ಬಳ್ಳಾರಿ: ಬಿಜೆಪಿ ಕಾರ್ಯಕರ್ತನ ಹತ್ಯೆ; ವೈಯಕ್ತಿಕ ದ್ವೇಷದ ಶಂಕೆ
ಸಾಂದರ್ಭಿಕ ಚಿತ್ರ
ಬಳ್ಳಾರಿ: ಬಿಜೆಪಿ ಕಾರ್ಯಕರ್ತನೋರ್ವನನ್ನು ಕೊಲೆ ಮಾಡಿರುವ ಘಟನೆ ಬುಧವಾರ ಬೆಳಗಿನ ಜಾವ ನಡೆದಿದೆ.
ಮಂಜುನಾಥ್ (35) ಕೊಲೆಯಾದ ಬಿಜೆಪಿ ಕಾರ್ಯಕರ್ತ ಎಂದು ತಿಳಿದು ಬಂದಿದೆ.
ಮಂಜುನಾಥ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿದೆ. ಬಳಿಕ ಆರೋಪಿಗಳು ಕಾರಿನಲ್ಲಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಿಸಿಟಿವಿ ಕ್ಯಾಮರಾದಲ್ಲಿ ಕೃತ್ಯ ಸೆರೆ: ಆರೋಪಿಗಳು ಮಂಜುನಾಥ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆ ಮಾಡಿರುವ ಘಟನೆಯ ದೃಶ್ಯ ಸಿಸಿ ಟಿವಿ ಕ್ಯಾಮರಾದಲ್ಲಿ ಸರೆಯಾಗಿದ್ದು, ಆರೋಪಿಗಳು ಕೊಲೆಯಾದ ಯುವಕನ ಸ್ನೇಹಿತರು ಇರಬಹುದು. ಹಳೇ ದ್ವೇಷದಿಂದ ಕೊಲೆ ಮಾಡಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ಕೌಲ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story