Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪ್ರತಿ ಠಾಣೆಗಳಲ್ಲೂ ತಿಂಗಳಿಗೊಮ್ಮೆ ಹಿರಿಯ...

ಪ್ರತಿ ಠಾಣೆಗಳಲ್ಲೂ ತಿಂಗಳಿಗೊಮ್ಮೆ ಹಿರಿಯ ನಾಗರಿಕರ ಸಭೆ: ಪೊಲೀಸ್ ಆಯುಕ್ತ ಶಶಿಕುಮಾರ್

ಪೊಲೀಸ್ ಕಮಿಷನರೇಟ್ ವತಿಯಿಂದ 'ಮಂಗಳೂರು ಪೊಲೀಸರೊಂದಿಗೆ ಹಿರಿಯ ನಾಗರಿಕರು' ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ24 Sept 2022 3:00 PM IST
share
ಪ್ರತಿ ಠಾಣೆಗಳಲ್ಲೂ ತಿಂಗಳಿಗೊಮ್ಮೆ ಹಿರಿಯ ನಾಗರಿಕರ ಸಭೆ: ಪೊಲೀಸ್ ಆಯುಕ್ತ ಶಶಿಕುಮಾರ್

ಮಂಗಳೂರು, ಸೆ.24: ಈಗಾಗಲೇ ಕೆಲವು ಪೊಲೀಸ್ ಠಾಣೆಗಳಲ್ಲಿ ಹಿರಿಯ ನಾಗರಿಕರ ಸಭೆ ನಡೆಸಲಾಗುತ್ತಿದೆ. ಮುಂದೆ ಪ್ರತಿ ಠಾಣೆಗಳಲ್ಲೂ ತಿಂಗಳಿಗೊಮ್ಮೆ ಹಿರಿಯ ನಾಗರಿಕರ ಸಭೆ ನಡೆಸಿ ಅವರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸೂಚಿಸಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ.

ನಗರದ ರೋಶನಿ ನಿಲಯದ ಸಭಾಂಗಣದಲ್ಲಿಂದು ಮಂಗಳೂರು ಪೊಲೀಸ್ ಕಮಿಷನರೇಟ್(MANGALURU CITY COMMISSIONARATE) ವತಿಯಿಂದ ಆಯೋಜಿಸಿದ್ದ 'ಮಂಗಳೂರು ಪೊಲೀಸರೊಂದಿಗೆ ಹಿರಿಯ ನಾಗರಿಕರು' ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಎಡಿಜಿಪಿಯವರ ನಿರ್ದೇಶನದ ಮೇರೆಗೆ ಈಗಾಗಲೇ ಠಾಣಾ ಮಟ್ಟದಲ್ಲಿ ಯುವಕರ ಸಮಿತಿಗಳನ್ನು ರಚಿಸಲು ಕ್ರಮ ವಹಿಸಲಾಗಿದ್ದು, ಶೀಘ್ರದಲ್ಲೇ ಕಮಿಷನರೇಟ್ ಮಟ್ಟದ ಸಭೆ ಕರೆಯಲಾಗುವುದು ಎಂದು ಪೊಲೀಸ್ ಆಯುಕ್ತರು ಹೇಳಿದರು.

ಕಾರ್ಯಕ್ರಮದಲ್ಲಿ ನಗರದ ವಿವಿಧ ಭಾಗಗಳಿಂದ ಆಗಮಿಸಿದ್ದ ಹಿರಿಯ ನಾಗರಿಕರು ತಮ್ಮ ಭಾಗದ ಸಮಸ್ಯೆಗಳನ್ನು ಹೇಳಿಕೊಂಡರು.

"ನಗರದ ಕೆಲವು ಪೊಲೀಸ್ ಠಾಣೆಗಳಲ್ಲಿ ಹಿರಿಯ ನಾಗರಿಕರ ಸಭೆಗಳನ್ನು ನಡೆಸಲಾಗುತ್ತಿದೆ. ಆದರೆ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಈ ರೀತಿಯ ಸಭೆ ನಡೆಸಿ ಸಮಸ್ಯೆ ಹೇಳಿಕೊಳ್ಳಲು ಅವಕಾಶ ನೀಡಿರುವುದು ಖುಷಿಯಾಗಿದೆ. ಪ್ರತಿ ಠಾಣಾ ಮಟ್ಟದಲ್ಲೂ ಹಿರಿಯ ನಾಗರಿಕರ ಸಭೆ ನಿರಂತರವಾಗಿ ನಡೆಯಬೇಕು" ಎಂಬ ಒತ್ತಾಯ ಸಭೆಯಲ್ಲಿ ಭಾಗವಹಿಸಿದ್ದವರಿಂದ ವ್ಯಕ್ತವಾಯಿತು.

ಕಾವೂರು ಸರ್ಕಲ್ ಬಳಿ ಟ್ರಾಫಿಕ್ ಸಿಗ್ನಲ್ ಅಳವಡಿಸಬೇಕು ಹಾಗೂ ಹೆದ್ದಾರಿಯ ಅಕ್ಕಮ ಪಕ್ಕದ ರಸ್ತೆಗಳಲ್ಲಿ ಹಾಕಲಾಗಿರುವ ಕಟೌಟ್, ಬ್ಯಾನರ್‌ಗಳನ್ನು ತೆರವುಗೊಳಿಸಿ ಅಪಘಾತರಹಿತ ವಲಯವನ್ನಾಗಿಸಬೇಕು ಎಂದು 76ರ ಹರೆಯದ ಫೆಲ್ಸಿ ರೇಗೋ ಆಗ್ರಹಿಸಿದರು.

