Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಹೊಸ ಶಿಕ್ಷಣ ನೀತಿಯಲ್ಲಿನ ಅವಸರದ...

ಹೊಸ ಶಿಕ್ಷಣ ನೀತಿಯಲ್ಲಿನ ಅವಸರದ ಅನುಷ್ಠಾನ ಪ್ರಯೋಜನ ರಹಿತ: ಡಾ. ಶ್ರೀಧರ ಎಚ್.ಜಿ.

ಪುತ್ತೂರು ತಾಲೂಕು 21ನೆ ಕನ್ನಡ ಸಾಹಿತ್ಯ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ29 Sept 2022 10:43 PM IST
share
ಹೊಸ ಶಿಕ್ಷಣ ನೀತಿಯಲ್ಲಿನ ಅವಸರದ ಅನುಷ್ಠಾನ ಪ್ರಯೋಜನ ರಹಿತ: ಡಾ. ಶ್ರೀಧರ ಎಚ್.ಜಿ.

ಪುತ್ತೂರು: ಹೊಸ ಶಿಕ್ಷಣ ನೀತಿಯಲ್ಲಿ ಅಪಾರವಾದ ಸಾಧ್ಯತೆಗಳಿದೆ ಎಂಬುದು ಸತ್ಯ. ಆದರೆ, ಅದರ ಅನುಷ್ಠಾನವನ್ನು ವ್ಯವಸ್ಥಿತವಾಗಿ ಮಾಡದೆ ಅವಸರದಲ್ಲಿ ಮಾಡಿದರೆ ಯಾವ ಪ್ರಯೋಜನವೂ ದೊರೆಯದು. ಆರಂಭಿಕ ನೆಲೆಯಲ್ಲಿ ಪ್ರಾಯೋಗಿಕವಾಗಿ ನಾಲ್ಕಾರು ಸಂಸ್ಥೆಗಳಲ್ಲಿ ಅನುಷ್ಠಾನ ಮಾಡಿ ಅದರ ಸಾಧ್ಯತೆಗಳನ್ನು ಗಮನಿಸಿ ಬಳಕೆಗೆ ತರಬೇಕಾಗಿದೆ. ಇದರಲ್ಲಿರುವ ಕೆಲವೊಂದು ಗೊಂದಲಗಳನ್ನು ಸರಿಪಡಿಸಿಕೊಂಡು ಅನುಷ್ಠಾನಗೊಳಿಸಬೇಕಾದ ಅಗತ್ಯವಿದೆ ಡಾ. ಶ್ರೀಧರ ಎಚ್.ಜಿ. ಅಭಿಪ್ರಾಯಪಟ್ಟರು. 

ಅವರು ಸೆ.29 ಮತ್ತು 30ರಂದು ಪುತ್ತೂರಿನ ಅಂಬಿಕಾ ಕೇಂದ್ರೀಯ  ವಿದ್ಯಾಲಯ ಆವರಣದಲ್ಲಿ ನಡೆಯಲಿರುವ 21ನೆಯ ಕನ್ನಡ ಸಾಹಿತ್ಯ ಸಮ್ಮೇಳನವದ ಸರ್ವಾಧ್ಯಕ್ಷತೆ ವಹಿಸಿ ಮಾತನಾಡಿದರು.

