ಮೈಸೂರು ದಸರಾ | 'ಪಾರಂಪರಿಕ ಸೈಕಲ್ ಸವಾರಿ'ಗೆ ಸಚಿವ ಸೋಮಶೇಖರ್ ಚಾಲನೆ
ಮೈಸೂರು, ಸೆ.29: ನಾಡಹಬ್ಬ ಮೈಸೂರು ದಸರಾ(Mysuru Dasara) ಮಹೋತ್ಸವದ ಪ್ರಯುಕ್ತ ನಗರದ ಟೌನ್ ಹಾಲ್ ಎದುರು ಪುರಾತತ್ವ,ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆ ವತಿಯಿಂದ ಆಯೋಜಿಸಿದ್ದ 'ಪಾರಂಪರಿಕ ಸೈಕಲ್ ಸವಾರಿ(ಟ್ರಿನ್-ಟ್ರಿನ್)' ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಚಾಲನೆ ನೀಡಿದರು
ಈ ಸಂದರ್ಭ ಮಾತನಾಡಿದ ಸಚಿವರು, ದಸರಾ ಪ್ರಯುಕ್ತ ಪುರಾತತ್ವ, ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆಯವರು ಮೈಸೂರಿನಲ್ಲಿರುವ ಪಾರಂಪರಿಕ ಕಟ್ಟಡಗಳ ವೀಕ್ಷಣೆಗಾಗಿ ಸೈಕಲ್ ಸವಾರಿಯನ್ನು ಏರ್ಪಡಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಯುವಕರು, ಹಿರಿಯರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದಾರೆ. ಸೈಕಲ್ ಸವಾರಿಗೆ ಸೂಕ್ತ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.
ಸೈಕಲ್ ಸವಾರಿಯಲ್ಲಿ 60 ವರ್ಷದ ಒಳಗಿನ ಸಾರ್ವಜನಿಕರು ಹಾಗೂ 15 ವರ್ಷ ಮೇಲ್ಪಟ್ಟ ಶಾಲಾ-ಕಾಲೇಜು ವಿದ್ಯಾರ್ಥಿಗಳು ಮೈಸೂರು, ಮಂಡ್ಯ, ಕೊಡಗು, ಬೆಂಗಳೂರು ಸೇರಿದಂತೆ ಇತರ ಜಿಲ್ಲೆಗಳಿಂದ ಸುಮಾರು ನೂರಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಶಾಸಕ ಎಲ್.ನಾಗೇಂದ್ರ ಸೇರಿದಂತೆ ಪುರಾತತ್ವ, ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ: ಶಿವಮೊಗ್ಗ | ಪಿಎಫ್ಐ, ಎಸ್ ಡಿಪಿಐ ಕಚೇರಿ, ಮುಖಂಡರ ಮನೆಗಳ ಮೇಲೆ ಪೊಲೀಸ್ ದಾಳಿ