Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೈಸೂರು ದಸರಾ ಆಚರಣೆ: ಅರಮನೆಯಲ್ಲಿ ಖಾಸಗಿ...

ಮೈಸೂರು ದಸರಾ ಆಚರಣೆ: ಅರಮನೆಯಲ್ಲಿ ಖಾಸಗಿ ದರ್ಬಾರ್ ಆರಂಭ

ವಾರ್ತಾಭಾರತಿವಾರ್ತಾಭಾರತಿ26 Sept 2022 8:52 PM IST
share
ಮೈಸೂರು ದಸರಾ ಆಚರಣೆ: ಅರಮನೆಯಲ್ಲಿ ಖಾಸಗಿ ದರ್ಬಾರ್ ಆರಂಭ

ಮೈಸೂರು,ಸೆ.26: ವಿಶ್ವವಿಖ್ಯಾತ ಮೈಸೂರು ದಸರಾ 2022ಕ್ಕೆ ಮೈಸೂರು ಅರಮನೆಯಲ್ಲಿ ಖಾಸಗಿದರ್ಬಾರ್ ಆರಂಭವಾಗಿದ್ದು, ಈ ಮೂಲಕ ಅರಮನೆ ಒಳಾಂಗಣ ಪಾರಂಪರಿಕ ದಸರಾ ಕಾರ್ಯಕ್ರಮಗಳ ಆರಂಭಕ್ಕೆ ಚಾಲನೆ ದೊರೆತಿದೆ.

ಅರಮನೆಯಲ್ಲಿ ನವರಾತ್ರಿಯಲ್ಲಿ ನಡೆಯುವ ಸಾಂಪ್ರದಾಯಿಕ ಧಾರ್ಮಿಕ ವಿಧಿ-ವಿಧಾನಗಳು 10 ದಿನಗಳ ಕಾಲ ನಡೆಯಲಿವೆ. ನವರಾತ್ರಿ ಮೊದಲ ದಿನವಾದ ಸೋಮವಾರ ಮುಂಜಾನೆ 5.10ರಿಂದ 5.30ರೊಳಗೆ ದರ್ಬಾರ್ ಹಾಲ್ ನಲ್ಲಿ ಜೋಡಿಸಲಾಗಿರುವ ಸಿಂಹಾಸನಕ್ಕೆ “ಸಿಂಹ”ಜೋಡಣಾ ಕಾರ್ಯ ನಡೆಯಿತು. ನಂತರ ಬೆಳಿಗ್ಗೆ 8.05ರಿಂದ 8.55ರವರೆಗೆ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಚಾಮುಂಡಿತೊಟ್ಟಿಯಲ್ಲಿ ಕಂಕಣ ಧಾರಣೆ ನೆರವೇರಿತು.

ಬಳಿಕ ಚಾಮುಂಡಿತೊಟ್ಟಿಯಿಂದ ವಾಣಿವಿಲಾಸ ದೇವರ ಮನೆಗೆ ಕಂಕಣವನ್ನು ತಂದು ತ್ರಿಷಿಕಾ ಕುಮಾರಿ ಒಡೆಯರ್ ಅವರಿಗೆ ಕಂಕಣ ಧಾರಣೆ ಮಾಡಲಾಯಿತು. 9.30ಕ್ಕೆ ಪಟ್ಟದ ಆನೆ, ಪಟ್ಟದ ಕುದುರೆ, ಪಟ್ಟದ ಹಸು ಸವಾರಿ ತೊಟ್ಟಿಗೆ ಆಗಮಿಸಿದೆ. 9.50ರಿಂದ 10.35ರೊಳಗೆ ಕಳಸ ಪೂಜೆ ಹಾಗೂ ಸಿಂಹಾರೋಹಣ ನೆರವೇರಿತು.

ಯದುವಂಶದವರು ಅರಮನೆಯಲ್ಲಿ ಶರನ್ನವರಾತ್ರಿಯ ವೇಳೆ ನಡೆಸಿಕೊಂಡು ಬಂದಿರುವ ಖಾಸಗಿ ದರ್ಬಾರ್‍ಗೆ  ಅರಮನೆ ಸಜ್ಜಾಗಿದ್ದು, ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಇದು ಎಂಟನೇ ವರ್ಷದ ದರ್ಬಾರ್ ಆಗಿದೆ.

