Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಿಇಟಿ ಪರಿಷ್ಕೃತ ರ್‍ಯಾಂಕಿಂಗ್ ಬಿಡುಗಡೆ;...

ಸಿಇಟಿ ಪರಿಷ್ಕೃತ ರ್‍ಯಾಂಕಿಂಗ್ ಬಿಡುಗಡೆ; ಮೊದಲ 500 ರ್‍ಯಾಂಕಿಂಗ್‌ನಲ್ಲಿ ವ್ಯತ್ಯಾಸವಿಲ್ಲ

ವಾರ್ತಾಭಾರತಿವಾರ್ತಾಭಾರತಿ1 Oct 2022 5:56 PM IST
share
ಸಿಇಟಿ ಪರಿಷ್ಕೃತ ರ್‍ಯಾಂಕಿಂಗ್ ಬಿಡುಗಡೆ; ಮೊದಲ 500 ರ್‍ಯಾಂಕಿಂಗ್‌ನಲ್ಲಿ ವ್ಯತ್ಯಾಸವಿಲ್ಲ

ಬೆಂಗಳೂರು: ಹೈಕೋರ್ಟ್ ಏಕಸದಸ್ಯ ಪೀಠದ ಆದೇಶದಂತೆ ಸಿಇಟಿ ರ್‍ಯಾಂಕಿಂಗ್‌ನ ಪರಿಷ್ಕೃತ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಶನಿವಾರ ಬಿಡುಗಡೆ ಮಾಡಿದೆ. ಜುಲೈ 30ರಂದು ಹೊರಡಿಸಿದ್ದ ರ್‍ಯಾಂಕಿಂಗ್ ಪಟ್ಟಿ ಮತ್ತು ಈಗಿನ ಪರಿಷ್ಕೃತ ಪಟ್ಟಿಯಲ್ಲಿ ಮೊದಲ 500 ರ್‍ಯಾಂಕಿಂಗ್‌ನಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಅವರು, ಹೋದ ವರ್ಷವೇ ದ್ವಿತೀಯ ಪಿಯುಸಿ ತೇರ್ಗಡೆ ಹೊಂದಿ ಈ ವರ್ಷವೂ ಸಿಇಟಿ ಬರೆದಿದ್ದ 24 ಸಾವಿರ ಅಭ್ಯರ್ಥಿಗಳು 2021ರಲ್ಲಿ ಗಳಿಸಿದ್ದ ಅಂಕಗಳಲ್ಲಿ ಶೇಕಡ 6ರಷ್ಟು ಅಂಕಗಳನ್ನು ಕಡಿತಗೊಳಿಸಿದ ನಂತರ ಆ ವರ್ಷದ ಅಂಕಗಳ ಶೇಕಡ 50ರಷ್ಟು ಮತ್ತು ಸಿಇಟಿಯಲ್ಲಿ ಪಡೆದ ಅಂಕಗಳ ಶೇಕಡ 50ರಷ್ಟನ್ನು ಪರಿಗಣಿಸಿ ಈ ಪರಿಷ್ಕೃತ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ಇದರಲ್ಲಿ ಹೋದ ವರ್ಷದ 14 ವಿದ್ಯಾರ್ಥಿಗಳು ಮಾತ್ರ 500ರಿಂದ 1,000ನೇ ರ್‍ಯಾಂಕ್ ಮಧ್ಯೆ ಸ್ಥಾನ ಪಡೆದಿದ್ದಾರೆ ಎಂದು ವಿವರಿಸಿದರು.

ಹಾಗೆಯೇ, 501ರಿಂದ 10,000ನೇ ರ್‍ಯಾಂಕಿಂಗ್‌ನಲ್ಲಿ ಹೋದ ವರ್ಷದ 2,063 ಅಭ್ಯರ್ಥಿಗಳು ಮತ್ತು 22,022 ಅಭ್ಯರ್ಥಿಗಳು 10,001ದಿಂದ  1 ಲಕ್ಷದವರೆಗಿನ ರ್‍ಯಾಂಕಿಂಗ್‌ನಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಈ ಪರಿಷ್ಕೃತ ಪಟ್ಟಿಯು ಎಂಜಿನಿಯರಿಂಗ್, ಕೃಷಿ, ಯೋಗ, ನ್ಯಾಚುರೋಪತಿ ಕೋರ್ಸುಗಳಿಗೆ ಮಾತ್ರ ಅನ್ವಯವಾಗುತ್ತದೆ. ವೆಟರ್ನರಿ ಮತ್ತು ಫಾರ್ಮಸಿ ಕೋರ್ಸುಗಳಿಗೆ ಈ ಹಿಂದೆ ನೀಡಿರುವಂತೆ ಸಿಇಟಿ ಅಂಕಗಳನ್ನು ಮಾತ್ರ ಪರಿಗಣಿಸಿ ರ್‍ಯಾಂಕಿಂಗ್ ನಿರ್ಧರಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

2021ರಲ್ಲಿ ಕೊರೋನ ಹಿನ್ನೆಲೆಯಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪ್ರಥಮ ಪಿಯುಸಿ ಅಂಕಗಳನ್ನು ಪರಿಗಣಿಸಿ, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳನ್ನು ಪರೀಕ್ಷೆ ನಡೆಸದೆ ತೇರ್ಗಡೆಗೊಳಿಸಲಾಗಿತ್ತು. ಬಳಿಕ, ದ್ವಿತೀಯ ಪಿಯುಸಿ ಅಂಕಗಳನ್ನು ಮಾತ್ರ ಪರಿಗಣಿಸಿ ಅವರಿಗೆ ವೃತ್ತಿಪರ ಕೋರ್ಸುಗಳಿಗೆ ಪ್ರವೇಶ ಕೊಡಲಾಗಿತ್ತು. ಅಂಥವರ ಪೈಕಿ 24 ಸಾವಿರ ವಿದ್ಯಾರ್ಥಿಗಳು ಈ ವರ್ಷವೂ ಸಿಇಟಿ ಬರೆದಿದ್ದರು. ಇವರೆಲ್ಲ, ತಮ್ಮ ಸಿಇಟಿ ಅಂಕವನ್ನೂ ಪರಿಗಣಿಸಬೇಕೆಂದು ಕೋರಿ ಹೈಕೋರ್ಟಿನ ಮೆಟ್ಟಿಲು ಹತ್ತಿದ್ದನ್ನು ಇಲ್ಲಿ ಸ್ಮರಿಸಬಹುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X