ಪಿಎಫ್‌ಐ ನಿಷೇಧ: ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ
ಬೆಂಗಳೂರು: ಮುಂದಿನ ಐದು ವರ್ಷಗಳ ಅವಧಿಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಸಂಘಟನೆಯನ್ನು ನಿಷೇಧಿಸಿ ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿದ್ದು, ಈ ಕುರಿತು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಪ್ರತಿಕ್ರಿಯಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಪಿಎಫ್‌ಐ ನಿಷೇಧ ಮಾಡಿದ್ದನ್ನು ನಾನು ಸ್ವಾಗತ ಮಾಡುತ್ತೇನೆ. ದುಷ್ಕೃತ್ಯಕ್ಕೆ ಕುಮ್ಮಕ್ಕು ನೀಡುತ್ತಿದ್ದ ಪಿಎಫ್‌ಐ ವಿರುದ್ಧ ಕೇಂದ್ರ ಸರ್ಕಾರ ಸೂಕ್ತ ಕ್ರಮ ಕೈಗೊಂಡಿದೆ' ಎಂದು ತಿಳಿಸಿದ್ದಾರೆ.
'ಕೇಂದ್ರ ಸರ್ಕಾರ ಬಲವಾದ ಸಾಕ್ಷ್ಯಾಧಾರಗಳನ್ನ ಸಂಗ್ರಹಿಸಿ, ದೇಶದ ಏಕತೆ, ಸಮಗ್ರತೆ ಕಾಪಾಡುವ ನಿಟ್ಟಿನಲ್ಲಿ ಕ್ರಮ ಕೈಗೊಂಡಿದೆ' ಎಂದು ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಇದ್ನನ್ನೂ ಓದಿ: ಪಿಎಫ್‌ಐ ಮತ್ತದರ 8 ಅಂಗಸಂಸ್ಥೆಗಳಿಗೆ ಕೇಂದ್ರ ಸರಕಾರದಿಂದ 5 ವರ್ಷ ನಿಷೇಧ
Next Story