ಮಂಗಳೂರು : ಸೆ.27ರಂದು ವಿಶ್ವ ಪ್ರವಾಸೋದ್ಯಮ ದಿನಾಚರಣೆ

ಮಂಗಳೂರು, ಸೆ.26: ದ.ಕ.ಜಿಲ್ಲಾಡಳಿತ, ಮಂಗಳೂರು ಸ್ಮಾರ್ಟ್ ಸಿಟಿ, ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಮಂತ್ರಾಲಯ ಹಾಗೂ ಪ್ರವಾಸೋದ್ಯಮ ಇಲಾಖೆಯ ಸಹಯೋಗದೊಂದಿಗೆ ಸೆ.27ರ ಸಂಜೆ 4ಕ್ಕೆ ನಗರದ ತಣ್ಣೀರುಬಾವಿ ಕಡಲ ತೀರದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ-2022 ಮತ್ತು ತಣ್ಣೀರುಬಾವಿ ಬ್ಲೂ ಫ್ಲಾಗ್ ಶಂಕುಸ್ಥಾಪನೆ ಕಾರ್ಯಕ್ರಮ ನಡೆಯಲಿದೆ.
ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸುವರು. ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವ ಎಸ್.ಅಂಗಾರ, ಸಮಾಜ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮತ್ತಿತರರು ಭಾಗವಹಿಸುವರು ಎಂದು ಪ್ರಕಟನೆ ತಿಳಿಸಿದೆ.
Next Story