ಕೋಡಿ ಬ್ಯಾರೀಸ್‌ನಲ್ಲಿ ಶಿಕ್ಷಾ-ಸುರಕ್ಷಾ ನಿಧಿ ವಿತರಣೆ

ಕುಂದಾಪುರ, ಸೆ.24: ಕೋಡಿ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಶಿಕ್ಷಕ ದಿನಾಚಣೆಯ ಪ್ರಯುಕ್ತ ಬ್ಯಾರೀಸ್ ಶಿಕ್ಷಾ-ಸುರಕ್ಷಾ ಫೌಂಡೇಶನ್‌ನಿಂದ ಸಂಸ್ಥೆಯಲ್ಲಿನ ಸಿಬ್ಬಂದಿಗಳ ಮಕ್ಕಳ ಶಿಕ್ಷಣಕ್ಕಾಗಿ ಸಹಾಯ ನಿಧಿಯನ್ನು ವಿತರಿಸಲಾಯಿತು.
ನಿಧಿಯನ್ನು ವಿತರಿಸಿದ ಸಂಸ್ಥೆಗಳ ಸಂಚಾಲಕ ಸಯ್ಯದ್ ಮೊಹಮ್ಮದ್ ಬ್ಯಾರಿ ಮಾತನಾಡಿ, ಈ ಪ್ರಪಂಚದಲ್ಲಿ ಭಗವಂತನೇ ನಿಜವಾದ ದಾನಿ, ಪ್ರತಿಯೊಬ್ಬರೂ ತಮಗಿಂತ ಕಷ್ಟದಲ್ಲಿರುವವರಿಗೆ ತಮ್ಮ ಮಟ್ಟಿಗಾದ ಸಹಾಯ ಮಾಡುವ ಮನೋ ಭಾವ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.
ಅಧ್ಯಕ್ಷತೆಯನ್ನು ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಹಾಜಿ ಕೆ.ಎಂ. ಅಬ್ದುಲ್ ರಹ್ಮಾನ್ ವಹಿಸಿದ್ದರು. ಬ್ಯಾರೀಸ್ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಸಿದ್ದಪ್ಪ ಕೆ.ಎಸ್., ಬ್ಯಾರೀಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ.ಶಮೀರ್, ಬ್ಯಾರೀಸ್ ಸೀ ಸೈಡ್ ಪಬ್ಲಿಕ್ ಸ್ಕೂಲ್‌ನ ಪ್ರಾಂಶುಪಾಲೆ ಅಶ್ವಿನಿ ಶೆಟ್ಟಿ ಮತ್ತು ಸಲಹಾ ಮಂಡಳಿಯ ಸದಸ್ಯ ಅಬು ಶೇಖ್ ಉಪಸ್ಥಿತರಿದ್ದರು.
ಡಿ.ಎಡ್ ಕಾಲೇಜಿನ ಪ್ರಾಂಶುಪಾಲೆ ಡಾ.ಫಿರ್ದೋಸ್ ವಂದಿಸಿದರು. ಕನ್ನಡ ಉಪನ್ಯಾಸಕ ಸಂದೀಪ್ ಕುಮಾರ್ ಶೆಟ್ಟಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿ ದರು.