ಗುಂಡ್ಲುಪೇಟೆ | ರಾಹುಲ್, ಸಿದ್ದರಾಮಯ್ಯ, ಡಿಕೆಶಿ, ಪುಟ್ಟರಂಗಶೆಟ್ಟಿ ಫ್ಲೆಕ್ಸ್ ಹರಿದ ಕಿಡಿಗೇಡಿಗಳು

ಚಾಮರಾಜನಗರ, ಸೆ.29: ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ಹಮ್ಮಿಕೊಂಡಿರುವ 'ಭಾರತ್ ಜೋಡೋ ಯಾತ್ರೆ' (Bharat jodo yatra) ಸೆ.30ರಂದು ಗುಂಡ್ಲುಪೇಟೆ ಮೂಲಕ ರಾಜ್ಯ ಪ್ರವೇಶಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಗುಂಡ್ಲುಪೇಟೆ ಪಟ್ಟಣದಲ್ಲಿ ಪಕ್ಷದ ವತಿಯಿಂದ ಅಳವಡಿಸಿದ್ದ ನಾಯಕರ ಫ್ಲೆಕ್ಸ್ ಗಳನ್ನು ಗುರುವಾರ ಬೆಳಗ್ಗಿನ ಜಾವ ಕಿಡಿಗೇಡಿಗಳು ಹರಿದು ಹಾಕಿದ್ದಾರೆ.
ಗುಂಡ್ಲುಪೇಟೆ ಪಟ್ಟಣದಲ್ಲಿ ಸುರಭಿ ಹೋಟೇಲ್ನಿಂದ ಊಟಿ ರಸ್ತೆಯ ಉದ್ದಕ್ಕೂ ಅಳವಡಿಸಿದ್ದ ಎಐಸಿಸಿ ನಾಯಕ ರಾಹುಲ್ ಗಾಂಧಿ, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಚಾಮರಾಜನಗರ ಶಾಸಕ ಸಿ.ಪುಟ್ಟರಂಗಶೆಟ್ಟಿ ಭಾವಚಿತ್ರಗಳಿರುವ ಫ್ಲೆಕ್ಸ್ ಅನ್ನು ಹರಿದು ಹಾಕಲಾಗಿದೆ.
ಇದನ್ನೂ ಓದಿ: ಮೈಸೂರು ದಸರಾ | 'ಪಾರಂಪರಿಕ ಸೈಕಲ್ ಸವಾರಿ'ಗೆ ಸಚಿವ ಸೋಮಶೇಖರ್ ಚಾಲನೆ





Next Story