Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ‘ಮಂಗಳೂರು ದಸರಾ’ಕ್ಕೆ ಸಂಭ್ರಮದ ಚಾಲನೆ:...

‘ಮಂಗಳೂರು ದಸರಾ’ಕ್ಕೆ ಸಂಭ್ರಮದ ಚಾಲನೆ: ದೇವಳದ ಅಂಗಣದಲ್ಲಿ ಹುಲಿವೇಷಗಳ ನಲಿಕೆಯ ಸಡಗರ

ವಾರ್ತಾಭಾರತಿವಾರ್ತಾಭಾರತಿ26 Sept 2022 2:17 PM IST
share
‘ಮಂಗಳೂರು ದಸರಾ’ಕ್ಕೆ ಸಂಭ್ರಮದ ಚಾಲನೆ: ದೇವಳದ ಅಂಗಣದಲ್ಲಿ ಹುಲಿವೇಷಗಳ ನಲಿಕೆಯ ಸಡಗರ

ಮಂಗಳೂರು, ಸೆ. 26: ವಿಶ್ವದ ಗಮನ ಸೆಳೆದಿರುವ ‘ಮಂಗಳೂರು ದಸರಾ’ಕ್ಕೆ ನಗರದ ಕುದ್ರೋಳಿ ಗೋಕರ್ಣನಾಥ ಕ್ಷೇತ್ರ, ಮಂಗಳಾದೇವಿ, ವೆಂಕಟ್ರಮಣ ಕ್ಷೇತ್ರದ ಸೇರಿದಂತೆ ಸೇರಿದಂತೆ ವಿವಿಧ ದೇವಸ್ಥಾನಗಳಲ್ಲಿ ಇಂದು ಸಡಗರದ ಚಾಲನೆ ದೊರೆಯಿತು.

ಕ್ಷೇತ್ರದ ದಸರಾ ದರ್ಬಾರು ಸ್ವರ್ಣಮಯ ಕಲಾ ಮಂಟಪದಲ್ಲಿ ನವದುರ್ಗೆಯರು ಹಾಗೂ ಗಣಪತಿ ದೇವರ ಮೂರ್ತಿಯ ಪ್ರತಿಷ್ಠಾಪನೆಯ ಬಳಿಕ, ನವರಾತ್ರಿ ಉತ್ಸವದ ವಿಶೇಷ ಆಕರ್ಷಣೆ ಹಾಗೂ 9 ದಿನಗಳ ಕಾಲ ವಿಶೇಷವಾಗಿ ಆರಾಧಿಸ್ಪಡುವ ಶಾರದಾ ಮಾತೆಯ ವಿಗ್ರಹವನ್ನು ಪ್ರತಿಷ್ಠಾಪಿಸಲಾಯಿತು.

ಕುದ್ರೋಳಿ ಕ್ಷೇತ್ರದ ನವೀಕರಣದ ರುವಾರಿ, ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಹಾಗೂ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬ, ಮಹಾಲಿಂಗ ನಾಯ್ಕಿ ಉಪಸ್ಥಿತಿಯಲ್ಲಿ ಮಂಗಳೂರು ದಸರಾ ಕಾರ್ಯಕ್ರಮಕ್ಕೆ ಅದ್ದೂರಿ ಚಾಲನೆ ದೊರೆಯಿತು.

