Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸುರತ್ಕಲ್ ಪಾಲಿಕೆ ವಲಯ ಕಚೇರಿಯಲ್ಲಿ...

ಸುರತ್ಕಲ್ ಪಾಲಿಕೆ ವಲಯ ಕಚೇರಿಯಲ್ಲಿ ವಿಭಾಗೀಯ ಸದಸ್ಯರ, ಅಧಿಕಾರಿಗಳ ಸಭೆ

ವಾರ್ತಾಭಾರತಿವಾರ್ತಾಭಾರತಿ28 Sept 2022 7:56 PM IST
share
ಸುರತ್ಕಲ್ ಪಾಲಿಕೆ ವಲಯ ಕಚೇರಿಯಲ್ಲಿ ವಿಭಾಗೀಯ ಸದಸ್ಯರ, ಅಧಿಕಾರಿಗಳ ಸಭೆ

ಸುರತ್ಕಲ್, ಸೆ. 28: ಮನಪಾ ಸದಸ್ಯರು ದೂರು ನೀಡಿದರೆ ನಿರ್ಲಕ್ಷ್ಯ ಮಾಡುವಂತಿಲ್ಲ. ಗುತ್ತಿಗೆದಾರರಲ್ಲಿ ಕೆಲಸ ಮಾಡಿಸುವ ಜವಾಬ್ದಾರಿ ಅಧಿಕಾರಿಗಳದ್ದಾಗಿದೆ. ಎಚ್ಚರಿಕೆ ನೀಡಿದ ಬಳಿಕವೂ ಸಮರ್ಪಕ ಕೆಲಸ ಮಾಡದೇ ಹೋದಲ್ಲಿ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸುವ ಕೆಲಸ ಮಾಡಬೇಕಾಗುತ್ತದೆ ಎಂದು ಶಾಸಕರಾದ ಡಾ. ಭರತ್ ಶೆಟ್ಟಿ ವೈ. ಎಚ್ಚರಿಕೆ ನೀಡಿದ್ದಾರೆ.

ಸುರತ್ಕಲ್ ಪಾಲಿಕೆ ವಲಯ ಕಚೇರಿಯಲ್ಲಿ ಬುಧವಾರ ವಿಭಾಗೀಯ ಪಾಲಿಕೆ ಸದಸ್ಯರ ಹಾಗೂ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಬೀದಿ ದೀಪ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ಮಾಡುತ್ತಿರುವ ಬಗ್ಗೆ  ದೂರು ಬಂದಿದ್ದು ಕಾಲಮಿತಿಯೊಳಗೆ ದುರಸ್ತಿ ಮಾಡುವ ಎಲ್ಲಾ  ಜವಾಬ್ದಾರಿಯನ್ನು ಇಂಜಿನಿಯರ್‌ ಗಳು ಹೊರಬೇಕು. ಸಮಸ್ಯೆಯಿದ್ದರೆ ಕುಂದುಕೊರತೆ ಸಭೆಯಲ್ಲಿ ಹೇಳಿದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ಮೇಯರ್ ಜಯಾನಂದ ಅಂಚನ್ ಮಾತನಾಡಿ, ಅಧಿಕಾರಿಗಳ ಮಾತಿಗೆ ಗುತ್ತಿಗೆದಾರರು ಬೆಲೆ ನೀಡುತ್ತಿಲ್ಲ. ಇನ್ನು ಮನಪಾ ಸದಸ್ಯರ ದೂರಿಗೆ ಹೇಗೆ ಸ್ಪಂದಿಸುತ್ತಾರೆ ಎಂದು ಆಕ್ರೋಶ ವ್ಯಕ್ತ ಪಡಿಸಿದರು. ನಿಗದಿತ ಸಮಯಕ್ಕೆ ದುರಸ್ತಿ ಕಾರ್ಯ ಮಾಡಲೇಬೇಕು. ಜನರು ಬೇಸತ್ತು ಶಾಸಕರಿಗೆ ದೂರವಾಣಿ ಕರೆ ಮಾಡುವ ಸ್ಥಿತಿ ತಂದು ಇಡಲಾಗಿದೆ ಎಂದು ಕಿಡಿಕಾರಿದರು.

ಹುಲ್ಲು ಕಟ್ಟಿಂಗ್ ಕೆಲಸದಲ್ಲಿ ಪ್ರತೀ ವಾರ್ಡ್‍ಗೆ 5 ಜನ ಕಾರ್ಮಿಕರಿರಬೇಕು. ಕೆಲವೆಡೆ ಮೂರು ಜನ ಮಾತ್ರ ಇದ್ದಾರೆ ಎಂದು ಮನಪಾ ಸದಸ್ಯರು ದೂರಿಕೊಂಡಾಗ, ಕಾರ್ಮಿಕರ ಸಂಖ್ಯೆ ಪಟ್ಟಿ ಕೊಡುವಂತೆ ಆಯುಕ್ತ ಅಕ್ಷಯ್ ಶ್ರೀಧರ್ ಸೂಚಿಸಿದರು.

