Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದಲಿತ ಬಾಲಕನಿಗೆ ಬಹಿಷ್ಕಾರ ಹಾಕಿರುವುದು...

ದಲಿತ ಬಾಲಕನಿಗೆ ಬಹಿಷ್ಕಾರ ಹಾಕಿರುವುದು ಖೇದಕರ: ಪೇಜಾವರ ಶ್ರೀ

ವಾರ್ತಾಭಾರತಿವಾರ್ತಾಭಾರತಿ21 Sept 2022 4:39 PM IST
share
ದಲಿತ ಬಾಲಕನಿಗೆ ಬಹಿಷ್ಕಾರ ಹಾಕಿರುವುದು ಖೇದಕರ: ಪೇಜಾವರ ಶ್ರೀ

ಉಡುಪಿ, ಸೆ.21: ಮಾಲೂರಿನಲ್ಲಿ ಉತ್ಸವದ ಸಂದರ್ಭ ಪಲ್ಲಕ್ಕಿ ಮುಟ್ಟಿದ್ದಕ್ಕೆ ದಲಿತ ಬಾಲಕನಿಗೆ ಸವರ್ಣೀಯರು ಬಹಿಷ್ಕಾರ ಹಾಕಿರುವ ವಿಚಾರ ಕೇಳಿ ಬಹಳ ಖೇದವಾಗಿದೆ. ಧರ್ಮ ಗ್ರಂಥಗಳು ಇಂತಹ ಬೆಳವಣಿಗೆಯನ್ನು ಒಪ್ಪುವುದಿಲ್ಲ. ಉತ್ಸವ ಇಡೀ ಊರಿಗೆ ಸಂಬಂಧಿಸಿದ ಕಾರ್ಯಕ್ರಮವಾಗಿದ್ದು, ಬಹಿಷ್ಕಾರ ಶಿಕ್ಷೆ ದಂಡವನ್ನು ಯಾವ ಧರ್ಮಗ್ರಂಥವು ಒಪ್ಪುವುದಿಲ್ಲ ಎಂದು ಪೇಜಾವರ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.

ಉಡುಪಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಿಂದೂ ಸಂಘಟನೆಗಳು ಪಿಡುಗಿನ ವಿರುದ್ಧ ಜಾಗೃತಿ ಮೂಡಿಸುತ್ತಿದೆ. ಸರಕಾರ ಕೂಡ ಜಾಗೃತಿ ಕಾರ್ಯಕ್ರಮಗಳನ್ನು ರೂಪಿಸಬೇಕು. ತಪ್ಪು ಮಾಡಿದವರನ್ನು ಶಿಕ್ಷಿಸಿದರೆ ಸಾಲದು, ಜಾಗೃತ ಕಾರ್ಯಕ್ರಮ ಆಗಬೇಕು. ಸಮಾಜ ಮತ್ತು ಧರ್ಮ ಒಪ್ಪದ ಚಟುವಟಿಕೆಗಳಿಗೆ ಯಾರು ಇಳಿಯಬಾರದು ಎಂದರು.

ಶಿವಮೊಗ್ಗಕ್ಕೆ ಉಗ್ರರ ಪ್ರವೇಶವಾಗಿದೆ ಎಂದು ಕೇಳಿ ನಮಗೆ ತೀವ್ರ ಖೇದ ವಾಗಿದೆ. ಮಂಗಳೂರು ಉಡುಪಿ ಭಾಗದಲ್ಲೂ ಇಂತಹ ಚಟುವಟಿಕೆ ನಡೆದಿದೆ. ಸ್ಯಾಟಲೈಟ್ ಫೋನ್ ಗಳ ಮೂಲಕ ಸಂಭಾಷಣೆ ನಡೆಯುವುದು ನಮ್ಮ ಗಮನಕ್ಕೆ ಬಂದಿತ್ತು. ನಿಖರವಾದ ಮಾಹಿತಿಗಳ ಜೊತೆಗೆ ಇದನ್ನು ಪರಿಶೀಲನೆ ಮಾಡಬೇಕು. ಪ್ರಕರಣದಲ್ಲಿ ಹತ್ತು ಹಲವು ಜನಭಾಗಿ ಆಗಿರುವ ಸಾಧ್ಯತೆ ಇದೆ ಎಂದು ಪೇಜಾವರ ಶ್ರೀ ಸಂಶಯ ವ್ಯಕ್ತಪಡಿಸಿದರು.

ಉಗ್ರರ ವಿರುದ್ಧ ಕೂಂಬಿಂಗ್ ಮಾದರಿಯಲ್ಲಿ ಪರಿಶೀಲನೆ ಆಗಬೇಕು. ಸಮಾಜದ ಶಾಂತಿ ಕದಡೋದನ್ನು ತಪ್ಪಿಸಬೇಕು. ಉಗ್ರರಿಂದ ಸಮಾಜದಲ್ಲಿ ಯಾರಿಗೂ ನೆಮ್ಮದಿ ಇಲ್ಲ. ಸಮಾಜದ ಶಾಂತಿ ಕದಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮವಾಗಬೇಕು. ಯಾವುದೇ ಕೋಮಿನ ಬಣ್ಣ ನೀಡದೆ ಭಯೋತ್ಪಾದನೆಯನ್ನು ನಿಗ್ರಹ ಮಾಡಬೇಕು. ಭಾರತ ದೇಶದ ಒಳಗೆ ಇರುವವರು ಭಾರತೀಯರು. ದೇಶದ ಯಾವುದೇ ಭಾಗದಲ್ಲಿ ಉಗ್ರರ ನೆರಳು ಹಾಯಬಾರದು. ಕೇಂದ್ರ ಹಾಗೂ ರಾಜ್ಯ ಸರಕಾರಗಳು ಕಟ್ಟುನಿಟ್ಟಿದ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X