Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದಸರಾ ಕವಿಗೋಷ್ಟಿಯಲ್ಲಿ ಬ್ಯಾರಿ ಭಾಷೆಗೆ...

ದಸರಾ ಕವಿಗೋಷ್ಟಿಯಲ್ಲಿ ಬ್ಯಾರಿ ಭಾಷೆಗೆ ಅವಕಾಶ ನಿರಾಕರಣೆ: ಬಿಜೆಪಿಯದ್ದು ಏಕಾಭಾಷೆ ಮೆರೆಸುವ ಹುನ್ನಾರ ಎಂದ ಎಚ್ ಡಿಕೆ

ವಾರ್ತಾಭಾರತಿವಾರ್ತಾಭಾರತಿ28 Sept 2022 10:02 PM IST
share
ದಸರಾ ಕವಿಗೋಷ್ಟಿಯಲ್ಲಿ ಬ್ಯಾರಿ ಭಾಷೆಗೆ ಅವಕಾಶ ನಿರಾಕರಣೆ: ಬಿಜೆಪಿಯದ್ದು ಏಕಾಭಾಷೆ ಮೆರೆಸುವ ಹುನ್ನಾರ ಎಂದ ಎಚ್ ಡಿಕೆ

ಬೆಂಗಳೂರು: ಮೈಸೂರು ದಸರಾ ಕವಿಗೋಷ್ಟಿಯಲ್ಲಿ ಬ್ಯಾರಿ ಭಾಷೆಗೆ ಅವಕಾಶ ನಿರಾಕರಿಸಿರುವ ರಾಜ್ಯ ಬಿಜೆಪಿ ಸರಕಾರ ಮತ್ತು ದಸರಾ ಸಮಿತಿಯ ನಡೆಯನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಖಂಡಿಸಿದ್ದಾರೆ. 

ಈ ಬಗ್ಗೆ ಟ್ವೀಟ್ ಮಾಡಿರು ಅವರು, 'ಜಗದ್ವಿಖ್ಯಾತ ದಸರಾ ಕವಿಗೋಷ್ಠಿಯಲ್ಲಿ ಬ್ಯಾರಿ ಭಾಷೆಗೆ ಅವಕಾಶ ನಿರಾಕರಿಸಿರುವುದು ಸಮ್ಮತವಲ್ಲ.ಬ್ಯಾರಿಯು ಕನ್ನಡದ ನೆರಳಿನಲ್ಲಿ ಅರಳಿರುವ ಭಾಷೆ ಹಾಗೂ ಕರಾವಳಿಯಲ್ಲಿ ಅನೇಕರ ನಿತ್ಯನುಡಿ. ಕೇವಲ ಒಂದು ಸಮುದಾಯದವರು ಮಾತನಾಡುತ್ತಾರೆ ಎನ್ನುವ ಕಾರಣಕ್ಕೆ ಬ್ಯಾರಿಯನ್ನು ಬೇಡವೆನ್ನುವುದು ತಪ್ಪು. ರಾಜ್ಯ ಬಿಜೆಪಿ ಸರಕಾರದ್ದು ಏಕಪಕ್ಷೀಯ ನಡೆ' ಎಂದು ಅವರು ಹೇಳಿದ್ದಾರೆ.

'ಈ ವರ್ಷದ ದಸರಾ ಕವಿಗೋಷ್ಠಿಯಲ್ಲಿ ಕನ್ನಡದೊಂದಿಗೆ ತುಳು, ಕೊಂಕಣಿ, ಕೊಡವ, ಅರೆಭಾಷೆ ಮತ್ತು ಎರವ ಬಾಷೆಗಳಿಗೆ ಅವಕಾಶ ನೀಡಿರುವುದು ಸ್ವಾಗತಾರ್ಹ. ಆದರೆ, ಬ್ಯಾರಿ ಭಾಷೆಗೆ ಅವಕಾಶ ನಿರಾಕರಿಸಿರುವುದು ರಾಜ್ಯ ಬಿಜೆಪಿ  ಸರಕಾರದ ಸಂಕುಚಿತ ಮನೋಭಾವಕ್ಕೆ ಸಾಕ್ಷಿ' ಎಂದು ಅವರು ಟೀಕಿಸಿದ್ದಾರೆ.

'ಏಕಭಾಷೆಯನ್ನು ಮೆರೆಸುವ ಬಿಜೆಪಿಗೆ ಈ ನೆಲದ ತಾಯಿಭಾಷೆ ಕನ್ನಡವೂ ಸೇರಿ ಇತರೆ ಎಲ್ಲಾ ಉಪಭಾಷೆಗಳನ್ನು ಅಳಿಸಿಹಾಕಬೇಕೆಂಬ ಕೆಟ್ಟ ಮನಃಸ್ಥಿತಿ ಇರುವಂತಿದೆ. ಇದು ಖಂಡಿತಾ  ನಡೆಯುವುದಿಲ್ಲ' ಎಂದು ಕುಮಾರಸ್ವಾಮಿ ಅವರು ಎಚ್ಚರಿಕೆ ನೀಡಿದ್ದಾರೆ.

