Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉ.ಪ್ರ.: ಅಪ್ರಾಪ್ತ ವಯಸ್ಸಿನ ಬಾಲಕಿಯ...

ಉ.ಪ್ರ.: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ

ನಗ್ನವಾಗಿ ನಡೆದುಕೊಂಡು ಮನೆಗೆ ಹೋದ ವೀಡಿಯೊ ವೈರಲ್

ವಾರ್ತಾಭಾರತಿವಾರ್ತಾಭಾರತಿ22 Sept 2022 10:37 PM IST
share
ಉ.ಪ್ರ.: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ

ಮೊರದಾಬಾದ್(ಉತ್ತರಪ್ರದೇಶ), ಸೆ. 22: ಐವರು ದುಷ್ಕರ್ಮಿಗಳು 15   ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಹಾಗೂ ಅನಂತರ ಆಕೆ ನಗ್ನವಾಗಿ ನಡೆದುಕೊಂಡು ಮನೆಗೆ ತಲುಪಿದ ಘಟನೆ ಮೊರದಾಬಾದ್ ಜಿಲ್ಲೆಯ ಭೋಜ್‌ಪುರ ಪೊಲೀಸ್ ಠಾಣಾ ವ್ಯಾಪ್ತಿಯಿಂದ ವರದಿಯಾಗಿದೆ. 

ಘಟನೆ ನಡೆದ 15 ದಿನಗಳ ಬಳಿಕ ವೀಡಿಯೊ ವೈರಲ್ ಆಗಿದ್ದು, ಸಾಮಾಜಿಕ ಮಾಧ್ಯಮಲ್ಲಿ ಆಘಾತದ ಅಲೆಯನ್ನೇ ಸೃಷ್ಟಿಸಿದೆ. 30 ಸೆಕೆಂಡ್‌ಗಳ ವೀಡಿಯೊದಲ್ಲಿ ಬಾಲಕಿ ನಗ್ನವಾಗಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವುದು ಕಂಡು ಬಂದಿದೆ.

“ಆಕೆ ಮನೆಗೆ ಹಿಂದಿರುಗಿದಾಗ ತೀವ್ರ ರಕ್ತಸ್ರಾವವಾಗುತ್ತಿತ್ತು. ಆಕೆ ನಡೆದ ಘಟನೆಯನ್ನು ನಮಗೆ ತಿಳಿಸಿದಳು’’ ಎಂದು ಬಾಲಕಿಯ ಮಾವ ತಿಳಿಸಿದ್ದಾರೆ.

“ಅನಂತರ ನಾವು ದೂರು ದಾಖಲಿಸಲು ಪೊಲೀಸರನ್ನು ಸಂಪರ್ಕಿಸಿದೆವು. ಆದರೆ, ಘಟನೆಯನ್ನು ಜಿಲ್ಲಾ ಪೊಲೀಸ್ ಮುಖ್ಯಸ್ಥ ಎಸ್‌ಎಸ್‌ಪಿ ಹೇಮಂತ್ ಕುಟಿಯಾಲ್ ಅವರ ಗಮನಕ್ಕೆ ತರುವ ವರೆಗೆ ಪೊಲೀಸರು ಯಾವುದೇ ಕ್ರಮ ತೆಗೆದುಕೊಳ್ಳಲಿಲ್ಲ. ಅನಂತರ ಸೆಪ್ಟಂಬರ್ 7ರಂದು ಎಫ್‌ಐಆರ್ ದಾಖಲಿಸಿದರು  ಎಂದು ಅವರು ಹೇಳಿದ್ದಾರೆ.

‘‘ಬಾಲಕಿ ಸಮೀಪದ ಗ್ರಾಮದಲ್ಲಿ ನಡೆಯುತ್ತಿರುವ ಜಾತ್ರೆಗೆ ತೆರಳಿದ್ದಳು. ಈ ಸಂದರ್ಭ ಐವರು ಆಕೆಯನ್ನು ಅಪಹರಣಗೈದು ಅತ್ಯಾಚಾರ ಎಸಗಿದ್ದಾರೆ. ಆಕೆಯ ಬೊಬ್ಬೆ ಕೇಳಿ ಗ್ರಾಮಸ್ಥರು ಸ್ಥಳಕ್ಕೆ ಧಾವಿಸಿದ್ದಾರೆ. ಈ ಸಂದರ್ಭ ಐವರು ಆರೋಪಿಗಳು ಆಕೆಯ ಬಟ್ಟೆ ಹಾಗೂ ಇತರ ವಸ್ತುಗಳೊಂದಿಗೆ ಪರಾರಿಯಾಗಿದ್ದಾರೆ’’ ಎಂದು ಮೊರದಾಬಾದ್ ಪೊಲೀಸರು ತಿಳಿಸಿದ್ದಾರೆ.