ದರ್ಬಾರ್ ಮುಗಿದ ಬಳಿಕ ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ, ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯ, ಶ್ರೀರಂಗಪಟ್ಟಣದ ಶ್ರೀರಂಗನಾಥ, ಉತ್ತನಹಳ್ಳಿ ಜ್ವಾಲಾಮುಖಿ ತ್ರಿಪುರ ಸುಂದರಿದೇವಿ, ಅರಮನೆಯ ಆವರಣದಲ್ಲಿರುವ ತ್ರಿನೇಶ್ವರ, ಕೋಡಿ ಸೋಮೇಶ್ವರ, ಕೋಟೆ ಆಂಜನೇಯಸ್ವಾಮಿ, ಗಣೇಶ ದೇವಾಲಯ, ಕೃಷ್ಣನ ದೇವಾಲಯ ಸೇರಿದಂತೆ 33 ದೇವಾಲಯಗಳಿಂದ ತಂದ ಪ್ರಸಾದ ಸೇವಿಸಿದ ನಂತರ ದರ್ಬಾರ್ ಅಂತಿಮಗೊಳ್ಳಲಿದೆ.

ಪತ್ನಿ ತ್ರಿಷಿಕಾಕುಮಾರಿ, ಪುತ್ರ ಆದ್ಯವೀರ್ ಒಡೆಯರ್ ಜತೆಗೂಡಿ ಸಂಪ್ರದಾಯದಂತೆ ಕಂಕಣ ಕಟ್ಟಿದರು. ಅದರಂತೆ ಈ ದರ್ಬಾರಿನಲ್ಲಿ ಸಾಂಪ್ರದಾಯಿಕವಾಗಿ ಪಾದಪೂಜೆ ನಡೆಯಿತು. ಸಿಂಹಾಸನದಲ್ಲಿ ವಿರಾಜಮಾನರಾದ ಬಳಿಕ ಪಾದಪೂಜೆ ಮಾಡುವುದು ಆಕರ್ಷಣೆಯಾಗಿದೆ. ಅಲ್ಲದೆ ನವರಾತ್ರಿ ಸಂದರ್ಭದಲ್ಲಿ ಅರಮನೆಯಲ್ಲಿ ವಿವಿಧ ಪೂಜಾ ಕೈಂಕರ್ಯಗಳು ನಡೆಯಿತು.ಈ  ಹಿನ್ನೆಲೆಯಲ್ಲಿ ಸಾರ್ವಜನಿಕರು, ಮಾಧ್ಯಮದವರಿಗೆ ನಿರ್ಬಂಧ ವಿಧಿಸಲಾಗಿದ್ದು, ಕೇವಲ ರಾಜಮನೆತದವರಷ್ಟೇ ಭಾಗವಹಿಸಿದ್ದರು.

ಯದುವೀರ ಅವರು  ದಸರಾ ಹಬ್ಬದ ಶುಭಾಶಯಗಳನ್ನು  ತಿಳಿಸಿದ್ದಾರೆ.  ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಎಲ್ಲರಿಗೂ ಶರನ್ನವರಾತ್ರಿ ಹಾಗೂ ದಸರಾ ಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ.

ಚಾಮುಂಡೇಶ್ವರಿ ತಾಯಿ ನಿಮ್ಮೆಲ್ಲರಿಗೂ ಉತ್ತಮ ಆರೋಗ್ಯ ಮತ್ತು ಅಭಿವೃದ್ಧಿಯನ್ನು ದಯಪಾಲಿಸಲಿ ಹಾಗೂ ಈ ವರ್ಷ ಸಂಕಷ್ಟ ದೂರ ಮಾಡಲಿ ಎಂದು ಪ್ರಾರ್ಥಿಸುತ್ತೇನೆ.

ನಾಡಿನ ಜನತೆಗೆ ಶರನ್ನವರಾತ್ರಿ ಹಾಗೂ ದಸರಾ ಹಬ್ಬದ ಶುಭಾಶಯಗಳು ಎಂದು ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ನಾಡಿನ ಜನತೆಗೆ ಸಾಮಾಜಿಕ ಜಾಲ ತಾಣಗಳ ಮೂಲಕ ಶುಭಾಶಯ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X