ರಾಷ್ಟ್ರಪತಿಗೆ ಸನ್ಮಾನ ಕಾರ್ಯಕ್ರಮ ಹಿನ್ನೆಲೆ: ವಿಧಾನಸೌಧದ ಸಿಬ್ಬಂದಿಗೆ ನಾಳೆ(ಸೆ.27) ರಜೆ

ಬೆಂಗಳೂರು, ಸೆ. 26: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ನಾಳೆ(ಸೆ.27)ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಏರ್ಪಡಿಸಿರುವ ಪೌರಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಹಿನ್ನೆಲೆಯಲ್ಲಿ, ಸುರಕ್ಷತೆ ಹಾಗೂ ಭದ್ರತೆ ದೃಷ್ಟಿಯಿಂದ ವಿಧಾನಸೌಧ ಕಟ್ಟಡದಲ್ಲಿ ಕಾರ್ಯನಿರ್ವಹಿಸುವ ಎಲ್ಲ ಕಚೇರಿಗಳಿಗೆ ರಜೆ ನೀಡಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಅಧೀನ ಕಾರ್ಯದರ್ಶಿ ಮಹೇಶ್ ಆರ್. ತಿಳಿಸಿದ್ದಾರೆ.
Next Story