Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯ ವಿಶ್ವ ವಿದ್ಯಾಲಯಗಳ (ತಿದ್ದುಪಡಿ)...

ರಾಜ್ಯ ವಿಶ್ವ ವಿದ್ಯಾಲಯಗಳ (ತಿದ್ದುಪಡಿ) ವಿಧೇಯಕಕ್ಕೆ ವಿಧಾನಸಭೆ ಅಸ್ತು

ವಿವಿಗಳ ಶೈಕ್ಷಣಿಕ ಗುಣಮಟ್ಟ ಕುಸಿತದ ಬಗ್ಗೆ ಸದನದಲ್ಲಿ ಗಂಭೀರ ಚರ್ಚೆ ► 7 ಹೊಸ ವಿವಿ ಸ್ಥಾಪನೆ ವಿಧೇಯಕಕ್ಕೆ ಒಪ್ಪಿಗೆ

ವಾರ್ತಾಭಾರತಿವಾರ್ತಾಭಾರತಿ21 Sept 2022 8:34 PM IST
share
ರಾಜ್ಯ ವಿಶ್ವ ವಿದ್ಯಾಲಯಗಳ (ತಿದ್ದುಪಡಿ) ವಿಧೇಯಕಕ್ಕೆ ವಿಧಾನಸಭೆ ಅಸ್ತು

ಬೆಂಗಳೂರು, ಸೆ. 21: ‘ರಾಜ್ಯದ ವಿಶ್ವ ವಿದ್ಯಾಲಯಗಳಲ್ಲಿನ ಶೈಕ್ಷಣಿಕ ಗುಣಮಟ್ಟ ಕುಸಿತ, ಉಪ ಕುಲಪತಿಗಳ ನೇಮಕದಲ್ಲಿನ ಮಿತಿ ಮೀರಿದ ಭ್ರಷ್ಟಾಚಾರ, ವಿವಿಗಳಲ್ಲಿನ ಅತಿಥಿ ಉಪನ್ಯಾಸಕರು ಹಾಗೂ ಹೊರಗುತ್ತಿಗೆ ಸಿಬ್ಬಂದಿ ನೇಮಕಾತಿ ಅಕ್ರಮ ಸಂಬಂಧ ವಿಧಾನಸಭೆಯಲ್ಲಿ ಆಡಳಿತ ಮತ್ತು ವಿಪಕ್ಷ ಸದಸ್ಯರು ಗಂಭೀರ ಸ್ವರೂಪದ ಚರ್ಚೆ ನಡೆಯಿತು.

ಬುಧವಾರ ವಿಧಾನಸಭೆಯಲ್ಲಿ ಶಾಸನ ರಚನೆ ಕಲಾಪದಲ್ಲಿ ‘2022ನೆ ಸಾಲಿನ ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ (ತಿದ್ದುಪಡಿ) ವಿಧೇಯಕ'ವನ್ನು ಮಂಡಿಸಿ ಪರ್ಯಾಲೋಚನೆಗೆ ಕೋರಿದರು. ಈ ವೇಳೆ ಮಾತನಾಡಿದ ಸ್ಪೀಕರ್ ಕಾಗೇರಿ, ‘ರಾಜ್ಯದ ವಿವಿಗಳ ಶಿಕ್ಷಣ ಗುಣಮಟ್ಟ ಅಗತ್ಯ ಕೆಳಮಟ್ಟದಲ್ಲಿದೆ. ಭವಿಷ್ಯದ ಪ್ರಜೆಗಳನ್ನು ರೂಪಿಸಬೇಕಾದ ನಮ್ಮ ವಿವಿಗಳಲ್ಲಿ ಶೈಕ್ಷಣಿಕ ಗುಣಮಟ್ಟವಿಲ್ಲ. ನನಗೆ ಬರುವ ದೂರು, ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯ ನೋಡಿದರೆ ನನಗೆ ಆಶ್ಚರ್ಯವಾಗುತ್ತಿದೆ. ನಿರೀಕ್ಷಿತ ಮಟ್ಟದಲ್ಲಿ ನಮ್ಮ ವಿವಿಗಳ ಇಲ್ಲ. ಇದನ್ನು ನಾನು ಬಹಳ ಬೇಸರದಲ್ಲಿ ಹೇಳ್ತಿದ್ದೇನೆ' ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದಕ್ಕೆ ಧ್ವನಿಗೂಡಿಸಿದ ಜೆಡಿಎಸ್‍ನ ಹಿರಿಯ ಸದಸ್ಯ ಎ.ಟಿ.ರಾಮಸ್ವಾಮಿ, ‘ರಾಜ್ಯದಲ್ಲಿ ಎಂಟು ಹೊಸ ವಿವಿಗಳ ಸ್ಥಾಪನೆ ಸ್ವಾಗತ. ಇದರಿಂದ 8 ಮಂದಿ ವಿಸಿ, 8 ಮಂದಿ ರಿಜಿಸ್ಟ್ರಾರ್‍ಗಳು ಹಾಗೂ ಸಿಬ್ಬಂದಿ ನೇಮಕ ಮಾಡಬಹುದು. ಖಾಸಗಿ ವಿವಿಗಳು ಹೆಚ್ಚಿನ ಡೊನೇಷನ್ ಪಡೆದು ಹೇಗೆಲ್ಲ ಪರೀಕ್ಷೆ ನಡೆಸುತ್ತಿದ್ದಾರೆಂಬುದು ಯಾರಿಗೂ ಗೊತ್ತಿಲ್ಲವೇ? ಹಿಂದೆ ಸರಕಾರ ಕುಲಪತಿಗಳನ್ನು ಹುಡುಕಿಕೊಂಡು ಹೋಗಿ ಮಾಡುತ್ತಿದ್ದರು. ಆದರೆ, ಇಂದು ಕುಲಪತಿಗಳಾಗಲು ಸರಕಾರದ ಕಾಲಿಗೆ ಬೀಳುವ ಸ್ಥಿತಿ ನಿಜಕ್ಕೂ ಶೋಚನೀಯ' ಎಂದು ಟೀಕಿಸಿದರು.