ಪೊಲೀಸ್ ಠಾಣೆಗಳಲ್ಲಿ ಪ್ರಸಕ್ತ ದಿನಗಳಲ್ಲಿ ಸಾಕಷ್ಟು ಬದಲಾವಣೆಗಳಾಗಿದ್ದು, ಠಾಣೆಗೆ ತೆರಳುವ ಹಿರಿಯ ನಾಗರಿಕರದೊಂದಿಗೆ ಪೊಲೀಸರು ಉತ್ತಮವಾಗಿ ವರ್ತಿಸುತ್ತಿದ್ದಾರೆ. ಇದು ಉತ್ತಮ ಬೆಳವಣಿಗೆ ಎಂದು ಅಬ್ದುಲ್ ಮಜೀದ್ ಅಭಿಪ್ರಾಯಿಸಿದರು.

ಇಕ್ಕಟ್ಟಾಗಿರುವ ರಸ್ತೆಗಳಲ್ಲಿ ದ್ವಿಚಕ್ರ ವಾಹನಗಳನ್ನು ಯುವಕರು ಅತ್ಯಂತ ಅಜಾಗೂರಕತೆಯಿಂದ ಚಲಾಯಿಸುವುದರಿಂದ ಹಿರಿಯ ನಾಗರಿಕರು ಮತ್ತು ಮಕ್ಕಳಿಗೆ ತೊಂದರೆಯಾಗುತ್ತಿದೆ ಎಂದು ಸುಬ್ರಾಹಯ ಶೆಣೈ, ರಮಾನಂದ ರಾವ್, ಇಬ್ರಾಹೀಂ ಕೋಡಿಜಾಲ್ ಅಭಿಪ್ರಾಯಿಸಿದರು.

ಬೀಟ್ ಪೊಲೀಸರು ಆಗಾಗ್ಗೆ ಒಂಟಿಯಾಗಿರುವ ಹಿರಿಯ ನಾಗರಿಕರ ಮನೆಗಳಿಗೆ ಭೇಟಿ ನೀಡಿ ಅವರ ಅಗತ್ಯಗಳ ಬಗ್ಗೆ ಪರಿಶೀಲಿಸಬೇಕು. ಯುವಕರು ಸಿಗರೇಟು ಸೇರಿದಂತೆ ಅಮಲು ಪದಾರ್ಥಗಳಿಂದ ದೂರ ಇರುವಂತೆ ಪೊಲೀಸರು ಎಚ್ಚರಿಕೆ ವಹಿಸಬೇಕು ಎಂದು ಹಿರಿಯ ನಾಗರಿಕರೊಬ್ಬರು ಒತ್ತಾಯಿಸಿದರು.

ಬಹುತೇಕವಾಗಿ ಜಂಕ್ಷನ್ ರಸ್ತೆಗಳಲ್ಲಿ, ಮನೆ ಬದಿಯ ರಸ್ತೆಗಳಲ್ಲಿ ಯುವಕರು ವಾಹನವನ್ನು ಅಡ್ಡಾದಿಡ್ಡಿಯಾಗಿ ಓಡಿಸುವುದು, ಕೆಲ ಬಸ್ಸುಗಳಲ್ಲಿ ಕರ್ಕಶ ಹಾರ್ನ್‌ಗಳ ಬಳಕೆ, ಅಪ್ರಾಪ್ತ ವಯಸ್ಸಿನ ಮಕ್ಕಳು ವಾಹನ ಚಲಾಯಿಸುವ ಕುರಿತಂತೆ ಹಿರಿಯ ನಾಗರಿಕರು ಪೊಲೀಸರ ಗಮನ ಸೆಳೆದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ರೋಶನಿ ನಿಲಯ ಕಾಲೇಜಿನ ಪ್ರಾಶುಪಾಲೆ ಸಿ. ಜ್ಯೂಲಿಯೆಟ್ ಮಾತನಾಡಿ, ಅಜಾಗರೂಕತೆಯಿಂದ ವಾಹನ ಚಲಾಯಿಸುವವರು ಹೆಚ್ಚಾಗಿ ಯುವಕರೇ ಆಗಿರುವುದರಿಂದ ಶಿಕ್ಷಣ ಸಂಸ್ಥೆಯೂ ವಿದ್ಯಾರ್ಥಿಗಳ ಬಗ್ಗೆ ಜವಾಬ್ದಾರಿಯನ್ನು ವಹಿಸಬೇಕಾಗಿದೆ. ಈ ನಿಟ್ಟಿಲ್ಲಿ ಸಂಸ್ಥೆಯಿಂದ ಮಕ್ಕಳಿಗೆ ಮಾರ್ಗದರ್ಶನ ನೀಡುವ ಕೆಲಸ ಮಾಡುವುದಾಗಿ ಹೇಳಿದರು.

ಸಭೆಯಲ್ಲಿ ಡಿಸಿಪಿ ಅಂಶು ಕುಮಾರ್, ದಿನೇಶ್ ಕುಮಾರ್, ಎಸಿಪಿಗಳಾದ ಗೀತಾ ಕುಲಕರ್ಣಿ, ಪರಮೇಶ್ವರ್ ಹೆಗಡೆ, ದಿನಕರ ಶೆಟ್ಟಿ, ರವೀಶ್ ನಾಯ್ಕ್ ಉಪಸ್ಥಿತರಿದ್ದರು.

ಎಸಿಪಿ ಮಹೇಶ್ ಕುಮಾರ್ ಸ್ವಾಗತಿಸಿದರು. ಇನ್ಸ್‌ಪೆಕ್ಟರ್ ಜಾನ್ಸನ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X