ಉಡುಪಿ: ಅ.2ರಂದು ಸ್ವಚ್ಛತಾ ಆಂದೋಲನಕ್ಕೆ ಚಾಲನೆ

ಸಚಿವ ಕೋಟ ಶ್ರೀನಿವಾಸ ಪೂಜಾರಿ
ಉಡುಪಿ, ಅ.1: ಗಾಂಧಿ ಜಯಂತಿ ಪ್ರಯುಕ್ತ ರಾಜ್ಯದ ಎಲ್ಲ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ವಸತಿ ಶಾಲೆ ಮತ್ತು ವಸತಿ ನಿಲಯಗಳಲ್ಲಿ ಸ್ವಚ್ಛತಾ ಆಂದೋಲನ ಕಾರ್ಯಕ್ರಮ ನಡೆಯಲಿದ್ದು, ಜಿಲ್ಲೆಯಲ್ಲಿ ಅ.2ರಂದು ಬೆಳಗ್ಗೆ 8.30ಕ್ಕೆ ನಗರದ ಬನ್ನಂಜೆ ಸಮಾಜ ಕಲ್ಯಾಣ ಇಲಾಖೆಯ ಪೋಸ್ಟ್ ಮೆಟ್ರಿಕ್ ಬಾಲಕಿಯರ ವಸತಿ ನಿಲಯದಲ್ಲಿ ರಾಜ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಚಾಲನೆ ನೀಡಲಿದ್ದಾರೆ.
ಕಾರ್ಯಕ್ರಮದಲ್ಲಿ ಶಾಸಕ ರಘುಪತಿ ಭಟ್ ಮತ್ತಿತರ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Next Story