ಶಿಕ್ಷಣ ಕ್ಷೇತ್ರದಲ್ಲಿ ಕೆಲಸ ಮಾಡುವ ಪ್ರತಿಯೊಬ್ಬರೂ ಕನ್ನಡ ಭಾಷೆ, ಸಾಹಿತ್ಯದ ಬಗ್ಗೆ ಒಲವನ್ನು ಹೊಂದಿರಬೇಕು. ಸಾಹಿತ್ಯದ ವಿದ್ಯಾರ್ಥಿಯಾದ ಶಿಕ್ಷಕ ಪರಿಣಾಮಕಾರಿಯಾಗಿ ಕೆಲಸ ಮಾಡಬಲ್ಲ. ಪ್ರತಿಯೊಂದು ಪ್ರಾಥಮಿಕ ಶಾಲೆಯ ಗ್ರಂಥ ಭಂಡಾರದಲ್ಲಿರುವ ಪುಸ್ತಕಗಳು ಮಕ್ಕಳಿಗೆ ಎಟುಕುವಂತಿರಬೇಕು. ಮಕ್ಕಳನ್ನು ದೃಷ್ಟಿಯಲ್ಲಿರಿಸಿಕೊಂಡು ಸಾಹಿತ್ಯ ಪರಿಷತ್ತು ಕಾರ್ಯಕ್ರಮಗಳನ್ನು ಸಂಘಟಿಸಬೇಕು. ಕೃಷಿಗೆ ಸಂಬಂಧಿಸಿದ ವಿವರಗಳು ಕಾಲೇಜ್ ಪಠ್ಯದಲ್ಲಿ ಸೇರಬೇಕು. ವಿಶೇಷವಾಗಿ ಹೊಸ ಶಿಕ್ಷಣ ನೀತಿಯ ಪರಿಕಲ್ಪನೆಯಲ್ಲಿ ಕೃಷಿ, ಪರಿಸರ, ಭೂಮಿ ಇತ್ಯಾದಿ ವಿಷಯಕ್ಕೆ ಸಂಬಂಧಿಸಿ ವಿಷಯಗಳನ್ನು ಗೊತ್ತುಪಡಿಸಲಾಗಿದೆ. ಪಠ್ಯವನ್ನು ನಿಗದಿಪಡಿಸುವ ಸಂದರ್ಭ ವಿದ್ಯಾರ್ಥಿಗಳಿಗೆ ಹೆಚ್ಚಿನ ಅರಿವನ್ನು ಮೂಡಿಸುವಂತೆ ಆಯ್ಕೆ ಮಾಡಿದರೆ ಹೊಸ ಶಿಕ್ಷಣ ನೀತಿಯನ್ನು ಅನುಷ್ಠಾನ ಮಾಡಿದ್ದಕ್ಕೆ ಸಾರ್ಥಕವಾಗುತ್ತದೆ ಎಂದರು. 

ಆಂಗ್ಲ ಮಾಧ್ಯಮಕ್ಕೆ ಅನುಮತಿ ಕೊಡುವ ಅನಿವಾರ್ಯತೆಯ ನಡುವೆ ಕನ್ನಡ ಶಾಲೆಗಳನ್ನು ಅತ್ಯಂತ ಸಮರ್ಥವಾಗಿ ಬಲಪಡಿಸುವ ಕೆಲಸವೂ ಆಗಬೇಕು. ಪ್ರಾಯೋಗಿಕ ನೆಲೆಯಲ್ಲಿ ಕನ್ನಡವನ್ನು ಉಳಿಸುವುದರ ಬಗೆಗೆ ಕ್ರಿಯಾಶೀಲ ಯೋಜನೆಗಳು ನಡೆಯಬೇಕು. ಸರ್ಕಾರ ಕನ್ನಡ ಶಾಲೆಗಳಿಗೆ ತಾರತಮ್ಯ ರಹಿತ ಅನುದಾನ ಒದಗಿಸಿ ಬೆಂಬಲಿಸಬೇಕು. ಕನ್ನಡ ಮಾಧ್ಯಮ ಶಾಲೆಗಳಲ್ಲಿ ಉತ್ತಮ ಇಂಗ್ಲಿಷ್ ಶಿಕ್ಷಕರನ್ನು ನೇಮಿಸಿ ಭಾಷೆಯನ್ನು ಸರಿಯಾಗಿ ಕಲಿಸಬೇಕು. ಮುಖ್ಯವಾಗಿ ಮನೆಯ ಒಳಗಿನ ಪರಿಸರ ಕನ್ನಡಮಯವಾದರೆ ಶಾಲೆಯಲ್ಲಿ ಮಗು ಯಾವ ಮಾಧ್ಯಮದಲ್ಲಿ ಕಲಿತರೂ ಯಾವುದೇ ಪರಿಣಾಮವಾಗುವುದಿಲ್ಲ ಎಂದರು. 

