Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸ್ವಾತಂತ್ರ್ಯ ಹೋರಾಟಗಾರರ ಪಾಸ್‌ನ...

ಸ್ವಾತಂತ್ರ್ಯ ಹೋರಾಟಗಾರರ ಪಾಸ್‌ನ ದುರ್ಬಳಕೆ ಬೆಟ್ಟು ಮಾಡಿದ ಸಿಎಜಿ

ಈಗ ಮಾಹಿತಿ ನೀಡುವುದನ್ನೇ ನಿರ್ಬಂಧಿಸಿರುವ ರೈಲ್ವೆ, ಎಂಎಚ್ಎ”

ವಾರ್ತಾಭಾರತಿವಾರ್ತಾಭಾರತಿ21 Sept 2022 9:14 PM IST
share
ಸ್ವಾತಂತ್ರ್ಯ ಹೋರಾಟಗಾರರ ಪಾಸ್‌ನ ದುರ್ಬಳಕೆ ಬೆಟ್ಟು ಮಾಡಿದ ಸಿಎಜಿ

  ಹೊಸದಿಲ್ಲಿ,ಸೆ.21: ಸಿಎಜಿ ತನ್ನ 2019ರ ವರದಿಯಲ್ಲಿ ರೈಲಿನಲ್ಲಿ ಪ್ರಯಾಣಿಸುವ ಸ್ವಾತಂತ್ರ ಹೋರಾಟಗಾರರಿಗೆ ನೀಡಲಾಗುವ ರಿಯಾಯಿತಿ ಪಾಸ್‌ಗಳ ಭಾರೀ ದುರ್ಬಳಕೆಯನ್ನು ಬೆಟ್ಟು ಮಾಡಿದ ನಂತರ ಭಾರತೀಯ ರೈಲ್ವೆ ಮತ್ತು ಗೃಹ ವ್ಯವಹಾರಗಳ ಸಚಿವಾಲಯ (ಎಂಎಚ್‌ಎ) ತಪ್ಪಿತಸ್ಥರ ಬೆನ್ನು ಬೀಳುವ ಬದಲು ಈ ಸಂಬಂಧ ಮಾಹಿತಿಗಳ ನೀಡಿಕೆಯನ್ನೇ ನಿರ್ಬಂಧಿಸಿದೆ. ಆರ್‌ಟಿಐ ಕಾರ್ಯಕರ್ತರೋರ್ವರು ಕೇಂದ್ರೀಯ ಮಾಹಿತಿ ಆಯೋಗ (ಸಿಐಸಿ)ಕ್ಕೆ ಸಲ್ಲಿಸಿರುವ ದೂರು ಈ ವಿಷಯವನ್ನು ಬಹಿರಂಗಗೊಳಿಸಿದೆ ಎಂದು thewire.in ವರದಿ ಮಾಡಿದೆ

2017,ಜು.15 ಮತ್ತು 2018,ಮಾ.31ರ ನಡುವೆ ರೈಲಿನಲ್ಲಿ ಪ್ರಯಾಣಕ್ಕಾಗಿ ಸ್ವಾತಂತ್ರ ಹೋರಾಟಗಾರರ ಪಾಸ್‌ಗಳನ್ನು ಬಳಸಿದ್ದವರಲ್ಲಿ ಶೇ.21ರಷ್ಟು ಜನರು 70 ವರ್ಷಕ್ಕಿಂತ ಕೆಳಗಿನ ವಯೋಮಾನದವರಾಗಿದ್ದರು,ಹೀಗಾಗಿ ಭಾರತವು ಸ್ವತಂತ್ರಗೊಂಡ ನಂತರ ಜನಿಸಿದವರಾಗಿದ್ದರು ಎಂದು 2019,ಡಿ.9ರಂದು ಸಂಸತ್ತಿನಲ್ಲಿ ಮಂಡಿಸಲಾಗಿದ್ದ ಆಗಿನ ಸಿಎಜಿ ರಾಜೀವ ಮೆಹ್ರಿಷಿ ಅವರ ವರದಿಯಲ್ಲಿ ಬೆಟ್ಟು ಮಾಡಲಾಗಿತ್ತು.