‘‘376 ಡಿ (ಸಾಮೂಹಿಕ ಅತ್ಯಾಚಾರ), ಪೋಕ್ಸೊ ಕಾಯ್ದೆ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಓರ್ವನನ್ನು ಸೆಪ್ಟಂಬರ್ 15ರಂದು ಬಂಧಿಸಲಾಗಿದೆ. ಮುಂದಿನ ತನಿಖೆ ನಡೆಯುತ್ತಿದೆ’’ ಎಂದು ಹೆಚ್ಚುವರಿ ಪೊಲೀಸ್ ಅಧೀಕ್ಷಕ (ಗ್ರಾಮೀಣ) ಸಂದೀಪ್ ಕುಮಾರ್ ಮೀನಾ ಅವರು ಹೇಳಿದ್ದಾರೆ.

ಉತ್ತರಪ್ರದೇಶದಲ್ಲಿ ಸೆಪ್ಟಂಬರ್‌ನಲ್ಲಿ ದಾಖಲಾದ ಅತ್ಯಾಚಾರ ಪ್ರಕರಣಗಳು

*► ಸೆಪ್ಟಂಬರ್ 21- ಬರೇಲಿಯಲ್ಲಿ ಗರ್ಭಿಣಿ ಮಹಿಳೆಯ ಮೇಲೆ ಮೂವರಿಂದ ಅತ್ಯಾಚಾರ. ಇದರಿಂದ ಆಕೆಗೆ ಗರ್ಭಪಾತವಾಗಿತ್ತು.

*► ಸೆಪ್ಟಂಬರ್ 20 - ಲಕ್ನೋದಲ್ಲಿ 8 ವರ್ಷದ ದಲಿತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಹತ್ಯೆ.

*► ಸೆಪ್ಟಂಬರ್ 18 - ಮುಝಪ್ಫರ್‌ನಗರದಲ್ಲಿ 16 ವರ್ಷದ ಬಾಲಕಿಯ ಮೇಲೆ ಯುವಕನಿಂದ ನಿರಂತರ ಅತ್ಯಾಚಾರ.

*► ಸೆಪ್ಟಂಬರ್ 17 - ಬುದೌನ್‌ನಲ್ಲಿ 15 ವರ್ಷದ ದಲಿತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಹತ್ಯೆ.

*► ಸೆಪ್ಟಂಬರ್ 15 - ಪಿಲಿಭಿಟ್‌ನಲ್ಲಿ ಯುವತಿಯೋರ್ವಳನ್ನು 8 ದಿಗಳ ಕಾಲ ವಶದಲ್ಲಿರಿಸಿಕೊಂಡು ನಿರಂತರ ಅತ್ಯಾಚಾರ.

*► ಸೆಪ್ಟಂಬರ್ 15 - ಬಲ್ಲಿಯಾದಲ್ಲಿ 13 ವರ್ಷದ ದಲಿತ ಬಾಲಕಿಯ ಅತ್ಯಾಚಾರ.

*► ಸೆಪ್ಟಂಬರ್ 14 - ಲಖಿಂಪುರಖೇರಿಯಲ್ಲಿ 15 ಹಾಗೂ 17 ವರ್ಷದ ದಲಿತ ಬಾಲಕಿಯರ ಮೇಲೆ ಅತ್ಯಾಚಾರಗೈದು ಹತ್ಯೆ ಮಾಡಿ ಮರಕ್ಕೆ ನೇತು ಹಾಕಿದ ಯುವಕರು.

*► ಸೆಪ್ಟಂಬರ್ 11 - ಲಖಿಂಪುರಖೇರಿಯಲ್ಲಿ 15 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ.

*► ಸೆಪ್ಟಂಬರ್ 7 -  16 ವರ್ಷದ ಬಾಲಕಿಯ ಮೇಲೆ ಇಬ್ಬರು ವ್ಯಕ್ತಿಗಳಿಂದ ಅತ್ಯಾಚಾರ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X