ಕನ್ನಡ ಭಾಷೆ ಪರಿಪೂರ್ಣವಾದದ್ದು : ನಾಡೋಜ ಡಾ. ಮಹೇಶ್ ಜೋಷಿ

ಸಾಹಿತ್ಯ ಸಮ್ಮೇಳನ ಉದ್ಘಾಟಿಸಿದ ರಾಜ್ಯ ಕಸಾಪ ಅಧ್ಯಕ್ಷ ನಾಡೋಜ ಡಾ. ಮಹೇಶ್ ಜೋಷಿ ಮಾತನಾಡಿ ಕನ್ನಡ ಮಾತನಾಡುವಂತೆ ಬರೆಯುವ, ಬರೆಯುವಂತೆ ಮಾತನಾಡುವ ಜಗತ್ತಿನ ಕೇವಲ ಮೂರು ಪರಿಪೂರ್ಣ ಭಾಷೆಗಳಲ್ಲಿ ಕನ್ನಡವೂ ಒಂದಾಗಿದೆ. ಖಾಸಗಿ ಸಂಸ್ಥೆಯೊಂದು ಈ ಬಗ್ಗೆ ವಿಶ್ವಾದ್ಯಂತ ಸಂಶೋಧನೆ ನಡೆಸಿದ್ದು, ಸಂಸ್ಕøತ, ಗ್ರೀಕ್ ಹಾಗೂ ಕನ್ನಡ ಭಾಷೆಗಳಷ್ಟೇ ಪರಿಪೂರ್ಣ ಎಂಬುದನ್ನು ನಿರೂಪಿಸಿದೆ. ಜಗತ್ತಿನ್ಯಾದ್ಯಂತ ಖ್ಯಾತವಾಗಿರುವ ಇಂಗ್ಲಿಷ್ ಹಾಗೂ ಇತರೆ ಭಾಷೆಗಳಲ್ಲೂ ಲೋಪವಿದೆ. ಕರಾವಳಿ ಕನ್ನಡ ಭಾಷೆ ಉಳಿಸಿ ಬೆಳೆಸುವಲ್ಲಿ ವಿಶೇಷ ಕೊಡುಗೆ ನೀಡಿದೆ. ಕನ್ನಡ ಮಾತನಾಡುವಂತೆ ಬರೆಯುವ, ಬರೆಯುವಂತೆ ಮಾತನಾಡುವ, ಮಾತನಾಡಿದಂತೆ ನಡೆದುಕೊಳ್ಳುವ ಏಕೈಕ ಊರು ಅದು ಕರಾವಳಿ ಪ್ರದೇಶ. ಕನ್ನಡ ಭಾಷೆಯನ್ನು ಬೇರು ಮಟ್ಟದಲ್ಲಿ ಭದ್ರವಾದ ಅಡಿಪಾಯ ಹಾಕಬೇಕಾದ ಅವಶ್ಯಕತೆಯಿದೆ. ಆದ್ದರಿಂದ ಮುಂದೆ ತಾಲೂಕು ಮಾತ್ರವಲ್ಲ ಹೋಬಳಿ ಹಾಗೂ ಗ್ರಾಮ ಮಟ್ಟದಲ್ಲಿಯೂ ಕನ್ನಡವನ್ನು ಬಲಗೊಳಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿ, ಭಾಷೆ ಬೆಳೆಸುವ ಕಾರ್ಯಕ್ಕೆ ಸಂಪೂರ್ಣ ಸಹಕಾರ ನೀಡಲಿದ್ದೇನೆ ಎಂದರು.

