Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಉಪ್ಪಿನಂಗಡಿ: ಆಶೀರ್ವಾದ ಮಾಡಲು ಹೋಗಿ...

ಉಪ್ಪಿನಂಗಡಿ: ಆಶೀರ್ವಾದ ಮಾಡಲು ಹೋಗಿ ಮಾಂಗಲ್ಯ ಸರ ಕಳೆದುಕೊಂಡ ಮಹಿಳೆ!

ವಾರ್ತಾಭಾರತಿವಾರ್ತಾಭಾರತಿ1 Oct 2022 11:10 PM IST
share
ಉಪ್ಪಿನಂಗಡಿ: ಆಶೀರ್ವಾದ ಮಾಡಲು ಹೋಗಿ ಮಾಂಗಲ್ಯ ಸರ ಕಳೆದುಕೊಂಡ ಮಹಿಳೆ!

ಉಪ್ಪಿನಂಗಡಿ: ಚಿನ್ನಾಭರಣದ ಅಂಗಡಿ ತೆರೆಯುತ್ತಿದ್ದೇವೆ. ಆಶೀರ್ವಾದ ಮಾಡಿ ಎಂದು ವಿನಂತಿಸುತ್ತಾ, ಮಂಕುಬೂದಿ ಎರಚಿ ಅರ್ಚಕರ ಪತ್ನಿಯ ಕತ್ತಿನಲ್ಲಿದ್ದ ಮೂರುವರೆ ಪವನ್ ತೂಕದ ಮಾಂಗಲ್ಯ ಸರವನ್ನು ಎಗರಿಸಿದ ಘಟನೆ  ಉಪ್ಪಿನಂಗಡಿಯಲ್ಲಿ ನಡೆದಿದೆ.

ಉಪ್ಪಿನಂಗಡಿಯ ರಥಬೀದಿಯಲ್ಲಿರುವ ಹನುಮಾನ್ ದೇವಾಲಯಕ್ಕೆ ಹೋಗುವ ದಾರಿಯಲ್ಲಿನ ಅರ್ಚಕರ ಮನೆ ಬಾಗಿಲಿಗೆ ಬಂದ ಹಿಂದಿ ಭಾಷಿಗ ವ್ಯಕ್ತಿಯೋರ್ವ ಮನೆಯಲ್ಲಿದ್ದ ಅರ್ಚಕರ ಪತ್ನಿಯಲ್ಲಿ ತನಗೆ ಸೂತಕವಿರುವುದರಿಂದ ದೇವಾಲಯಕ್ಕೆ ಹೋಗಲಾಗುವುದಿಲ್ಲ.  ದೇವರಿಗೆ  ಹರಕೆ ರೂಪದಲ್ಲಿ ತನ್ನ ಪರವಾಗಿ ಮುನ್ನೂರು ರೂಪಾಯಿ ಸಲ್ಲಿಸಿ ಎಂದು ತಲಾ 100 ರೂಪಾಯಿಯ 3 ನೋಟುಗಳನ್ನು ನೀಡಿ, ನಿಮ್ಮ ಮಾಂಗಲ್ಯ ಸರವನ್ನು ಅದಕ್ಕೆ ಸ್ಪರ್ಶಿಸಿ ಹಣವನ್ನು ಹಿಂತಿರುಗಿಸಲು  ವಿನಂತಿಸುತ್ತಾನೆ. ಈ ವೇಳೆ ನನ್ನ ಮಾಂಗಲ್ಯ ಸರವನ್ನು ನಿಮ್ಮ ನೋಟಿಗೆ ಯಾಕೆ ಸ್ಪರ್ಶಿಸಬೇಕೆಂದು? ಅರ್ಚಕರ ಪತ್ನಿ  ಪ್ರಶ್ನಿಸಿದ್ದು,  ಅದಕ್ಕೆ ನಾನು ಊರಿನಲ್ಲಿ ಚಿನ್ನಾಭರಣದ ಅಂಗಡಿಯನ್ನು ತೆರೆಯಲಿದ್ದೇನೆ. ಪತಿವ್ರತಾ ಮಹಿಳೆಯ ಮಾಂಗಲ್ಯ ಸರವನ್ನು ಸ್ಪರ್ಶಿಸಿದ ಹಣವನ್ನು ಅಂಗಡಿಯೊಳಗಿರಿಸಲು ಸೂಚಿಸಿದ್ದಾರೆ. ಅದಕ್ಕಾಗಿ ನಿಮ್ಮ ಮಾಂಗಲ್ಯ ಸರವನ್ನು ಈ ನೋಟಿಗೆ ಸ್ಪರ್ಶಿಸಿ ನೀಡಿ ಎಂದು ವಿನಂತಿಸುತ್ತಾನೆ. ಆತನ ಮಾತನ್ನು ಸತ್ಯವೆಂದು ನಂಬಿದ ಮಹಿಳೆ ತನ್ನ ಮಾಂಗಲ್ಯವನ್ನು ಹಣಕ್ಕೆ ಸ್ಪರ್ಶಿಸುತ್ತಾರೆ. ಈ ವೇಳೆ ಆತ, ಆ ರೀತಿಯಲ್ಲ. ಮಾಂಗಲ್ಯ ಸರವನ್ನು ಸಂಪೂರ್ಣ ತೆಗೆದು ಅದನು ಒಮ್ಮೆ ನೋಟಿನಲ್ಲಿಟ್ಟು ಕೊಡಿ ಎಂದು ತಿಳಿಸಿದಾಗ ಮಹಿಳೆಯು  ಅದೇ ರೀತಿ ಮಾಡಿ ನೋಟನ್ನು ಆತನ ಕೈಯಲ್ಲಿ ನೀಡುತ್ತಾರೆ.

