಬೇಕು ಎಂದು ಅವರ ಒತ್ತಾಯವಾಗಿತ್ತು. ಆದರೆ, ಈಡೇರಲಿಲ್ಲ ಎಂಬ ಕಾರಣಕ್ಕೆ ಮನನೊಂದು ಸೋಮವಾರ ತಡರಾತ್ರಿ ಗ್ರಾಮದ ಮಧ್ಯದಲ್ಲಿನ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಸಾಲುಮರದ ವೀರಾಚಾರ್ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವಿಷಯ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದಾರೆ. ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬೇಡಿಕೆಗೆ ಸ್ಪಂದನೆ ದೊರಕದ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ತಹಶೀಲ್ದಾರ್ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸೂಕ್ತ ನ್ಯಾಯ ಒದಗಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ.

ಮೃತರು ಪತ್ನಿ, ಇಬ್ಬರು ಪುತ್ರಿಯರು, ಓರ್ವ ಪುತ್ರ ಹಾಗು ಅಪಾರ ಬಂಧು ಬಳಗ ಅಗಲಿದ್ದಾರೆ.

ದಾವಣಗೆರೆಯ ಮಿಟ್ಲುಗಟ್ಟೆ ಸಾಲುಮರದ ವೀರಾಚಾರಿ ಎಂದೇ ಪ್ರಖ್ಯಾತವಾಗಿರುವ ಇವರು 3000ಕ್ಕೂ ಹೆಚ್ಚು ಮರಗಳನ್ನು ಬೆಳೆಸಿ ರಾಜ್ಯೋತ್ಸವ ಪ್ರಶಸ್ತಿ ಇನ್ನು ಹಲವಾರು ನೂರಾರು ಪ್ರಶಸ್ತಿಗಳನ್ನು ಪಡೆದು ನಾಡಿಗೆ ಅನನ್ಯ ಸೇವೆಯನ್ನು ಸಲ್ಲಿಸಿರುತ್ತಾರೆ.

ಇವರು ಮಿಟ್ಲಗಟ್ಟೆ ಊರಿನ ಒಂದು ನ್ಯಾಯಬೆಲೆ ಅಂಗಡಿಯಲ್ಲಿ ಆಗುತ್ತಿರುವ ಅನ್ಯಾಯದ ವಿರುದ್ಧ ಹೋರಾಟ ಮಾಡುತ್ತಿದ್ದರು. "ನ್ಯಾಯಾಲಯದಲ್ಲಿ ನ್ಯಾಯ ಸಿಗದಿದ್ದರೆ, ಜನರಲ್ಲಿ ನ್ಯಾಯ ಸಿಗದಿದ್ದರೆ ದೇವರಲ್ಲಿ ನ್ಯಾಯ ಸಿಗದಿದ್ದರೆ ನೇಣಿಗೆ ಶರಣು" ಎಂಬ ವಾಗ್ದಾನ ಮಾಡಿದ್ದರು. ವಾಗ್ದಾನದಂತೆ ನಿನ್ನೆ ರಾತ್ರಿ 2 ಗಂಟೆಗೆ ನೇಣಿಗೆ ಶರಣಾಗಲಿದ್ದಾರೆ ಎಂದು ತಿಳಿದುಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X