ಉಡುಪಿ ಜಿಲ್ಲಾ ಪ.ಪೂ.ಕಾಲೇಜು ಹ್ಯಾಂಡ್‌ಬಾಲ್ ಪಂದ್ಯಾಟಕ್ಕೆ ಚಾಲನೆ

ಉಡುಪಿ, ಅ.1: ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಹಾಗೂ ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜುಗಳ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಅಂತರ್ ಕಾಲೇಜು ಹ್ಯಾಂಡ್‌ಬಾಲ್ ಪಂದ್ಯಾಟವನ್ನು ಅದ ಮಾರು ಮಠದ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ಆಡಳಿತಾಧಿಕಾರಿ ಡಾ.ಎ.ಪಿ.ಭಟ್ ಶನಿವಾರ ಉದ್ಘಾಟಿಸಿದರು.
ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದ ಡಾ.ಎ.ಪಿ. ಭಟ್,ವಿದ್ಯಾರ್ಥಿಗಳು ಕ್ರೀಡಾಸ್ಪೂರ್ತಿಯನ್ನು ಮೈಗೂಡಿಸಿಕೊಂಡಾಗ ಜೀವನದಲ್ಲಿ ಯಶಸ್ಸು ಸಾಧ್ಯ ಎಂದರು.
ಉಡುಪಿ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಾರುತಿ, ಪೂರ್ಣಪ್ರಜ್ಞ ಪ.ದವಿ ಪೂರ್ವ ಕಾಲೇಜು ಆಡಳಿತ ಮಂಡಳಿ ಗೌರವ ಕಾರ್ಯದರ್ಶಿ ಡಾ. ಶಶಿಕಿರಣ್ ಉಮಾಕಾಂತ್ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆಯ ತಾಲೂಕು ಕ್ರೀಡಾ ಸಂಯೋಜಕ ಸತೀಶ್ ಹೆಗ್ಡೆ, ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜು ದೈಹಿಕ ಶಿಕ್ಷಣ ಉಪನ್ಯಾಸಕ ಸಂಘದ ಅಧ್ಯಕ್ಷ ಜೀವನ್ ಕುಮಾರ್ ಶೆಟ್ಟಿ, ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರತಿಮಾ ಬಾಳಿಗಾ ಉಪಸ್ಥಿತರಿದ್ದರು.
ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಮಂಜುನಾಥ ಜೋಗಿ ವಂದಿಸಿ ಕನ್ನಡ ಉಪನ್ಯಾಸಕ ರಮಾನಂದ ರಾವ್ ಕಾರ‌್ಯಕ್ರಮ ನಿರೂಪಿಸಿದರು.







