ಹೈಕೋರ್ಟ್: 16 ಜಿಲ್ಲಾ ನ್ಯಾಯಾಧೀಶರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು, ಸೆ.21: ರಾಜ್ಯ ಹೈಕೋರ್ಟ್ 16 ಜಿಲ್ಲಾ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 16 ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಇದರಲ್ಲಿ 14 ಬ್ಯಾಕ್‍ಲಾಗ್ ಹುದ್ದೆಗಳು ಹಾಗೂ 2 ಹೊಸ ಹುದ್ದೆಗಳು ಸೇರಿವೆ.
ಈ ಕುರಿತು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಅವರು ಅಧಿಸೂಚನೆ ಹೊರಡಿಸಿದ್ದಾರೆ. ಅರ್ಜಿ ಸಲ್ಲಿಸಲು ಅ.19 ಹಾಗೂ ಪರೀಕ್ಷಾ ಶುಲ್ಕ ಪಾವತಿಗೆ ಅ.21 ಅಂತಿಮ ದಿನವಾಗಿದೆ.
ಅರ್ಹತೆ: ಅಂಗೀಕೃತ ವಿಶ್ವವಿದ್ಯಾಲಯದಿಂದ ಕಾನೂನು ಪದವಿ ಪಡೆದಿರಬೇಕು. 7 ವರ್ಷ ವಕೀಲರಾಗಿ ಸೇವೆ ಸಲ್ಲಿಸಿರಬೇಕು. ವಯೋಮಿತಿ: ಸಾಮಾನ್ಯ ವರ್ಗದ ಅಭ್ಯರ್ಥಿಗಳು 45 ವರ್ಷ ಮೀರಿರಬಾರದು. ಎಸ್ಸಿ-ಎಸ್ಟಿ ವರ್ಗದ ಅಭ್ಯರ್ಥಿಗಳು 48 ವರ್ಷ ಮೀರಿರಬಾರದು. ಪೂರ್ವಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ, ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ.
Next Story





