ಹನೂರು: ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ಹಳ್ಳಕ್ಕೆ ಬಿದ್ದ ಕಾರು; 6 ಮಂದಿ ಪ್ರಯಾಣಿಕರಿಗೆ ಗಾಯ

ಕೊಳ್ಳೇಗಾಲ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಪರಿಣಾಮ 6 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಜಿಲ್ಲೆಯ ಹನೂರು ಪಟ್ಟಣದಲ್ಲಿ ಸಂಭವಿಸಿದೆ.
ಕೊಳ್ಳೇಗಾಲ ಮೂಲಕ ಹನೂರಿಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹನೂರಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮೀಪದ ಸ್ವಾಮಿಹಳ್ಳದ ಎಡಬದಿಯಲ್ಲಿನ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ. ವಿದ್ಯುತ್ ಕಂಬ ತುಂಡಾಗಿ ಕೆಶಿಪ್ ರಸ್ತೆ ಕಾಮಗಾರಿಗಾಗಿ ಅಗೆಯಲಾಗಿದ್ದ ಗುಂಡಿಗೆ ಬಿದ್ದಿದೆ ಎಂದು ತಿಳಿದುಬಂದಿದೆ.
ಅಪಘಾತದಲ್ಲಿ 6 ಮಂದಿ ಗಾಯಗೊಂಡಿದ್ದು, ಇವರಲ್ಲಿ ಓರ್ವರ ಸ್ಥಿತಿ ಗಂಭೀರವಾಗಿದ್ದು, ಇವರನ್ನು ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಉಳಿದವರನ್ನು ಕಾಮಗೆರೆಯ ಹೋಲಿಕ್ರಾಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ: ನಾಳೆ (ಸೆ.22) ಸದನದಲ್ಲಿ ಸಚಿವರೊಬ್ಬರ ಅಕ್ರಮ ಬಯಲು ಮಾಡುವೆ: ಎಚ್.ಡಿ ಕುಮಾರಸ್ವಾಮಿ

Next Story







