ಮಾಜಿ ಸಿಎಂ ಎಸ್.ಎಂ. ಕೃಷ್ಣ ಸಂಪೂರ್ಣ ಗುಣಮುಖ: ಆಸ್ಪತ್ರೆಯಿಂದ ಬಿಡುಗಡೆ
ಬೆಂಗಳೂರು: ಹಿರಿಯ ರಾಜಕಾರಣಿ ರಾಜ್ಯದ ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಅವರು ಅನಾರೋಗ್ಯದಿಂದ ಸಂಪೂರ್ಣ ಗುಣಮುಖರಾಗಿ ಇಂದು ಬೆಳಗ್ಗೆ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ.
ಉಸಿರಾಟದ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಕಳೆದ ರವಿವಾರ ಹಿರಿಯ ಮುಖಂಡ ಎಸ್.ಎಂ ಕೃಷ್ಣ ದಾಖಲಾಗಿದ್ದರು.
ಆಸ್ಪತ್ರೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸೇರಿದಂತೆ ಸಚಿವರು ಭೇಟಿ ನೀಡಿ, ಮಾಜಿ ಸಿಎಂ ಆರೋಗ್ಯ ವಿಚಾರಿಸಿದ್ದರು.
Next Story