'ರಾಜ್ಯದಲ್ಲಿ 12 ಲಕ್ಷಕ್ಕೂ ಹೆಚ್ಚು ಜನರು ಬ್ಯಾರಿ ಭಾಷೆ ಮಾತಾಡುತ್ತಾರೆ. 2007ರಲ್ಲಿ ನಾನು ಮುಖ್ಯಮಂತ್ರಿ ಆಗಿದ್ದಾಗ ಬ್ಯಾರಿ ಭಾಷಿಗರ ಬಹುಕಾಲದ ಬೇಡಿಕೆ ಆಗಿದ್ದ ʼಬ್ಯಾರಿ ಸಾಹಿತ್ಯ ಅಕಾಡೆಮಿʼ ಸ್ಥಾಪನೆಗೆ ಅನುಮೋದನೆ ನೀಡಿದ್ದೆ. ಬ್ಯಾರಿ ಅಕಾಡೆಮಿಯ ಮೂಲಕ ಅತ್ಯುತ್ತಮ ಸಾಹಿತ್ಯಕ ಕಾರ್ಯಕ್ರಮಗಳು ನಡೆಯುತ್ತಿವೆ. ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಬ್ಯಾರಿ ಅಧ್ಯಯನ ಪೀಠವನ್ನೂ ಸ್ಥಾಪಿಸಲಾಗಿದೆ. ವಿಶೇಷವೆಂದರೆ, ಬ್ಯಾರಿ ಭಾಷಿಗರು ಕನ್ನಡ ಲಿಪಿಯನ್ನೇ ಬಳಸಿ ಅತ್ಯುತ್ತಮ ಕೃತಿಗಳನ್ನು ರಚಿಸಿದ್ದು, ಅವುಗಳಲ್ಲಿ ಕೆಲ ಕೃತಿಗಳು ಕನ್ನಡಕ್ಕೂ ಅನುವಾದಿಸಲ್ಪಟ್ಟಿವೆ' ಎಂದು ತಿಳಿಸಿದ್ದಾರೆ.

'ವಚನ ಸಾಹಿತ್ಯ ಸೇರಿ ಅನೇಕ ಕನ್ನಡದ ಅಮೂಲ್ಯ ಕೃತಿಗಳು ಬ್ಯಾರಿಗೂ ಅನುವಾದಗೊಂಡಿವೆ. ಕನ್ನಡ ನೆಲದಲ್ಲಿ ಕನ್ನಡ ಲಿಪಿಯೊಂದಿಗೆ ಸಾಮರಸ್ಯದ ಭಾಷೆಯಾಗಿ ಬೆರೆತಿರುವ ಬ್ಯಾರಿ ಭಾಷೆಗೆ ಈ ವರ್ಷ ದಸರಾ ಕವಿಗೋಷ್ಠಿಯಲ್ಲಿ ಅವಕಾಶ ನಿರಾಕರಿಸಿರುವುದು ಅಕ್ಷಮ್ಯ. ರಾಜ್ಯ ಬಿಜೆಪಿ ಸರಕಾರ ಮತ್ತು ದಸರಾ ಸಮಿತಿ ಕೂಡಲೇ ಈ ಬಗ್ಗೆ ಪರಿಶೀಲಿಸಿ, ಆಗಿರುವ ಪ್ರಮಾದವನ್ನು ಸರಿಪಡಿಸಿ ದಸರಾ ಕವಿಗೋಷ್ಠಿಯಲ್ಲಿ ಬ್ಯಾರಿ ಭಾಷೆಗೆ ಅವಕಾಶ ಕಲ್ಪಿಸಿಕೊಡಬೇಕು' ಎಂದು ಮಾಜಿ ಮುಖ್ಯಮಂತ್ರಿಗಳು ಒತ್ತಾಯ ಮಾಡಿದ್ದಾರೆ.

ರಾಜ್ಯ @BJP4Karnataka ಸರಕಾರ ಮತ್ತು ದಸರಾ ಸಮಿತಿ ಕೂಡಲೇ ಈ ಬಗ್ಗೆ ಪರಿಶೀಲಿಸಿ, ಆಗಿರುವ ಪ್ರಮಾದವನ್ನು ಸರಿಪಡಿಸಿ ದಸರಾ ಕವಿಗೋಷ್ಠಿಯಲ್ಲಿ ಬ್ಯಾರಿ ಭಾಷೆಗೆ ಅವಕಾಶ ಕಲ್ಪಿಸಿಕೊಡಬೇಕು. 7/7

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) September 28, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X