Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ಅಂಕಣಗಳು
  4. ಈ ಹೊತ್ತಿನ ಹೊತ್ತಿಗೆ
  5. ಸಂವಿಧಾನ ಮತ್ತು ವಚನಗಳು

ಸಂವಿಧಾನ ಮತ್ತು ವಚನಗಳು

ಡಾ. ಸಿದ್ದನಗೌಡ ಪಾಟೀಲಡಾ. ಸಿದ್ದನಗೌಡ ಪಾಟೀಲ23 Sept 2022 10:23 AM IST
share
ಸಂವಿಧಾನ ಮತ್ತು ವಚನಗಳು

ಕರ್ನಾಟಕದಲ್ಲಿ ‘ಸಂವಿಧಾನ ಓದು’ ಎಂಬ ಆಂದೋಲನವನ್ನೇ ಆರಂಭಿಸಿ, ವಿವಿಧ ನಗರಗಳಲ್ಲಿ ಸಂಚರಿಸಿ ಭಾರತದ ಸಂವಿಧಾನದ ಆಶಯಗಳನ್ನು ಮನೆ-ಮನಗಳಿಗೆ, ಶಾಲಾ-ಕಾಲೇಜುಗಳಿಗೆ ತಲುಪಿಸುವ ಮಹತ್ವದ ಕೆಲಸವನ್ನು ನ್ಯಾಯಮೂರ್ತಿ ಶ್ರೀ ಎಚ್. ಎನ್. ನಾಗಮೋಹನದಾಸ್ ಅವರು ಮಾಡುತ್ತಿದ್ದಾರೆ. ಪ್ರಸಕ್ತ ‘ಸಂವಿಧಾನ ಮತ್ತು ವಚನಗಳು’ ಕೃತಿಯಲ್ಲಿ ಸಂವಿಧಾನದ ಮೂಲ ಆಶಯಗಳು ಜನಪರವಾದ ತತ್ವಶಾಸ್ತ್ರೀಯ ಚಿಂತನೆಗಳಲ್ಲೂ ಹೇಗೆ ಪ್ರತಿಪಾದನೆಗೊಂಡಿವೆ ಎಂಬ ಅಂಶವನ್ನು ತಮ್ಮ ಆಳವಾದ ಅಧ್ಯಯನ, ವಿಶ್ಲೇಷಣೆಯ ಮೂಲಕ ಸಾದರಪಡಿಸಿದ್ದಾರೆ. ವಿಶ್ವದ ಮತ್ತು ಭಾರತೀಯ ಪರಂಪರೆಯಲ್ಲಿ ಜೀವಪರ ಚಿಂತನೆಗಳು ಜೀವ ವಿರೋಧಿ ಚಿಂತನೆಗಳ ವಿರುದ್ಧ ಸದಾ ಸೆಣಸುತ್ತಲೇ ಬಂದಿವೆ. ಅಂಥ ಕೆಲವು ತಾತ್ವಿಕ ಧಾರೆಗಳನ್ನು ಪ್ರಸ್ತಾಪಿಸುತ್ತ 12ನೇ ಶತಮಾನದ ಬಸವಣ್ಣ ಮತ್ತು ಎಲ್ಲ ಶರಣರ ವಚನಗಳಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಅವರು ರಚಿಸಿದ ಭಾರತ ಸಂವಿಧಾನದ ಆಶಯಗಳು ಹೇಗೆ ವ್ಯಕ್ತವಾಗಿವೆ ಎಂಬುದನ್ನು ವಚನಗಳನ್ನಾಧರಿಸಿ, ತುಲನಾತ್ಮಕವಾಗಿ ಈ ಕೃತಿಯಲ್ಲಿ ಮಂಡಿಸಿದ್ದಾರೆ. ಬುದ್ಧ, ಬಸವ, ಇತರ ವಚನಕಾರರು ಮತ್ತು ಡಾ. ಬಿ. ಆರ್. ಅಂಬೇಡ್ಕರ್ ಅವರು ಸಮಕಾಲೀನರಲ್ಲವಾದರೂ ಅವರೆಲ್ಲರಲ್ಲಿ ‘ಜೀವ ಕೇಂದ್ರಿತ’, ‘ಮನುಷ್ಯ ಕೇಂದ್ರಿತ’ ತುಡಿತಗಳು, ಚಿಂತನೆಗಳು ಹೇಗೆ ಸಮಾನ ಆಶಯಗಳನ್ನು ಹೊಂದಿವೆ ಎಂಬುದನ್ನು ಈ ಕೃತಿಯಲ್ಲಿ ನೋಡಬಹುದು. ವಚನ ಚಳವಳಿ ಮತ್ತು ಭಾರತದ ಸಂವಿಧಾನ ಪ್ರತಿಪಾದಿಸಿದ ಮಾನವೀಯ ಸಮಾಜದ ನಿಯಮಗಳು, ಆದರ್ಶಗಳು, ಹಕ್ಕು ಮತ್ತು ಕರ್ತವ್ಯಗಳು ಇಂದಿನ ಸಂಘರ್ಷಮಯ ಸಮಾಜಕ್ಕೆ ದಿಕ್ಸೂಚಿಗಳಾಗಿವೆ. ಅಂಥ ದಿಕ್ಸೂಚಿಯನ್ನು ಈ ಕೃತಿ ಒಳಗೊಂಡಿದೆ.

