ಸಾಗರ | ಸರಣಿ ಅಪಘಾತದಲ್ಲಿ ನಾಲ್ವರಿಗೆ ಗಂಭೀರ ಗಾಯ
ಸಾಗರ: ಇಲ್ಲಿನ ಅಂಬಾಪುರ ಬಳಿ ಕಾರೊಂದರ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಎರಡು ಕಾರು, ಒಂದು ಬಸ್ಸು ಹಾಗೂ ಬೈಕ್ ಸೇರಿದಂತೆ ಸರಣಿ ಅಪಘಾತ ಸಂಭವಿಸಿದೆ.
ಘಟನೆಯಲ್ಲಿ ಕಾರಿನಲ್ಲಿದ್ದ ಜೋಗ ನಿವಾಸಿಗಳಾದ ಕೃಷ್ಣಮೂರ್ತಿ, ಬಾಲಕೃಷ್ಣ, ಮಧು ಹಾಗೂ ಬೈಕ್ ಚಾಲಕ ಶ್ರೀಧರ ಅವರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳಿಗೆ ಸಾಗರ ಉಪವಿಭಾಗೀಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.
ಅಪಘಾತದ ತೀವ್ರತೆಗೆ ಎರಡು ಕಾರುಗಳು ಹಾಗೂ ಬೈಕ್ ಜಖಂಗೊಂಡಿದ್ದು, ಬಸ್ಸಿಗೆ ಕೂಡ ಹಾನಿಯಾಗಿದೆ ಎನ್ನಲಾಗಿದೆ.
ಸ್ಥಳಕ್ಕೆ ಸಾಗರ ಗ್ರಾಮಾಂತರ ಠಾಣೆಯ ಇನ್ಸ್‌ಪೆಕ್ಟರ್ ಪ್ರವೀಣ್ ಕುಮಾರ್, ಸಬ್ ಇನ್ಸ್‌ಪೆಕ್ಟರ್ ಸುಜಾತ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅಪಘಾತದಿಂದಾಗಿ ಕೆಲ ಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತವಾಗಿತ್ತು.
Next Story