ಉಡುಪಿ: ಸೆ.23ರಂದು ಕಸ ಸಂಗ್ರಹಣೆ ಇಲ್ಲ

ಉಡುಪಿ, ಸೆ.21: ಉಡುಪಿ ನಗರಸಭೆಯ ವತಿಯಿಂದ ಸೆಪ್ಟಂಬರ್ 23 ರಂದು ಪೌರಕಾರ್ಮಿಕರ ದಿನಾಚರಣೆ ಅಂಗವಾಗಿ ಬೆಳಗ್ಗೆ 8 ಗಂಟೆಗೆ ನಗರಸಭಾ ಕಚೇರಿಯಿಂದ ಪುರಭವನದವರೆಗೆ ಪುರ ಮೆರವಣಿಗೆ ಹಾಗೂ ಬೆಳಗ್ಗೆ 10 ಗಂಟೆಗೆ ಅಜ್ಜರಕಾಡು ಪುರಭವನದಲ್ಲಿ ಸಭಾಕಾರ್ಯಕ್ರಮ ನಡೆಯಲಿದ್ದು, ಈ ದಿನದಂದು ನಗರಸಭಾ ವ್ಯಾಪ್ತಿಯಲ್ಲಿ ಮನೆ ಮನೆ ಕಸ ಸಂಗ್ರಹಣೆ ಇರುವುದಿಲ್ಲ ಹಾಗೂ ನಗರಸಭಾ ಕಚೇರಿಯಲ್ಲಿ ಸಾರ್ವಜನಿಕ ಸೇವೆ ಲಭ್ಯವಿರುವುದಿಲ್ಲ ಎಂದು ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.
Next Story