ನ್ಯಾಯಮೂರ್ತಿ ನಾಗಮೋಹನ ದಾಸ್ ಅವರು ನ್ಯಾಯವಾದಿಗಳಾಗಿ, ಕರ್ನಾಟಕ ಉಚ್ಚನ್ಯಾಯಾಲಯದ ನ್ಯಾಯಮೂರ್ತಿಗಳಾಗಿ ಸೇವೆ ಸಲ್ಲಿಸಿದವರು, ಈಗ ವಿಶ್ರಾಂತ ಬದುಕನ್ನು ನಡೆಸಬೇಕಾದ ಸಂದರ್ಭದಲ್ಲಿ ಅವಿಶ್ರಾಂತ ವಾಗಿ ಸಾಮಾಜಿಕ ಜಾಗೃತಿ ಕೆಲಸದಲ್ಲಿ ನಿರತರಾಗಿದ್ದಾರೆ. ನಮ್ಮ ಸಂವಿಧಾನವೇ ಸ್ವಾತಂತ್ರೋತ್ತರ ಭಾರತದ ವಿಕಾಸಕ್ಕೆ ಕಾರಣ ಎಂದು ಸದಾ ಪ್ರತಿಪಾದಿಸುವ ನಾಗಮೋಹನದಾಸ್ ಅವರು ಆಡಳಿತ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಸಂವಿಧಾನದ ಆಶಯಗಳ ಜಾರಿ ಮತ್ತು ಸಂವಿಧಾನದ ರಕ್ಷಣೆಗಾಗಿ ಇಳಿ ವಯಸ್ಸಿನಲ್ಲಿಯೂ ನಿರಂತರ ಶ್ರಮಿಸುತ್ತಿರುವ ಅಪರೂಪದ ನ್ಯಾಯಮೂರ್ತಿ. ಅವರ ಈ ಕೃತಿ ‘ಸಂವಿಧಾನ ಮತ್ತು ವಚನಗಳು’ ನಾಡಿನ ಮನೆ - ಮನ ತಲುಪಲಿ.

ಕೃತಿ: ಸಂವಿಧಾನ ಮತ್ತು ವಚನಗಳು

ಲೇಖಕರು:

ನ್ಯಾ. ಎಚ್.ಎನ್. ನಾಗಮೋಹನದಾಸ್

ಬೆಲೆ: 120 ರೂ. ಪ್ರಕಾಶಕರು: ನವಕರ್ನಾಟಕ ಪಬ್ಲಿಕೇಶನ್ಸ್ ಪ್ರೈ.ಲಿ., ಎಂಬೆಸಿ ಸೆಂಟರ್, ಕ್ರೆಸೆಂಟ್ ರಸ್ತೆ, ಬೆಂಗಳೂರು-560001

share
ಡಾ. ಸಿದ್ದನಗೌಡ ಪಾಟೀಲ
ಡಾ. ಸಿದ್ದನಗೌಡ ಪಾಟೀಲ
Next Story
X