ಮನಪಾ ಪ್ರತಿಪಕ್ಷ ನಾಯಕರಾಗಿ ನವೀನ್ ಡಿಸೋಜ ಅಧಿಕಾರ ಸ್ವೀಕಾರ

ಮಂಗಳೂರು, ಸೆ.29: ಮಂಗಳೂರು ಮಹಾನಗರ ಪಾಲಿಕೆಯ ಪ್ರತಿಪಕ್ಷದ ನಾಯಕರಾಗಿ ಕಾರ್ಪೊರೇಟರ್ ನವೀನ್ ಆರ್. ಡಿಸೋಜ ಗುರುವಾರ ಅಧಿಕಾರ ಸ್ವೀಕರಿಸಿದರು.
ನಿಕಟಪೂರ್ವ ಪ್ರತಿಪಕ್ಷ ನಾಯಕ ಎ.ಸಿ. ವಿನಯರಾಜ್ ಅಧಿಕಾರ ಹಸ್ತಾಂತರಿಸಿದರು. ಈ ಸಂದರ್ಭ ಮಾಜಿ ಶಾಸಕರಾದ ಮೊಯ್ದಿನ್ ಬಾವ, ಜೆ.ಆರ್.ಲೋಬೊ, ಮಾಜಿ ಮೇಯರ್ ಶಶಿಧರ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.
Next Story