ಮೂರನೇ ಟಿ20: ಭಾರತಕ್ಕೆ 187 ರನ್ ಗಳ ಗುರಿ ನೀಡಿದ ಆಸ್ಟ್ರೇಲಿಯ

Photo: Twitter/@BCCI
ಹೈದರಾಬಾದ್: ಟಾಸ್ ಸೋತು ಬ್ಯಾಟಿಂಗ್ ಗೆ ಇಳಿಸಲ್ಪಟ್ಟ ಆಸ್ಟ್ರೇಲಿಯಾ ತಂಡವು ಟಿಮ್ ಡೇವಿಡ್ ಮತ್ತು ಕ್ಯಾಮರಾನ್ ಗ್ರೀನ್ ಅವರ ಅಬ್ಬರದ ಬ್ಯಾಟಿಂಗ್ ನೆರವಿನಿಂದ ಮೂರನೇ ಟ್ವೆಂಟಿ-20 ಪಂದ್ಯದಲ್ಲಿ ಭಾರತಕ್ಕೆ 187 ರನ್ ಗಳ ಗುರಿ ನೀಡಿದೆ.
ಆಸ್ಟ್ರೇಲಿಯ ಟಿಮ್ ಡೇವಿಡ್ 54, ಗ್ರೀನ್ 52 ರನ್ ನೆರವಿನಿಂದ 7 ವಿಕೆಟ್ ನಷ್ಟಕ್ಕೆ 186 ರನ್ ಗಳಿಸಿತು.
ಆಸ್ಟ್ರೇಲಿಯಕ್ಕೆ ಬಿರುಸಿನ ಆರಂಭವನ್ನು ನೀಡಿದ್ದ ಕ್ಯಾಮರಾನ್ ಗ್ರೀನ್ 21 ಎಸೆತಗಳಲ್ಲಿ 52 ರನ್ ಗಳಿಸಿ ಭುವನೇಶ್ವರ್ ಕುಮಾರ್ ಬೌಲಿಂಗ್ ದಾಳಿಗೆ ವಿಕೆಟ್ ಒಪ್ಪಿಸಿದ್ದಾರೆ.
ಭಾರತ ಪರ ಅಕ್ಷರ್ ಪಟೇಲ್ 3 ವಿಕೆಟ್ ಪಡೆದು ಮಿಂಚಿದರು.
Next Story