 ಸ್ವಾತಂತ್ರ ಹೋರಾಟಗಾರರ ಸೌಲಭ್ಯಗಳ ದುರ್ಬಳಕೆಯ ವ್ಯಾಪ್ತಿಯನ್ನು ಪ್ರಮುಖವಾಗಿ ವರದಿಯಲ್ಲಿ ಬಿಂಬಿಸಿದ್ದ ಸಿಎಜಿ,ಸ್ವಾತಂತ್ರ ಹೋರಾಟಗಾರರ ಸೌಲಭ್ಯದಡಿ ರಿಯಾಯಿತಿ ಟಿಕೆಟ್ ಪಡೆದಿದ್ದ ಅತ್ಯಂತ ಕಿರಿಯ ವ್ಯಕ್ತಿಯ ವಯಸು 10 ವರ್ಷಗಳಾಗಿದ್ದವು ಎಂದು ಹೇಳಿದ್ದರು. ಸ್ವಾತಂತ್ರ ಹೋರಾಟಗಾರರ ಪಾಸ್ ಸಂಖ್ಯೆಯನ್ನು ‘0’ ಎಂದು ತೋರಿಸಲಾಗಿದ್ದ ರಿಯಾಯಿತಿ ಟಿಕೆಟ್‌ಗಳನ್ನು ನೀಡಿದ್ದ 15 ಪ್ರಕರಣಗಳನ್ನು ಅವರು ವರದಿಯಲ್ಲಿ ಉಲ್ಲೇಖಿಸಿದ್ದರು.

ಆರ್‌ಟಿಐ ಕಾರ್ಯಕರ್ತ ನವೀನ ಕುಮಾರ್ 2020,ಅ.15ರಂದು ಈ ವಿಷಯವನ್ನು ಪ್ರಸ್ತಾಪಿಸಿ ಅರ್ಜಿಯೊಂದನ್ನು ಸಿಎಜಿಗೆ ಸಲ್ಲಿಸಿದ್ದರು. ಆದರೆ ಸಿಎಜಿ ಆ ವರ್ಷದ ಅ.15ರಂದು ಅರ್ಜಿಯನ್ನು ಗೃಹ ಸಚಿವಾಲಯದ ಸ್ವಾತಂತ್ರ ಹೋರಾಟಗಾರರು ಮತ್ತು ಪುನರ್ವಸತಿ (ಎಫ್‌ಎಫ್‌ಆರ್) ವಿಭಾಗಕ್ಕೆ ವರ್ಗಾಯಿಸಿದ್ದರು. ನಂತರ 2020,ನ.26ರಂದು ಗೃಹ ಸಚಿವಾಲಯವು ಅರ್ಜಿಯನ್ನು ರೈಲ್ವೆ ಸಚಿವಾಲಯದ ಅಧೀನದ ರೈಲ್ವೆ ಮಂಡಳಿಗೆ ಕಳುಹಿಸಿತ್ತು.

ಗೃಹ ಸಚಿವಾಲಯದಿಂದ ತನ್ನ ವಿಚಾರಣೆಗಳಿಗೆ ಸ್ಪಷ್ಟ ಉತ್ತರಗಳು ಲಭಿಸದಿದ್ದಾಗ ಕುಮಾರ್ 2021,ಎ.20ರಂದು ಸಿಐಸಿಗೆ ತನ್ನ ಎರಡನೇ ಅರ್ಜಿಯನ್ನು ಸಲ್ಲಿಸಿದ್ದರು.