ಈ ವೇಳೆ ಸ್ಥಳದಲ್ಲಿ ಏನಾಗುತ್ತಿದೆ ಎಂದು ಅರಿವಾಗುವಷ್ಟರಲ್ಲಿ ಆ ವ್ಯಕ್ತಿ ಸ್ಥಳದಿಂದ ನಿರ್ಗಮಿಸಿರುತ್ತಾನೆ. ಒಂದಷ್ಟು ಹೊತ್ತು ಕಳೆದ ಮೇಲೆ ವಾಸ್ತವ ಸ್ಥಿತಿಗೆ ಬಂದ ಮಹಿಳೆ ತನ್ನ ಮಾಂಗಲ್ಯ ಸರ ಕೊರಳಲ್ಲಿ ಇಲ್ಲದಿರುವುದನ್ನು ಅರಿತು ಬೊಬ್ಬೆ ಹೊಡೆದಾಗಲೇ ಅಪರಿಚಿತ ವ್ಯಕ್ತಿ ಮಂಕುಬೂದಿ ಎರಚಿ ತನ್ನ ಮಾಂಗಲ್ಯ ಸರ ಎಗರಿಸಿದ ಪ್ರಕರಣ ಬೆಳಕಿಗೆ ಬಂದಿದೆ. 

ಘಟನೆಗೆ ಸಂಬಂಧಿಸಿ  ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಪೊಲೀಸರು ಸ್ಥಳದಲ್ಲಿನ  ಸಿಸಿ ಕ್ಯಾಮಾರಗಳ ಆಧಾರದಲ್ಲಿ ಮಹತ್ವದ ಮಾಹಿತಿಯನ್ನು ಕಲೆ ಹಾಕಿದ್ದಾರೆ. ವಂಚಕರನ್ನು ಪತ್ತೆ ಹಚ್ಚುವ ವಿಶ್ವಾಸವನ್ನು ಎಸೈ ರಾಜೇಶ್ ಕೆ.ವಿ. ವ್ಯಕ್ತಪಡಿಸಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X