ಎಸ್.ಡಿ.ಪಿ.ಐ. ಬಂಟ್ವಾಳ ಕ್ಷೇತ್ರ ಅಧ್ಯಕ್ಷರಾಗಿ ಮೂನಿಶ್ ಅಲಿ ಆಯ್ಕೆ

ಮೂನಿಶ್ ಅಲಿ ಬಂಟ್ವಾಳ
ಬಂಟ್ವಾಳ: ಎಸ್.ಡಿ.ಪಿ.ಐ. ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿಯ ನೂತನ ಅಧ್ಯಕ್ಷರಾಗಿ ಮೂನಿಶ್ ಅಲಿ ಬಂಟ್ವಾಳ ಅವರು ಆಯ್ಕೆಯಾಗಿದ್ದಾರೆ.
ಮಂಗಳವಾರ ಪಕ್ಷದ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಅಬೂಬಕ್ಕರ್ ಕುಲಾಯಿ ಅವರ ಅಧ್ಯಕ್ಷತೆಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿಯ ಚುಣಾವಣಾ ಪ್ರಕ್ರಿಯೆ ನಡೆಯಿತು.
ಸಭೆಯಲ್ಲಿ ನೂತನ ಅಧ್ಯಕ್ಷರಾಗಿ ಬಂಟ್ವಾಳ ಪುರಸಭಾ ಸದಸ್ಯ ಮೂನಿಶ್ ಅಲಿ ಆಯ್ಕೆಯಾದರೆ, ಕಾರ್ಯದರ್ಶಿಯಾಗಿ ಕಲಂದರ್ ಪರ್ತಿಪ್ಪಾಡಿ, ಉಪಾಧ್ಯಕ್ಷರಾಗಿ ಅನ್ವರ್ ಬಡಕಬೈಲು ಹಾಗೂ ಸಂಘಟನಾ ಕಾರ್ಯದರ್ಶಿಯಾಗಿ ಇಕ್ಬಾಲ್ ನಂದರಬೆಟ್ಟು ಆಯ್ಕೆಯಾದರು.
ಈ ಸಂದರ್ಭದಲ್ಲಿ ಎಸ್.ಡಿ.ಪಿ.ಐ. ಬಂಟ್ವಾಳ ಕ್ಷೇತ್ರ ಸಮಿತಿ ನಿಟಕ ಪೂರ್ವ ಅಧ್ಯಕ್ಷ ಶಾಹುಲ್ ಹಮೀದ್ ಎಸ್.ಎಚ್., ಜಿಲ್ಲಾ ಸಂಘಟನಾ ಕಾರ್ಯದರ್ಶಿ ಜಮಾಲ್ ಜೋಕಟ್ಟೆ, ಜಿಲ್ಲಾ ಸಮಿತಿ ಕಾರ್ಯದರ್ಶಿ ಶಾಕಿರ್ ಅಲಕೆಮಜಲು, ಜಿಲ್ಲಾ ಸಮಿತಿ ಸದಸ್ಯರಾದ ಯೂಸುಫ್ ಆಲಡ್ಕ ಉಪಸ್ಥಿತರಿದ್ದರು.
Next Story