PSI ಹಗರಣ: ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಪತಿ ರಾಜೇಶ್ ಗೆ ಹೈಕೋರ್ಟ್ ನಿಂದ ಜಾಮೀನು
ದಿವ್ಯಾ ಹಾಗರಗಿ | ರಾಜೇಶ್ ಹಾಗರಗಿ
ಕಲಬುರಗಿ, ಸೆ.27: ಪಿಎಸ್ಸೈ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಆರೋಪಿ ರಾಜೇಶ್ ಹಾಗರಗಿಗೆ ಕಲಬುರಗಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ರಾಜೇಶ್ ಹಾಗರಗಿ ಅವರು ಪ್ರಕರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿಯ ಪತಿ ಮತ್ತು ಜ್ಞಾನ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷರಾಗಿದ್ದಾರೆ.
ಕಲಬುರಗಿ ಜ್ಞಾನಜ್ಯೋತಿ ಶಾಲೆ ಕೇಂದ್ರದಲ್ಲಿ ಪಿಎಸ್ಸೈ ಪರೀಕ್ಷೆ ಬರೆದ ಬಹುತೇಕರು ಆಯ್ಕೆಯಾಗಿದ್ದರು. ಹಗರಣ ಬೆಳಕಿಗೆ ಬರುತ್ತಿದ್ದಂತೆ ದಿವ್ಯಾ ಊರು ಬಿಟ್ಟಿದ್ದರು. ಇವರ ಪತಿ ರಾಜೇಶ್ ಹಾಗರಗಿಯನ್ನು ಸಿಐಡಿ ಪೊಲೀಸರು ಬಂಧಿಸಿದ್ದರು. ಇದಾದ 20 ದಿನಗಳ ಬಳಿಕ ದಿವ್ಯಾಳನ್ನು ಸಿಐಡಿ ಅಧಿಕಾರಿಗಳು ಪುಣೆಯಲ್ಲಿ ಬಂಧಿಸಿ ಜೈಲಿಗಟ್ಟಿದ್ದಾರೆ.
ಇದನ್ನೂ ಓದಿ: ಲೈಂಗಿಕ ಕಿರುಕುಳ ಪ್ರಕರಣ: ಮುರುಘಾಶ್ರೀಗೆ ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನ
ಐದೂವರೆ ತಿಂಗಳಿನಿಂದ ಜೈಲಿನಲ್ಲಿದ್ದ ರಾಜೇಶ್ ಹಾಗರಗಿಗೆ ಇದೀಗ ಕಲಬುರಗಿ ಹೈಕೋರ್ಟ್ನಿಂದ ಜಾಮೀನು ಮಂಜೂರಾಗಿದೆ.
Next Story