ಸಿಐಸಿ 2022,ಸೆ.6ರಂದು ರೈಲ್ವೆ ಸಚಿವಾಲಯದ ಸಾರ್ವಜನಿಕ ಮಾಹಿತಿ ಅಧಿಕಾರಿಯಿಂದ ಸ್ವೀಕರಿಸಿದ್ದ ಲಿಖಿತ ಉತ್ತರದಲ್ಲಿ,ಅರ್ಜಿಯಲ್ಲಿ ಪ್ರಸ್ತಾಪಿಸಲಾಗಿರುವ ಯಾವುದೇ ಅಂಶವು ಈ ಸಚಿವಾಲಯಕ್ಕೆ ಸಂಬಂಧಿಸಿದ್ದಲ್ಲ. ಸಿಐಸಿ ಹೊರಡಿಸಿದ್ದ ವಿಚಾರಣೆ ನೋಟಿಸ್‌ಗಳನ್ನು ರೈಲ್ವೆ ಮಂಡಳಿಗೆ ಕಳುಹಿಸಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿತ್ತು. ಆದರೆ ಸ್ವಾತಂತ್ರ ಹೋರಾಟಗಾರರಿಗೆ ಉಚಿತ ರೈಲ್ವೆ ಪಾಸ್‌ಗಳ ಕುರಿತು ಯಾವುದೇ ಮಾಹಿತಿಯನ್ನು ಕೋರಲಾಗಿಲ್ಲ ಎಂಬ ಉಲ್ಲೇಖದೊಂದಿಗೆ ಅದು ನೋಟಿಸ್‌ಗಳನ್ನು ಮರಳಿಸಿದೆ ಎಂದು ತಿಳಿಸಲಾಗಿತ್ತು.

2022,ಸೆ.12ರಂದು ಗೃಹ ಸಚಿವಾಲಯದ ಎಫ್‌ಎಫ್‌ಆರ್ ವಿಭಾಗವು ತನ್ನ ಪ್ರತಿಕ್ರಿಯೆಯನ್ನು ಸಿಐಸಿಗೆ ಸಲ್ಲಿಸಿತ್ತು. ಕೋರಲಾಗಿದ್ದ ಮಾಹಿತಿಗಳನ್ನು ನೀಡುವ ಬದಲು ಅದು ದೂರುದಾರರ ಹೆಸರು ಕೆಡಿಸಲು ಪ್ರಯತ್ನಿಸಿತ್ತು. ಆರ್‌ಟಿಐ ಸೌಲಭ್ಯವನ್ನು ದುರ್ಬಳಕೆ ಮಾಡಿಕೊಳ್ಳುವುದು ನವೀನ ಕುಮಾರ ಚಾಳಿಯಾಗಿದೆ,ಅವರು ಒಂದೇ ವಿಷಯದ ಕುರಿತು ಸಿಐಸಿಗೆ ಪದೇ ಪದೇ ಅರ್ಜಿಗಳನ್ನು ಸಲ್ಲಿಸುತ್ತಿರುತ್ತಾರೆ ಎಂದು ಅದು ಹೇಳಿತ್ತು.

ಸ್ವಾತಂತ್ರ ಹೋರಾಟಗಾರರ ಕುರಿತು ಅದೇ ವಿಷಯದಲ್ಲಿ ಅರ್ಜಿದಾರರಿಂದ ಮುಂದಿನ ಅರ್ಜಿಗಳನ್ನು ಸ್ವೀಕರಿಸಬಾರದು ಎಂದು ಸಿಐಸಿ 2021,ಆ.9ರಂದು ನಿರ್ಧರಿಸಿದ್ದನ್ನು ಪತ್ರದಲ್ಲಿ ಉಲ್ಲೇಖಿಸಲಾಗಿತ್ತು. ತನ್ನ ಆದೇಶದಲ್ಲಿ ಈ ನಿರ್ಧಾರವನ್ನು ನೆನಪಿಸಿರುವ ಮುಖ್ಯ ಮಾಹಿತಿ ಆಯುಕ್ತ ವೈ.ಕೆ.ಸಿನ್ಹಾ ಅವರು ಕುಮಾರ್ ಸಲ್ಲಿಸಿದ ಮೇಲ್ಮನವಿಯನ್ನು ವಜಾಗೊಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X