Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸೆ. 24ರಂದು ಡಾ. ಎಂ.ಎನ್. ರಾಜೇಂದ್ರ...

ಸೆ. 24ರಂದು ಡಾ. ಎಂ.ಎನ್. ರಾಜೇಂದ್ರ ಕುಮಾರ್‌ಗೆ ಅಭಿನಂದನಾ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ22 Sept 2022 8:03 PM IST
share
ಸೆ. 24ರಂದು ಡಾ. ಎಂ.ಎನ್. ರಾಜೇಂದ್ರ ಕುಮಾರ್‌ಗೆ ಅಭಿನಂದನಾ ಸಮಾರಂಭ

ಮಂಗಳೂರು, ಸೆ.22;  ಡಾ.ಎಂ.ಎನ್. ರಾಜೇಂದ್ರ ಕುಮಾರ್‌ ಅವರು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ ಬೆಂಗಳೂರು ಇದರ ಅಧ್ಯಕ್ಷರಾಗಿ, ಎರಡನೇ ಬಾರಿ ಅವಿರೋಧವಾಗಿ ಆಯ್ಕೆಗೊಂಡಿರುವುದು ಜಿಲ್ಲೆಗೆ ಹೆಮ್ಮೆ. ಅವರ ಈ ಸಾಧನೆಯನ್ನು ಜಿಲ್ಲೆಯ ಸಹಕಾರಿಗಳು, ಸಂಭ್ರಮಿಸುವ ಉದ್ದೇಶದಿಂದ ಸೆ. 24ರಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಲ್ಲಿ ಮಧ್ಯಾಹ್ನ 12 ಗಂಟೆಗೆ ಸಮಾರಂಭವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ಏರ್ಪಡಿಸಲಾಗಿದೆ ಎಂದು ಅಭಿನಂದನಾ ಸಮಿತಿಯ ಅಧ್ಯಕ್ಷ ಶಶಿ ಕುಮಾರ್ ರೈ ಬಾಲ್ಯೊಟ್ಟು ಸುದ್ದಿ ಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ., ಬೆಂಗಳೂರು ಇದರ ಇತಿಹಾಸದಲ್ಲಿ 1945ರ ನಂತರ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಮೊದಲ ಅಧ್ಯಕ್ಷರಾಗಿ 2017ರಲ್ಲಿ ಆಯ್ಕೆಗೊಂಡಿದ್ದ ಡಾ. ಎಂ.ಎನ್. ರಾಜೇಂದ್ರ ಕುಮಾರ್, ಇದೀಗ ಎರಡನೇ ಬಾರಿಯೂ ಈ ಪ್ರತಿಷ್ಠಿತ ಸಂಸ್ಥೆಯ ಅಧ್ಯಕ್ಷರಾಗಿ ಆಯ್ಕೆಗೊಳ್ಳುವ ಮೂಲಕ ಇತಿಹಾಸವನ್ನು ನಿರ್ಮಿಸಿದ್ದಾರೆ.

