ಕಾಂಗ್ರೆಸ್ನಲ್ಲಿ ಯಾವುದೇ ವ್ಯಕ್ತಿ ಎರಡು ಹುದ್ದೆಗಳನ್ನು ಹೊಂದಲು ಸಾಧ್ಯವಿಲ್ಲ: ಸಚಿನ್ ಪೈಲಟ್

ಸಚಿನ್ ಪೈಲಟ್ (PTI)
ಹೊಸದಿಲ್ಲಿ: ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಕಾಂಗ್ರೆಸ್(Congress) ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲಿದ್ದಾರೆ ಎಂಬ ವರದಿಗಳ ನಡುವೆ "ಕಾಂಗ್ರೆಸ್ನಲ್ಲಿ ಯಾವುದೇ ವ್ಯಕ್ತಿ ಎರಡು ಹುದ್ದೆಗಳನ್ನು ಹೊಂದಲು ಸಾಧ್ಯವಿಲ್ಲ" ಎಂದು ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ (Sachin Pilot) NDTVಗೆ ತಿಳಿಸಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ರೇಸ್ ನಲ್ಲಿ ಮುಂಚೂಣಿಯಲ್ಲಿರುವ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ನಿನ್ನೆ ರಾತ್ರಿ ತಮ್ಮ ಶಾಸಕರನ್ನು ಭೇಟಿಯಾಗಿ ತಾನು ರಾಷ್ಟ್ರೀಯ ರಾಜಕಾರಣಕ್ಕೆ ಹೋದರೂ ನಿಮ್ಮಿಂದ "ದೂರವಿರಲಾರೆ" ಎಂದು ಹೇಳಿದ್ದರು ಎಂದು ಮೂಲಗಳು ತಿಳಿಸಿವೆ.
71ರ ಹರೆಯದ ಅಶೋಕ್ ಗೆಹ್ಲೋಟ್ ಅವರು ರಾಜಸ್ಥಾನದ ಶಾಸಕರಿಗೆ ತಾವು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸುವುದಾಗಿ ಹೇಳಿದ್ದಾಗಿ ತಿಳಿದು ಬಂದಿದೆ. ಆದರೆ ನಾನು ನಿಮ್ಮಿಂದ ದೂರವಿರುವುದಿಲ್ಲ" ಎಂದು ಹೇಳಿದ್ದಾರೆಂದು ಗೊತ್ತಾಗಿದೆ.
ಕೇರಳದಲ್ಲಿ ಭಾರತ್ ಜೋಡೋ ಯಾತ್ರೆಯಲ್ಲಿದ್ದ ಸಚಿನ್ ಪೈಲಟ್ ಈ ಸಭೆಯಲ್ಲಿ ಭಾಗವಹಿಸಿರಲಿಲ್ಲ.