ತನಿಖೆ ಆಗಬೇಕು: ಉಪನಾಯಕ ಯು.ಟಿ.ಖಾದರ್ ಮಾತನಾಡಿ, ‘ಮಂಗಳೂರು ವಿವಿ ‘ಎ' ಗ್ರೇಡ್‍ನಿಂದ ‘ಬಿ' ಗ್ರೇಡ್‍ಗೆ ಕುಸಿದಿದೆ. ಮಂಗಳೂರು ವಿವಿ ಸಿಂಡಿಕೇಟ್ ಸಭೆಯನ್ನು ಬೆಂಗಳೂರಿನ ಫೈವ್ ಸ್ಟಾರ್ ಹೊಟೇಲ್‍ನಲ್ಲಿ ಮಾಡಲಾಗುತ್ತಿದೆ. ಸಿಂಡಿಕೇಟ್ ಸದಸ್ಯರು ತಮ್ಮ ಭತ್ತೆ ಹೆಚ್ಚು ಮಾಡಿಕೊಳ್ಳಲಿಕ್ಕೆ ಸೀಮಿತವಾಗಿದ್ದು, ವಿವಿ ಗುಣಮಟ್ಟ ಕಾಪಾಡಲು ಸೂಕ್ತ ನಿಯಮ ರೂಪಿಸಬೇಕು. ಕುಲಪತಿಗಳು ಅಕ್ರಮವಾಗಿ ನೇಮಕ ಮಾಡುತ್ತಿದ್ದು ಈ ಕುರಿತು ಸಮಗ್ರ ತನಿಖೆ ಅಗತ್ಯವಿದೆ' ಎಂದು ಸಲಹೆ ನೀಡಿದರು.

ಇದಕ್ಕೆ ಧ್ವನಿಗೂಡಿಸಿದ ಪ್ರಿಯಾಂಕ್ ಖರ್ಗೆ, ಅರವಿಂದ ಬೆಲ್ಲದ್, ಕೃಷ್ಣಬೈರೇಗೌಡ, ಎನ್.ಮಹೇಶ್, ಜಿ.ಟಿ.ದೇವೇಗೌಡ, ವೀರಣ್ಣ ಚರಂತಿಮಠ ಸೇರಿದಂತೆ ಹಲವು ಸದಸ್ಯರು, ‘ವಿವಿಗಳ ಗುಣಮಟ್ಟ ಕಾಪಾಡುವ ದೃಷ್ಟಿಯಿಂದ ನೇಮಕಾತಿ ಮತ್ತು ಕಟ್ಟಡ ನಿರ್ಮಾಣದ ಅಧಿಕಾರವನ್ನು ಉಪಕುಲಪತಿಗಳ ಬದಲಿಗೆ ಸರಕಾರವೇ ಉಳಿಸಿಕೊಳ್ಳಬೇಕು. ಗುಣಮಟ್ಟ ಹಾಗೂ ವಿವಿಗಳ ಗ್ರೇಡ್ ಹೆಚ್ಚಳಕ್ಕೆ ಸರಕಾರ ಕ್ರಮ ಕೈಗೊಳ್ಳಬೇಕು' ಎಂದು ಆಗ್ರಹಿಸಿದರು.

ಹೊಸ ವಿವಿ ಸ್ಥಾಪನೆ ವಿಧೇಯಕಕ್ಕೆ ಒಪ್ಪಿಗೆ: ಹೊಸದಾಗಿ ಬೀದರ್, ಹಾವೇರಿ, ಕೊಡಗು, ಚಾಮರಾಜನಗರ, ಹಾಸನ, ಕೊಪ್ಪಳ ಮತ್ತು ಬಾಗಲಕೋಟೆ ವಿವಿಗಳನ್ನು ಸ್ಥಾಪಿಸುವ ‘ಕರ್ನಾಟಕ ರಾಜ್ಯ ವಿಶ್ವ ವಿದ್ಯಾಲಯಗಳ (ತಿದ್ದುಪಡಿ) ವಿಧೇಯಕ-2022'ನ್ನು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಮತಕ್ಕೆ ಹಾಕಿದ ವೇಳೆ ಧ್ವನಿಮತದ ಅಂಗೀಕಾರ ದೊರೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X