ಸ್ಮರಣ ಸಂಚಿಕೆ 'ಸಿಂಧೂರ' ಬಿಡುಗಡೆಗೊಳಿಸಿ ಮಾತನಾಡಿದ ಸಹಾಯಕ ಕಮಿಷನರ್ ಗಿರೀಶ್ ನಂದನ್, ಕನ್ನಡಕ್ಕೆ ವೀಶೇಷವಾದ ಭಾಷೆ ಸಂಸ್ಕøತಿಯಿದೆ. ಮನೆಯಲ್ಲಿ ಮಕ್ಕಳಿಗೆ ಕನ್ನಡ ಭಾಷೆ ಕಲಿಸಿದಲ್ಲಿ, ಮಕ್ಕಳು ವಿಚಾರಗಳನ್ನು ಪರಿಪೂರ್ಣವಾಗಿ ತಿಳಿದುಕೊಳ್ಳಲು ಸಾಧ್ಯ ಎಂದರು. 

ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಾ. ಎಂ. ಪಿ. ಶ್ರೀನಾಥ್ ಆಶಯ ನುಡಿಗಳನ್ನು ತಿಳಿಸಿದರು. ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕನ್ನಡ ಉಪನ್ಯಾಸಕ ಡಾ.ಮನಮೋಹನ್ ಸಮ್ಮೇಳನಾಧ್ಯಕ್ಷರ ಪರಿಚಯ ನೆರವೇರಿಸಿದರು. 

ಈ ಸಂದರ್ಭದಲ್ಲಿ ನಾಡೋಜ ಡಾ. ಮಹೇಶ್ ಜೋಷಿ ಅವರಿಗೆ ಅಂಬಿಕಾ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಅವರು ಭಗವದ್ಗೀತೆಯ ಕನ್ನಡ ಅನುವಾದ ಪುಸ್ತಕ ನೀಡಿದರು. ಸುಬ್ರಹ್ಮಣ್ಯ ನಟ್ಟೋಜ ಅವರಿಗೆ ಮಹೇಶ್ ಜೋಷಿ ಅವರು ಗೌರವಾರ್ಪಣೆ ಮಾಡಿದರು. ಸಮ್ಮೇಳನಾಧ್ಯಕ್ಷ ಡಾ. ಶ್ರೀಧರ ಎಚ್.ಜಿ. ದಂಪತಿಯನ್ನು ಸಾಂಪ್ರದಾಯಿಕವಾಗಿ ಗೌರವಿಸಲಾಯಿತು. ನಿಕಟಪೂರ್ವ ಅಧ್ಯಕ್ಷ ಎಸ್.ಜಿ. ಕೃಷ್ಣ ಅವರು ಸಮ್ಮೇಳನಾಧ್ಯಕ್ಷರಿಗೆ ಧ್ವಜ ಹಸ್ತಾಂತರ ಮಾಡಿದರು. ಕಲಾಪ್ರದರ್ಶನವನ್ನು ಸಾಹಿತಿ ವಸಂತ ತಾಳ್ತಜೆ ಉದ್ಘಾಟಿಸಿದರು. ವಸ್ತುಪ್ರದರ್ಶನ ಉದ್ಘಾಟಿಸಿದ ನಗರಸಭೆ ಉಪಾಧ್ಯಕ್ಷ ವಿದ್ಯಾಗೌರಿ ಶುಭಹಾರೈಸಿದರು. 