ಸಮಯ ಪರಿಪಾಲನೆ ಸರಿಯಾಗಿ ಮಾಡುತ್ತಿಲ್ಲ. ಕೆಲವೆಡೆ ಬಸ್ಸಿಲ್ಲ ಎಂದು ಮಧ್ಯಾಹ್ನವೇ ಹೋಗುತ್ತಾರೆ. ಬೆಳಗ್ಗೆ 8 ಗಂಟೆಗೆ ಇರಬೇಕಾದ ಕಾರ್ಮಿಕರು ಕೆಲವೆಡೆ ಹತ್ತು ಗಂಟೆಯಾದರೂ ಕೆಲಸದಲ್ಲಿ ನಿರತರಾಗಿರುವುದಿಲ್ಲ  ಎಂಬ ದೂರು  ಕೇಳಿ ಬಂತು.

ತ್ಯಾಜ್ಯ ವಿಲೇವಾರಿ, ಹುಲ್ಲು ವಿಲೇವಾರಿಗೆ ಲಾರಿಗಳು ಸಿಗುತ್ತಿಲ್ಲ. ರಸ್ತೆ ಬದಿ ಹುಲ್ಲು ರಾಶಿ ತೆಗೆಯುವುದಿಲ್ಲ. ಇದನ್ನು ವಿಲೇವಾರಿ ಮಾಡಬೇಕು. ಕಸ ಬೀಳುವ ಸ್ಥಳವನ್ನು ಸ್ವಚ್ಚಗೊಳಿಸುವುದು, ಕಸ ವಿಂಗಡಿಸುವುದು ಅಗತ್ಯವಾಗಿ ಆಗಬೇಕು. ಸ್ವಚ್ಚತೆಗೆ ಹೆಚ್ಚಿನ ಆದ್ಯತೆ ನೀಡುವುದು ಅಗತ್ಯ ಎಂದು ಶಾಸಕರು ಹೇಳಿದರು.

ಹೊಸಬೆಟ್ಟು ಬಳಿ ಬೇರೆ ಕಂಪೆನಿಯವರು ಪೈಪ್ ಲೈನ್ ಹಾಕುವಾಗ ಕುಡಿಯುವ ನೀರಿನ ಪೈಪ್‍ಗೆ ದಕ್ಕೆಯಾಗಿದೆ. ಕೆಸರು ತುಂಬಿ ನೀರು ಸರಿಯಾಗಿ ಬರುತ್ತಿಲ್ಲ ಎಂದಾಗ ಪೈಪ್ ಲೈನ್ ಬ್ಲಾಕ್ ಆದ ಸ್ಥಳ ಗುರುತಿಸಿ ಸ್ವಚ್ಚ ಮಾಡುವ ಕಾರ್ಯ ನಡೆಯುತ್ತಿದೆ ಎಂದು ಇಂಜಿನಿಯರ್ ಮಾಹಿತಿ ನೀಡಿದರು.

ಇ ಖಾತಾ ಆನ್‍ಲೈನ್ ಸಮಸ್ಯೆಯೂ ಹೆಚ್ಚಿದ್ದು, ಮಂಗಳೂರು ಒನ್ ಕೇಂದ್ರದ ಮೂಲಕ ಇದೀಗ ನೀಡುವ ಕೆಲಸ ಆಗುತ್ತಿದೆ. ಪಾಲಿಕೆ ಕಚೇರಿಯಲ್ಲಿ ಕಡತ ವಿಲೇವಾರಿ ವಿಳಂಬವಾಗುತ್ತಿದೆ. ಇದಕ್ಕೆ ಸೂಕ್ತ ಪರಿಹಾರ ಕ್ರಮ ಜರುಗಿಸಿ ಎಂದು ಶಾಸಕರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಪ್ರಮುಖ ರಸ್ತೆಗಳಲ್ಲಿ ಹೊಂಡವಿದ್ದರೆ ಮುಚ್ಚಿಸುವ ಕೆಲಸಕ್ಕೆ ಮುಂದಾಗಬೇಕು ಎಂದು ಶಾಸಕರು ಸೂಚಿಸಿದಾಗ ಆಯುಕ್ತರು ಕ್ರಮ ಜರುಗಿಸುವುದಾಗಿ ನುಡಿದರು.

ಸಭೆಯಲ್ಲಿ  ಮನಪಾ ಸದಸ್ಯರಾದ ನಯನ ಆರ್.ಕೋಟ್ಯಾನ್, ಶೋಭಾ ರಾಜೇಶ್, ವರುಣ್ ಚೌಟ, ಸುನಿತಾ, ಸರಿತ ಶಶಿಧರ್, ಶ್ವೇತ ಎ., ಲೋಕೇಶ್ ಬೊಳ್ಳಾಜೆ, ಲಕ್ಷ್ಮೀ ಶೇಖರ್ ದೇವಾಡಿಗ, ವೇದಾವತಿ, ವಲಯ ಆಯುಕ್ತೆ ವಾಣಿ ಆಳ್ವ, ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X