ಕುದ್ರೋಳಿ ಕ್ಷೇತ್ರದ ಅಂಗಣದಲ್ಲಿ ಪ್ರದಕ್ಷಿಣೆ ನಡೆಸಿ ದರ್ಬಾರು ಮಂಟಪಕ್ಕೆ ಚೆಂಡೆ, ವಾದ್ಯಗಳೊಂದಿಗೆ ಪಲ್ಲಕ್ಕಿಯಲ್ಲಿ ಶಾರದಾ ಮೂರ್ತಿಯನ್ನು ಹೊತ್ತು ತರಲಾಯಿತು. ದರ್ಬಾರು ಮಂಟಪದ ವೇದಿಕೆಯಲ್ಲಿ ಶಾರದಾ ಮೂರ್ತಿಯ ಪ್ರತಿಷ್ಠಾಪನೆಯ ಬಳಿಕ ದೀಪ ಬೆಳಗಿಸಿ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸುವ ಮೂಲಕ ದಸರಾ ಉತ್ಸವಕ್ಕೆ ಚಾಲನೆ ನೀಡಲಾಯಿತು.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಎಂ.ಬಿ ಪಾಟೀಲ, ಶಾಸಕರಾದ ವೇದವ್ಯಾಸ ಕಾಮತ್, ಯು.ಟಿ.ಖಾದರ್, ಉಮಾನಾಥ ಕೋಟ್ಯಾನ್, ವಿಧಾನ ಪರಿಷತ್ ಸದಸ್ಯರಾದ ಡಾ. ಮಂಜುನಾಥ ಭಂಡಾರಿ, ಮೇಯರ್ ಜಯಾನಂದ ಅಂಚನ್, ಉಪ ಮೇಯರ್ ಪೂರ್ಣಿಮಾ, ಬಿಲ್ಲವ ಮಹಾಮಂಡಲದ ಅಧ್ಯಕ್ಷ ರಾಜಶೇಖರ ಕೋಟ್ಯಾನ್, ಮಾಜಿ ಸಚಿವರಾದ ರಮಾನಾಥ ರೈ, ವಿನಯ ಕುಮಾರ್ ಸೊರಕೆ, ಮಾಜಿ ಶಾಸಕರಾದ ಜೆ.ಆರ್. ಲೋಬೋ, ಶಕುಂತಳಾ ಶೆಟ್ಟಿ, ಮೊಯ್ದಿನ್ ಬಾವ, ಅಭಯಚಂದ್ರ ಜೈನ್, ಐವನ್ ಡಿಸೋಜಾ, ಕವಿತಾ ಸನಿಲ್, ಕ್ಷೇತ್ರದ ಅಧ್ಯಕ್ಷ ಎಚ್. ಎಸ್. ಸಾಯಿರಾಂ, ಉಪಾಧ್ಯಕ್ಷೆಉರ್ಮಿಳಾ ರಮೇಶ್ ಕುಮಾರ್, ಕಾರ್ಯದರ್ಶಿ ಮಾಧವ ಸುವರ್ಣ, ಕೋಶಾಧಿಕಾರಿ ಪದ್ಮರಾಜ್ ಆರ್., ಟ್ರಸ್ಟಿಗಳಾದ ಶೇಖರ್ ಪೂಜಾರಿ, ರವಿಶಂಕರ ಮಿಜಾರು, ಜಗದೀಪ್ ಡಿ. ಸುವರ್ಣ, ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ಸಹ ಅಧ್ಯಕ್ಷೆ ಡಾ. ಅನಸೂಯ ಬಿ.ಟಿ. ಸಾಲ್ಯಾನ್, ಉಪಾಧ್ಯಕ್ಷ ಡಾ.ಬಿ.ಜಿ. ಸುವರ್ಣ, ಸದಸ್ಯರಾದ ಹರಿಕೃಷ್ಣ ಬಂಟ್ವಾಳ, ಲೀಲಾಕ್ಷ ಕರ್ಕೇರಾ ಹಾಗೂ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

'ಮಂಗಳೂರು ದಸರಾ ಅಜರಾಮರ': ಮುಂದಿನ ವರ್ಷ ನಾನಿರುವೆನೋ ಗೊತ್ತಿಲ್ಲ. ಆದರೆ ದಸರಾ ಮಹೋತ್ಸವ ಎಂದೆಂದಿಗೂ ಅದ್ದೂರಿಯಾಗಿ ನಡೆಯಲಿದೆ. ಇದು ಎಲ್ಲವೂ ದೇವರ ಕೃಪೆ. ಮಂಗಳೂರು ದಸರಾವನ್ನು ಯಾರಿಂದಲೂ ನಿಲ್ಲಿಸಲು ಸಾಧ್ಯವಿಲ್ಲ ಎಂದು ಕುದ್ರೋಳಿ ಕ್ಷೇತ್ರದಲ್ಲಿ ಮಂಗಳೂರು ದಸರಾಕ್ಕೆ ಚಾಲನೆ ನೀಡಿದ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಹೇಳಿದರು.

ಹುಲಿವೇಷ ಕುಣಿತದ ಸಡಗರ: 

ಮಂಗಳೂರು ದಸರಾದ ಮತ್ತೊಂದು ವಿಶೇಷ ಆಕರ್ಷಣೆ ಹುಲಿವೇಷ ಕುಣಿತ. ಪುಟ್ಟ ಮಕ್ಕಳು ಸೇರಿದಂತೆ ಹುಲಿವೇಷಧಾರಿಗಳ ತಂಡ ಪ್ರತಿಷ್ಠಾಪನೆಗೊಂಡ ಶಾರದಾ ಮಾತೆಯ ವಿಗ್ರಹದ ಎದುರು ಕುಣಿಯುವ ಮೂಲಕ ದಸರಾ ಸಂಭ್ರಮಕ್ಕೆ ಮೆರುಗು ನೀಡಿದರು. ದಸರಾ ಮಹೋತ್ಸವದ ಪ್ರಥಮ ದಿನದಂದೇ ಕ್ಷೇತ್ರದ ತುಂಬಾ ಭಕ್ತರ ಮಹಾಪೂರವೇ ಹರಿದು ಬಂದಿತ್ತು.

ಕೋವಿಡ್ ಹಿನ್ನಲೆಯಲ್ಲಿ ಕಳೆದೆರಡು ವರ್ಷಗಳಲ್ಲಿ ಸಾಕಷ್ಟು ನಿಯಮ ಪಾಲನೆಯೊಂದಿಗೆ ಆಚರಿಸಲ್ಪಟ್ಟಿದ್ದ ಮಂಗಳೂರು ದಸರಾ ಈ ಬಾರಿ ಮತ್ತೆ ಹಿಂದಿನ ಸಡಗರದೊಂದಿಗೆ ಆರಂಭಗೊಂಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X