ಸಮ್ಮೇಳನದ ಸರ್ವಾಧ್ಯಕ್ಷ ಡಾ. ಶ್ರೀಧರ ಹೆಚ್.ಜಿ., ಕ.ಸಾ.ಪ. ಜಿಲ್ಲಾ ಗೌರವ ಕೋಶಾಧ್ಯಕ್ಷ ಬಿ. ಐತಪ್ಪ ನಾಯ್ಕ್, ನಿಕಟಪೂರ್ವ ಸಮ್ಮೇಳನಾಧ್ಯಕ್ಷ ಎಸ್.ಜಿ. ಕೃಷ್ಣ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಕುಮಾರ್ ಭಂಡಾರಿ ಎಚ್., ತಹಶೀಲ್ದಾರ್ ನಗರ ಸಭೆಯ ಸದಸ್ಯ ಪಿ.ಜಿ.ಜಗನ್ನಿವಾಸ ರಾವ್, ನಿಸರ್ಗಪ್ರಿಯ, ಕ.ಸಾಪ. ಜಿಲ್ಲಾ ಗೌರವ ಕಾರ್ಯದರ್ಶಿ ರಾಜೇಶ್ವರಿ ಎಂ., ಕ.ಸಾ.ಪ. ತಾಲೂಕು ಅಧ್ಯಕ್ಷರಾದ ಡಾ. ಮಂಜುನಾಥ್ ಎಸ್., ವಿಶ್ವನಾಥ್, ಡಿ.ಯದುಪತಿ ಗೌಡ, ಡಾ. ಧನಂಜಯ ಕುಂಬ್ಳೆ, ವೇಣುಗೋಪಾಲ ಶೆಟ್ಟಿ, ಗಾಯತ್ರಿ ಎಸ್. ಉಡುಪ ಮತ್ತಿತರರು ಉಪಸ್ಥಿತರಿದ್ದರು. 

ಅಂಬಿಕಾ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಸ್ವಾಗತಿಸಿದರು. ಕ.ಸಾ.ಪ. ತಾಲೂಕು ಘಟಕ ಗೌರವ ಕೋಶಾಧ್ಯಕ್ಷ ಡಾ. ಹರ್ಷಕುಮಾರ್ ರೈ ವಂದಿಸಿದರು. ರಾಜೇಶ್ ಬನ್ನೂರು, ಪುಷ್ಪಲತಾ ಎಂ. ನಿರೂಪಿಸಿದರು. 

ಪುತ್ತೂರು ನಗರಸಭಾ ಅಧ್ಯಕ್ಷ ಕೆ. ಜೀವಂಧರ್ ಜೈನ್ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಾ.ಎಂ.ಪಿ. ಶ್ರೀನಾಥ್ ಕನ್ನಡ ಪರಿಷತ್ತಿನ ಧ್ವಜಾರೋಹಣ ನೆರವೇರಿಸಿದರು. ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ಸಮ್ಮೇಳನದ ಧ್ವಜಾರೋಹಣ ನೆರವೇರಿಸಿದರು.

ಕನ್ನಡ ಭುವನೇಶ್ವರಿ ರಥ ಮೆರವಣಿಗೆ

ಸಮ್ಮೇಳನದ ಸಭಾ ಕಾರ್ಯಕ್ರಮಕ್ಕೆ ಮೊದಲು ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಿಂದ ಕನ್ನಡ ಭವನೇಶ್ವರಿ ರಥದ ಮೆರವಣಿಗೆ ನಡೆಯಿತು. ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ ದೀಪ ಪ್ರಜ್ವಲನೆ ಮಾಡಿದರು. ಕಸಾಪ ರಾಜ್ಯ ಅಧ್ಯಕ್ಷ ನಾಡೋಜ ಡಾ. ಮಹೇಶ್ ಜೋಷಿ, ಜಿಲ್ಲಾ ಅಧ್ಯಕ್ಷ ಡಾ. ಎಂ.ಪಿ.ಶ್ರೀನಾಥ್,  ತಾಲೂಕು ಅಧ್ಯಕ್ಷ ಉಮೇಶ್ ನಾಯಕ್  ತೆಂಗಿನ ಕಾಯಿ ಒಡೆದು ಮೆರವಣಿಗೆಗೆ ಚಾಲನೆ ನೀಡಿದರು. ಇದರೊಂದಿಗೆ ಇನ್ನೊಂದು ವಾಹನದಲ್ಲಿ ಸಮ್ಮೇಳನಾಧ್ಯಕ್ಷರ ಮೆರವಣಿಗೆ ನಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X