Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪಿಎಫ್‍ಐ ನಾಯಕರ ಬಂಧನ ಅತ್ಯಂತ ಖಂಡನೀಯ:...

ಪಿಎಫ್‍ಐ ನಾಯಕರ ಬಂಧನ ಅತ್ಯಂತ ಖಂಡನೀಯ: ಮುಹಮ್ಮದ್ ಸಾದ್ ಬೆಳಗಾಮಿ

ವಾರ್ತಾಭಾರತಿವಾರ್ತಾಭಾರತಿ24 Sept 2022 10:57 PM IST
share
ಪಿಎಫ್‍ಐ ನಾಯಕರ ಬಂಧನ ಅತ್ಯಂತ ಖಂಡನೀಯ: ಮುಹಮ್ಮದ್ ಸಾದ್ ಬೆಳಗಾಮಿ

ಬೆಂಗಳೂರು, ಸೆ.24: ‘ಕರ್ನಾಟಕ ಸೇರಿದಂತೆ ದೇಶದ ವಿವಿಧ ಕಡೆಗಳಲ್ಲಿ ಎನ್‍ಐಎ, ಈ.ಡಿ. ಮತ್ತು ಪೊಲಿಸರ ಮೂಲಕ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‍ಐ)ಕಚೇರಿ ಮತ್ತು ನಾಯಕರ ನಿವಾಸಗಳ ಮೇಲೆ ದಿಢೀರ್ ದಾಳಿ ನಡೆಸಿ ವಶಕ್ಕೆ ಪಡೆದಿರುವುದು ಅತ್ಯಂತ ಖಂಡನೀಯ. ಇದು ಮುಸ್ಲಿಮರು ಮತ್ತು ದುರ್ಬಲ ವರ್ಗದ ವಿರುದ್ಧ ಸರಕಾರದ ಏಕಪಕ್ಷೀಯ ಮತ್ತು ದಬ್ಬಾಳಿಕೆಯ ಮುಂದುವರಿದ ಭಾಗವಾಗಿದೆ' ಎಂದು ಜಮಾಅತೆ ಇಸ್ಲಾಮಿ ಹಿಂದ್ ರಾಜ್ಯಾಧ್ಯಕ್ಷ ಡಾ.ಮುಹಮ್ಮದ್ ಸಾದ್ ಬೆಳಗಾಮಿ ಆಕ್ಷೇಪಿಸಿದ್ದಾರೆ.

‘ಹಿಜಾಬ್, ಅಝಾನ್, ಮಸೀದಿ, ಮದ್ರಸಾಗಳು ಮತ್ತು ವಕ್ಫ್ ಸೊತ್ತುಗಳ ಕಾನೂನು ಬಾಹಿರ ಸಮೀಕ್ಷೆ, ಪ್ರವಾದಿ ನಿಂದನೆ ಘಟನೆಗಳು, ಬುಲ್ಡೋಜರ್ ಗಳ ಬಳಕೆ, ಈದ್ಗಾ ವಿವಾದ, ದ್ವೇಷ ಮತ್ತು ಹಿಂಸೆಯ ಮಾರುಕಟ್ಟೆಯನ್ನು ನಿರಂತರವಾಗಿ ಕಾಪಾಡುವುದು, ರಾಜಕೀಯ ಮತ್ತು ಸೇಡಿನ ಕೊಲೆಗಳು ಇತ್ಯಾದಿಗಳ ದೀರ್ಘ ಪಟ್ಟಿ ಹೀಗೆಯೇ ಮುಂದುವರಿಯುತ್ತಿದೆ. ಈಗ ಪಿ.ಎಫ್.ಐ. ಸಂಘಟನೆಯ ನಾಯಕರನ್ನು ಬಂಧಿಸಿ, ಮುಸ್ಲಿಮ್ ಯುವಕರಲ್ಲಿ ಸಿಟ್ಟು ಮತ್ತು ಹತಾಶೆಯ ಭಾವನೆಯನ್ನು ಮೂಡಿಸಲಾಗುತ್ತಿದೆ' ಎಂದು ಅವರು ಹೇಳಿದ್ದಾರೆ.

‘ದ್ವೇಷ ಮತ್ತು ಹಿಂಸೆಯನ್ನು ಪ್ರತಿಪಾದಿಸುವ ಇತರ ಸಂಘಟನೆಗಳ ಕೃತ್ಯಗಳನ್ನು ಕಂಡೂ ಕಾಣದಂತೆ, ಮಾತ್ರವಲ್ಲದೆ ಅವರನ್ನು ಉತ್ತೇಜಿಸುವಂತೆ ಸರಕಾರವು ನಡೆಯುತ್ತಿದೆ. ಅನ್ಯಾಯ, ದಬ್ಬಾಳಿಕೆಯ ವಿರುದ್ಧ ಧ್ವನಿ ಎತ್ತುವವರ ಹಾಗೂ ವಿರೋಧ ಪಕ್ಷಗಳ ವಿರುದ್ಧ ಏಜೆನ್ಸಿಗಳನ್ನು ಛೂ ಬಿಡುವ ಮೂಲಕ ಭಿನ್ನಧ್ವನಿಗಳನ್ನು ಅಡಗಿಸುವ ಕೃತ್ಯವು ಪ್ರಜಾಪ್ರಭುತ್ವ, ಸಂವಿಧಾನದ ಆಶಯಗಳ ಹಾಗೂ ನ್ಯಾಯದ ಕತ್ತು ಹಿಸುಕುವ ಕೆಲಸಗಳಾಗಿವೆ' ಎಂದು ಮುಹಮ್ಮದ್ ಸಾದ್ ಬೆಳಗಾಮಿ ತಿಳಿಸಿದ್ದಾರೆ.

‘ಸರಕಾರವು ಪ್ರತಿ ಹಂತದಲ್ಲೂ ನ್ಯಾಯ ಪಾಲನೆಯನ್ನು ಮಾಡುವಂತೆ ನಾವು ಒತ್ತಾಯಿಸುತ್ತೇವೆ. ಅಪರಾಧ ಸಾಬೀತಾದರೆ ಮಾತ್ರ ಕ್ರಮ ಕೈಗೊಳ್ಳಬೇಕು, ಆರೋಪಿಗಳನ್ನು ತಕ್ಷಣವೇ ಬಿಡುಗಡೆಗೊಳಿಸಿ, ಸಾರ್ವಜನಿಕರಲ್ಲಿ ವಿಶ್ವಾಸವನ್ನು ಮೂಡಿಸಬೇಕೆಂದು ನಾವು ಒತ್ತಾಯಿಸುತ್ತೇವೆ. ದ್ವೇಷದ ವಾತಾವರಣ ಅಂತ್ಯಗೊಳ್ಳಬೇಕು. ಎಲ್ಲ ವಿಧದ ಕೋಮುವಾದ ಮತ್ತು ಅನ್ಯಾಯ-ದಬ್ಬಾಳಿಕೆ ವಿರುದ್ಧ ನ್ಯಾಯಪ್ರಿಯ ಜನತೆ ಒಗ್ಗಟ್ಟಾಗಬೇಕೆಂದು ಈ ಮೂಲಕ ಕೇಳಿಕೊಳ್ಳುತ್ತೇವೆ' ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X