ರಾಜ್ಯ ರಾಷ್ಟ್ರ ಮಟ್ಟದ ಸಹಕಾರಿ ನಾಯಕರಲ್ಲಿ ಒಬ್ಬರಾಗಿರುವ ಡಾ| ಎಂ.ಎನ್. ರಾಜೇಂದ್ರ ಕುಮಾರ್‌ ಸಹಕಾರ ರಂಗದಲ್ಲಿ ಸುಮಾರು 50 ವರ್ಷಗಳ ಕಾಲ ಗುರುತಿಸಿಕೊಂಡು ವಿವಿಧ ಸಹಕಾರಿ ಸಂಸ್ಥೆಗಳಲ್ಲಿ ಆನುಪಮ ಸೇವೆಯನ್ನು ಸಲ್ಲಿಸಿರುತ್ತಾರೆ. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್  ಸುಮಾರು 28 ವರ್ಷಗಳ ಕಾಲ ಅಧ್ಯಕ್ಷರಾಗಿ ಸಹಕಾರ ಕ್ಷೇತ್ರದಲ್ಲಿ ಸಾರ್ಥಕ ಸೇವೆಯ ಮೂಲಕ ಇವರು  ಬ್ಯಾಂಕಿನ ಸರ್ವಾಂಗೀಣ ಪ್ರಗತಿಯ ರೂವಾರಿ ಯಾಗಿರುತ್ತಾರೆ. ಸ್ಪರ್ಧಾತ್ಮಕ ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ಹೊಸ ತಂತ್ರಜ್ಞಾನದ ಮೂಲಕ ಅತ್ಯಾಧುನಿಕ ಸೇವೆಯನ್ನು ಗ್ರಾಹಕರಿಗೆ ನೀಡಿ ರಾಜ್ಯದಲ್ಲಿಯೇ ಮಾದರಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕನ್ನಾಗಿ ರೂಪಿಸಿದ ಹೆಗ್ಗಳಿಕೆ ಇವರದು ಶಶಿ ಕುಮಾರ್ ತಿಳಿಸಿದ್ದಾರೆ.

ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು 1999ರಿಂದ ಇದುವರೆಗೆ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್‌ನ ನಿರ್ದೇಶಕರಾಗಿದ್ದು, 2005ರಿಂದ 2010ರವರೆಗೆ ಈ ಪ್ರತಿಷ್ಠಿತ ಬ್ಯಾಂಕಿನ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿ ಬ್ಯಾಂಕಿನ ಸರ್ವಾಂಗೀಣ ಅಭಿವೃದ್ಧಿಯ ಪೂರಕ ಶಕ್ತಿಯಾಗಿ ಶ್ರಮಿಸಿದ್ದರು. ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ಇದರ ಮನಜಿಂಗ್‌ ಟ್ರಸ್ಟಿಯಾಗಿ ನವೋದಯ ಸ್ವ-ಸಹಾಯ ಸಂಘಗಳ ರಚನೆಯಲ್ಲಿ ಹಾಗೂ ಈ ಯೋಜನೆಯನ್ನು ವ್ಯಾಪಕವಾಗಿ ಅಂತರ್‌ ಜಿಲ್ಲಾ ಮಟ್ಟದಲ್ಲಿ  ಸಂಘಟಿಸಿದ ಶ್ರೇಯಸ್ಸು ಇವರದು.   ನವೋದಯ ವಿವಿಧೋದ್ದೇಶ ಸಹಕಾರಿ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾಗಿರುವ ಇವರು ರಾಷ್ಟ್ರೀಯ ಸಹಕಾರಿ ಸಂಸ್ಥೆ ಇಸ್ರೋ' ಇದರ ನಿರ್ದೇಶಕರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದಾರೆ.

ಮುಖ್ಯವಾಗಿ ಸಹಕಾರಿ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ತರುವ ಮೂಲಕ ಹೊಸ ಆಯಾಮವನ್ನು ಈ ಕ್ಷೇತ್ರಕ್ಕೆ ನೀಡಿರುವ ಡಾ ಎಂ.ಎನ್. ರಾಜೇಂದ್ರ ಕುಮಾರ್ ಅವರನ್ನು ಅಭಿನಂದಿಸುವುದು ನಮ್ಮ ಕರ್ತವ್ಯವೂ ಕೂಡಾ ಆಗಿದೆ. ಈ ನಿಟ್ಟನಲ್ಲಿ ಸಮಸ್ತ ಸಹಕಾರಿ ಬಂಧುಗಳ ಸಮಕ್ಷಮದಲ್ಲಿ ಸೆ.24ರಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಸಭಾಭವನದಲ್ಲಿ  ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ.

ಈ ಸಮಾರಂಭದ ಅಧ್ಯಕ್ಷತೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳು, ಏ ರಾಜ್ಯಸಭಾ ಸದಸ್ಯರೂ ಆಗಿರುವ ರಾಜರ್ಷಿ ಡಾ.ಡಿ. ನೀರೇಂದ್ರ ಹೆಗ್ಗಡೆಯವರು ವಹಿಸಲಿದ್ದಾರೆ.ಸಮಾರಂಭದಲ್ಲಿ "ಜಾಗತಿಕ ಬಂಟರ ಒಕ್ಕೂಟ ಲಿ., ಮಂಗಳೂರು ಇದರ ಅಧ್ಯಕ್ಷರಾದ ಐಕಳ ಹರೀಶ್‌ ಶೆಟ್ಟಿಯವರು ಆಭಿನಂದನಾ ಭಾಷಣವನ್ನು ಮಾಡಲಿರುವರು, ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ವೇದವ್ಯಾಸ ಕಾಮತ್‌ ಶುಭಾಶಂಸನೆಗೈಯಲ್ಲಿರುವರು. ಮುಖ್ಯ ಅತಿಥಿಗಳಾಗಿ ಅದಾನಿ  ಗ್ರೂಪ್‌ನ ಸೌತ್ ಇಂಡಿಯಾ  ಅಧ್ಯಕ್ಷರಾದ ಕಿಶೋರ್ ಆಳ್ವ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ನಿರ್ದೇಶಕರಾದ ಐಕಳಬಾವ ದೇವಿಪ್ರಸಾದ್ ಶೆಟ್ಟ ಬೆಳಸು ಇವರು ಭಾಗವಹಿಸಲಿರುವರು ಎಂದು ಶಶಿ ಕುಮಾರ್ ತಿಳಿಸಿದ್ದಾರೆ.

ಅದ್ಧೂರಿಯ ಸ್ವಾಗತಕ್ಕೆ ಸಿದ್ಧತೆ:- ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಕ ಮಂಗಳೂರಿಗೆ  ಸೆ.24 ರಂದು ಬೆಳಗ್ಗೆ ಗಂಟೆ 10.30ಕ್ಕೆ ಆಗಮಿಸುತ್ತಿರುವ ಸಂದರ್ಭದಲ್ಲ ಇವರನ್ನು ಜಿಲ್ಲೆಯ ಸಮಸ್ತ ಸಹಕಾರಿಗಳೆಲ್ಲರೂ ಮಂಗಳೂರು ವಿಮಾನ ನಿಲ್ದಾಣದಲ್ಲ. ಸ್ವಾಗತಿಸಲಾಗುವುದು ಎಂದು ಐಕಳಬಾವ ದೇವಿಪ್ರಸಾದ್ ಶೆಟ್ಟಿ  ಬೆಳಪು ತಿಳಿಸಿದ್ದಾರೆ.

ಸುದ್ದಿ ಗೋಷ್ಠಿಯಲ್ಲಿ ಶಶಿಕುಮಾರ್ ಅಭಿನಂದನಾ ಸಮಿತಿಯ ಕಾರ್ಯಾಧ್ಯಕ್ಷ ಭಾಸ್ಕರ ಎಸ್ ಕೊಟ್ಯಾನ್, ಪ್ರಧಾನ ಕಾರ್ಯದರ್ಶಿ ರಾಜು ಪೂಜಾರಿ ಹಾಗೂ ಬ್ಯಾಂಕಿನ ನಿರ್ದೇಶಕ ರಾದ ಜಯರಾಮ ರೈ,ವಿನಯ ಕುಮಾರ್ ಸೂರಿಂಜೆ, ವಾದಿರಾಜ ಶೆಟ್ಟಿ, ಜಯರಾಜ ರೈ,ಸದಾಶಿವ ಉಳ್ಳಾಲ, ಸ್ಕ್ಯಾಡ್ಸ್ ಅಧ್ಯಕ್ಷ ರವೀಂದ್ರ ಕಂಬಳಿ, ಎಸ್ ಸಿ ಡಿ ಸಿ ಸಿ ಬ್ಯಾಂಕ್ ನ  ವ್ಯವಸ್ಥಾಪಕ ನಿರ್ದೇಶಕ ಗೋಪಾಲ ಕೃಷ್ಣ ಭಟ್ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X